ಎಲ್ಲ ಜಿಲ್ಲೆಗಳಲ್ಲೂ “ಅಂತ್ಯೋದಯ’ ಜಾರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Team Udayavani, Jan 11, 2022, 7:40 AM IST

ಎಲ್ಲ ಜಿಲ್ಲೆಗಳಲ್ಲೂ “ಅಂತ್ಯೋದಯ’ ಜಾರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಿಗಲಿರುವ ವಿವಿಧ ಸೌಲಭ್ಯಗಳಿಗೆ ಗ್ರಾ. ಪಂ. ಮೂಲಕವೇ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುವ “ಅಂತ್ಯೋದಯ’ ಕಾರ್ಯಕ್ರಮವನ್ನು ಎಲ್ಲ ಜಿಲ್ಲೆಗಳಲ್ಲೂ ಜಾರಿಗೆ ತರಲಿದ್ದೇವೆ ಎಂದು ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿಯನ್ನು ಜನಪ್ರತಿನಿಧಿಗಳು ಜನ ಸಾಮಾನ್ಯರಿಗೆ ತಲುಪಿಸಲಿದ್ದಾರೆ. ಜನರು ಈ ಸೌಲಭ್ಯಗಳಿಗೆ ಗ್ರಾ.ಪಂ. ಮೂಲಕವೇ ಅರ್ಜಿ ಸಲ್ಲಿಸಬಹುದಾದ ವ್ಯವಸ್ಥೆಯನ್ನು ಆರಂಭಿಸಲಿದ್ದೇವೆ. ಇದರಿಂದ ಮಧ್ಯವರ್ತಿಗಳ ಸಮಸ್ಯೆ ತಪ್ಪಲಿದೆ ಹಾಗೂ ಎಲ್ಲರಿಗೂ ಯೋಜನೆಯ ಲಾಭ ಸಿಗಲಿದೆ ಎಂದು ಹೇಳಿದರು.

ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆಗಳು ಯಾವ ರೀತಿಯಲ್ಲಿ ಅನುಷ್ಠಾನ ಮಾಡಲಾಗಿದೆ ಎಂಬುದರ ಪ್ರಗತಿ ಪರಿಶೀಲನೆ ಮಾಡಲಾಗಿದೆ. ವಿವಿಧ ಇಲಾಖೆಗಳಿಗೆ ಮೀಸಲಿಟ್ಟ ಅನುದಾನದ ಬಳಕೆ ಆಗುತ್ತಿದೆಯೇ ಎಂಬುದರ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ ಎಂದರು.

ಅಕ್ರಮದ ತನಿಖೆ
ಇಲಾಖೆಯ ಅಧೀನದ ವಸತಿ ನಿಲಯಗಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥ ಪೂರೈಕೆ ಮಾಡುತ್ತಿರುವ ಹಾಗೂ ಟೆಂಡರ್‌ ಅಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ತನಿಖೆ ನಡೆಸುತ್ತಿದ್ದೇವೆ. ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ದೇವರಿಗೇ ಪೊಲೀಸ್‌ ಸಮವಸ್ತ್ರ! ಕಾಶಿಯ ಕೊತ್ವಾಲ ಬಾಬಾ ಕಾಲ ಭೈರವನಿಗೆ ಖಾಕಿ ಸಮವಸ್ತ್ರ

ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕ್ರೈಸ್‌ ಅಧೀನದ ಸುಮಾರು 1,500 ಮೆಟ್ರಿಕ್‌ ಅನಂತರ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆಗೆ ಅನುಕೂಲ ಆಗುವಂತೆ ಕರಾಟೆ ತರಬೇತಿ ನೀಡಲಿದ್ದೇವೆ. ತರಬೇತುದಾರರ ನಿಯೋಜನೆ ಆಗಿದೆ. ಶೀಘ್ರವೇ ತರಬೇತಿ ಆರಂಭಿಸಲಿದ್ದೇವೆ. ವಿದ್ಯಾರ್ಥಿನಿಯರಿಗೆ ಕರಾಟೆ ಅಭ್ಯಾಸದ ಸಮವಸ್ತ್ರವನ್ನು ನೀಡಲಾಗುವುದು ಹೇಳಿದರು.

ಭೋವಿ ಸಮುದಾಯದ ಮುಖಂಡರೊಂದಿಗೆ ಚರ್ಚೆ
ಕಲ್ಲು ಕಡಿಯುವುದನ್ನೇ ಕುಲಕಸುಬು ಮಾಡಿಕೊಂಡಿರುವ ಭೋವಿ ಸಮುದಾಯದವರಿಗೆ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಎಲ್ಲ ತಹಶೀಲ್ದಾರ್‌ ಹಂತದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಿ ಅಧ್ಯಯನ ವರದಿಯನ್ನು ಶೀಘ್ರ ಜಿಲ್ಲಾಧಿಕಾರಿಗಳು ಪಡೆದು ಸರಕಾರಕ್ಕೆ ಸಲ್ಲಿಸಲು ಸೂಚಿಸಲಾಗಿದೆ. ಸರಕಾರದಿಂದ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲಿದ್ದೇವೆ ಎಂದು ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.