ಮಣಿಪಾಲ ಹ್ಯಾಕಥಾನ್ ಉದ್ಘಾಟನೆ
Team Udayavani, Oct 12, 2019, 5:44 AM IST
ಉಡುಪಿ: ಮಣಿಪಾಲ ಎಂಐಟಿ ಸಭಾಂಗಣದಲ್ಲಿ ಆಯೋಜಿಸಲಾದ ಮಣಿಪಾಲ ಹ್ಯಾಕಥಾನ್ ಮೊದಲ ಆವೃತ್ತಿಯನ್ನು ಶುಕ್ರವಾರ ಜಿಲ್ಲಾಧಿಕಾರಿ ಜಿ. ಜಗದೀಶ್ ಉದ್ಘಾಟಿಸಿದರು.
ಎಂಐಟಿ ವಿದ್ಯಾರ್ಥಿ ಸಂಘಟನೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ವಿದ್ಯಾರ್ಥಿಗಳಲ್ಲಿ ಸಹಜವಾಗಿ ಶೋಧನ ಪ್ರವೃತ್ತಿ ಬೆಳೆಯುತ್ತದೆ ಎಂದರು. ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆ, ಶೋಧನ ಪ್ರವೃತ್ತಿಯನ್ನು ಹೊರಗೆ ಎಳೆಯುವುದು ಇದರ ಉದ್ದೇಶ. ತಂತ್ರಜ್ಞಾನ ಗ್ರಾಮೀಣ ಜನಜೀವನದ ಮತ್ತು ಮಹಿಳಾ ಸಶಕ್ತೀಕರಣಕ್ಕೆ ಕಾರಣವಾಗಬೇಕಾದರೆ ಹೊಸ ಹೊಸ ಸಂಶೋಧನೆಗಳು ನಡೆಯಬೇಕಾಗಿದೆ ಎಂದು ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಹೇಳಿದರು. ಎಂಐಟಿ ಜಂಟಿ ನಿರ್ದೇಶಕ ಡಾ| ಬಿ.ಎಚ್.ವಿ. ಪೈ ಉಪಸ್ಥಿತರಿದ್ದರು.
ಸಾಫ್ಟ್ವೇರ್ ಸಮಸ್ಯೆಗಳಿಗೆ ಪರಿಹಾರ
ಮಣಿಪಾಲ ಹ್ಯಾಕಥಾನ್ ಸಾಫ್ಟ್ವೇರ್ ಸಮಸ್ಯೆಗಳಿಗೆ ಪರಿಹಾರ ಕಂಡುಹುಡುಕುವ ಕಾರ್ಯಕ್ರಮವಾಗಿದೆ. ಇದು ಮೇಯಲ್ಲಿ ಆರಂಭಗೊಂಡಿತ್ತು. ಸ್ಮಾರ್ಟ್ ಇಂಡಿಯ ಹ್ಯಾಕತಾನ್‌ನಿಂದ ಪ್ರೇರಣೆಗೊಂಡ ಮಣಿಪಾಲ ಹ್ಯಾಕಥಾನ್ ಹೊಸ ಹೊಸ ಸಾಫ್ಟ್ ವೇರ್ ಪ್ರೋಗ್ರಾಮಿಂಗ್‌ಗಳನ್ನು ಅಳವಡಿಸುವ ಮೂಲಕ ಸಾಮಾಜಿಕ ಸಮಸ್ಯೆಗಳಿಗೆ ಉತ್ತರ ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದೆ. ದೇಶಾದ್ಯಂತ 1,500 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಇದರಲ್ಲಿ 30 ತಂಡಗಳ 125 ಮಂದಿ ಮಣಿಪಾಲದಲ್ಲಿ 36 ಗಂಟೆಗಳ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದರಲ್ಲಿ ಹೈದರಾಬಾದ್‌ನ ಬಿಟ್ಸ್, ವೆಲ್ಲೂರಿನ ವಿಐಟಿ, ಚೆನ್ನೈ ವಿಐಟಿ, ಪುಣೆಯ ಪಿಕ್ಟ್ ಮೊದಲಾದ ಕಡೆಗಳಿಂದ ಬಂದ ತಂಡಗಳಿವೆ.
ಮಣಿಪಾಲ ಹ್ಯಾಕಥಾನ್ ಕಾರ್ಯಕ್ರಮದ ಉದ್ಘಾಟನ ಸಮಾರಂಭದಲ್ಲಿ ಜಿಲ್ಲಾಧಿಕಾರಿ
ಜಿ. ಜಗದೀಶ್, ಡಾ| ಎಚ್.ಎಸ್. ಬಲ್ಲಾಳ್, ಡಾ| ಬಿ.ಎಚ್.ವಿ. ಪೈ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.