ವಿದ್ಯಾರ್ಥಿದೆಸೆಯಲ್ಲೇ ಸಂಶೋಧನೆಗೆ ಕರೆ
ಮಣಿಪಾಲದಲ್ಲಿ ಇ ಪೋಸ್ಟರ್ ಸಮ್ಮೇಳನ ಉದ್ಘಾಟನೆ
Team Udayavani, Oct 5, 2019, 5:11 AM IST
ಉಡುಪಿ: ಬೇರೆ ಬೇರೆ ಹಂತಗಳ ವಿದ್ಯಾರ್ಥಿಗಳು ಸಂಶೋಧನೆಯನ್ನು ಶೈಕ್ಷಣಿಕ ವೃತ್ತಿಯಲ್ಲಿ ಅಗತ್ಯವಾಗಿ ಮತ್ತು ಸ್ವಯಂ ಪ್ರೇರಿತರಾಗಿ ಅಳವಡಿಸಿಕೊಳ್ಳಬೇಕು ಎಂದು ನಿಟ್ಟೆ ಜ| ಕೆ.ಎಸ್. ಹೆಗ್ಡೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿರ್ದೇಶಕ ಡಾ| ಕೆ. ಶಂಕರನ್ ಹೇಳಿದರು.
ಮಣಿಪಾಲ ಮಾಹೆ ವಿ.ವಿ.ಯ ವಾಣಿಜ್ಯ ಶಾಸ್ತ್ರ ವಿಭಾಗ ಕೆಎಂಸಿ ಡಾ| ಟಿಎಂಎ ಪೈ ಸಭಾಂಗಣದಲ್ಲಿ ಆಯೋಜಿಸಿದ ಒಂದು ದಿನದ ಅಂತರ್ ವಿಭಾಗಗಳ ಅಂತಾರಾಷ್ಟ್ರೀಯ ಮಟ್ಟದ ಇ ಪೋಸ್ಟರ್ (ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಭಿತ್ತಿಚಿತ್ರ) ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು ಸಂಶೋಧನೆಯಿಂದ ವ್ಯಕ್ತಿ ತಮ್ಮ ಸುತ್ತಮುತ್ತಲಿನ ಜಗತ್ತನ್ನು ನೋಡುವ ದೃಷ್ಟಿಕೋನ ಬದಲಾಗುತ್ತದೆ ಎಂದರು.
ಮಾಹೆ ಸಹಕುಲಪತಿ ಡಾ| ಪಿಎಲ್‌ಎನ್‌ಜಿ ರಾವ್ ಗೌರವ ಅತಿಥಿಗಳಾಗಿ ಪಾಲ್ಗೊಂಡು ಸಂಶೋಧನೆಯು ಮಾಹೆಯನ್ನು ಬೇರೆ ವಿ.ವಿ.ಗಳಿಗಿಂತ ಭಿನ್ನವಾಗಿ ಮತ್ತು ಮುಂಚೂಣಿಯಲ್ಲಿರುವಂತೆ ಮಾಡಿದೆ. ವಿದ್ಯಾರ್ಥಿ ಸಂಶೋಧಕರನ್ನು ಎಳೆವೆಯಲ್ಲಿ ಸಂಶೋಧನೆ ಯತ್ತ ಉತ್ತೇಜಿಸಬೇಕು ಎಂದು ಕರೆ ನೀಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ| ಸಂದೀಪ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಆಯೋಜಕರಾದ ಪ್ರೊ| ಅಂಕಿತಾ ಶೆಟ್ಟಿ ಸ್ವಾಗತಿಸಿ ಪ್ರೊ| ಊರ್ಮಿಳಾ ವಂದಿಸಿದರು. ಕೋಮಲ್ ಜೆನಿಫರ್ ಡಿ’ಸೋಜಾ ಕಾರ್ಯಕ್ರಮ ನಿರ್ವಹಿಸಿದರು. ಸಮ್ಮೇಳನದಲ್ಲಿ ಆಡಳಿತ ನಿರ್ವಹಣೆ, ವಾಣಿಜ್ಯ, ಆರೋಗ್ಯ ನಿರ್ವಹಣೆ, ಎಂಜಿನಿಯರಿಂಗ್- ತಂತ್ರಜ್ಞಾನ, ವ್ಯವಹಾರ ವಿಶ್ಲೇಷಣೆ ಈ ನಾಲ್ಕು ವಿಷಯಗಳನ್ನು ಅಳವಡಿಸಲಾಗಿದೆ. ನೆದರ್‌ಲಂಡ್, ಫ್ರಾನ್ಸ್, ಯುಎಇ, ಅಫ್ಘಾನಿಸ್ಥಾನ ಸೇರಿದಂತೆ ಜಗತ್ತಿನ ವಿವಿಧ ವಿ.ವಿ.ಗಳಿಂದ 150 ವಿದ್ಯಾರ್ಥಿ ಸಂಶೋಧಕರು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.