ಹೆಬ್ರಿ : ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ
Team Udayavani, Jan 1, 2021, 5:09 PM IST
ಸಾಂದರ್ಭಿಕ ಚಿತ್ರ
ಹೆಬ್ರಿ : ಖಾಸಗಿ ಕಾಲೇಜಿನ ಉಪನ್ಯಾಸಕರಾಗಿ ಹೆಬ್ರಿ ಬಡ ಗುಡ್ಡೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ವೆಂಕಟೇಶ್ ಎಂಬುವರು ಶುಕ್ರವಾರ ಬೆಳಿಗ್ಗೆ ಮನೆಯ ಕೊಠಡಿಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ವೆಂಕಟೇಶ್ ಮೂಲತಃ ರೋಣದ ನಿವಾಸಿ. ಶಿರಸಿ ಮೂಲದ ಯುವತಿಯನ್ನು ಪ್ರೀತಿಸಿ 5 ವರ್ಷದ ಹಿಂದೆ ವಿವಾಹವಾಗಿದ್ದು, ಈ ವಿಷಯ ಯುವತಿ ಮನೆಗೆ ಗೊತ್ತಿಲ್ಲ ಎಂದು ತಿಳಿದು ಬಂದಿದೆ.
ಮೃತ ವೆಂಕಟೇಶ್ ಪತ್ನಿ ಹೆಬ್ರಿಯ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ದುಡಿಯುತ್ತಿದ್ದು, ಶುಕ್ರವಾರ ಕಾಲೇಜಿಗೆ ಹಾಜರಾಗಿದ್ದ ವೆಂಕಟೇಶ್ ಬೆಳಿಗ್ಗೆ ಈಗ ಬರುತ್ತೇನೆ ಎಂದು ಮನೆಗೆ ಹೋಗಿ ಹೆಂಡತಿಗೆ ಕೂಡಲೆ ಬರುವಂತೆ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ತರಗತಿಯಲ್ಲಿ ಇದ್ದ ಹೆಂಡತಿ ತಡವಾಗಿ ಮೊಬೈಲ್ ನೋಡಿ ಕೂಡಲೇ ಮನೆಗೆ ಹೋಗಿ ನೋಡುವಾಗ ಆತ್ಮಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಆತಿಥ್ಯ ಬಡಿಸಿ ನಶಿಸುತ್ತಿರುವ ನಂಜನಗೂಡು ರಸಬಾಳೆ ಉಳಿದೀತೇ?
ವೆಂಕಟೇಶ್ ಈ ಹಿಂದೆ ಮೂಡಬಿದಿರೆಯಲ್ಲಿ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ದುಡಿಯುತ್ತಿದ್ದರು. ಆದರೆ ಲಾಕ್ ಡೌನ್ ಸಮಯದಲ್ಲಿ ಕಳೆದ ಮಾಚ್೯ ನಿಂದ ಕೆಲಸವಿಲ್ಲದೆ ಹೆಬ್ರಿಯ ಬಾಡಿಗೆ ಮನೆಯಲ್ಲಿದ್ದರು .ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಸ್ಥಳಕ್ಕೆ ಹೆಬ್ರಿ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ .ಆತ್ಮಹತ್ಯೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.