ವಲಸೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ವಾಹನ ವಶಕ್ಕೆ
Team Udayavani, May 24, 2021, 4:53 PM IST
ಸಾಂದರ್ಭಿಕ ಚಿತ್ರ
ಉಡುಪಿ: ವಲಸೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಕ್ರೂಸರ್ ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ರವಿವಾರ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಪಿ.ಅವರು ಸಿಬಂದಿಯೊಂದಿಗೆ ಮುಂಜಾಗ್ರತಾ ಕ್ರಮ ಹಾಗೂ ಪ್ರಯಾಣಿಕರ ವಾಹನ ಪರಿಶೀಲನೆ ಕರ್ತವ್ಯದಲ್ಲಿದ್ದಾಗ ವಲಸೆ ಕಾರ್ಮಿಕರನ್ನು ಕ್ರೂಸರ್ ವಾಹನದಲ್ಲಿ ದುಪ್ಪಟ್ಟು ಹಣ ಪಡೆದುಕೊಂಡು ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಗುಂಪಾಗಿ ಬಾಗಲಕೋಟೆ ಜಿಲ್ಲೆಗೆ ಕರೆದುಕೊಂಡು ಹೋಗಲಾಗುತ್ತಿತ್ತು.
ಈ ಬಗ್ಗೆ ಮಾಹಿತಿ ಪಡೆದ ಅವರು ಸ್ಥಳಕ್ಕೆ ಹೋದಾಗ ಪ್ರಯಾಣಿಕರು ಅಲ್ಲಿಂದ ಓಡಿ ಹೋಗಿದ್ದಾರೆ. ವಾಹನದ ಮಾಲಕ ಬಸವರಾಜ ಬಸಲಿಂಗಪ್ಪ ಅಂಗಡಿ ಕೋವಿಡ್-19 ರ ಬಗ್ಗೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ ಸರಕಾರ ಹಾಗೂ ಉಡುಪಿ ಜಿಲ್ಲಾಧಿಕಾರಿಯವರ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯ ಸ್ಟೋಟ ಮತ್ತು ಹರಡುವುದನ್ನು ತಡೆಗಟ್ಟಲು ನಿರ್ಲಕ್ಷ ವಹಿಸಿದ್ದಾನೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.