ಬ್ರಹ್ಮಾವರ: ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
Team Udayavani, Jul 10, 2021, 4:26 PM IST
ಉಡುಪಿ: ಎರಡು ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಬ್ರಹ್ಮಾವರದ ಬೈಕಾಡಿ ಗ್ರಾಮದ ಕಾಮೇಶ್ವರ ದೇವಸ್ಥಾನ ವಠಾರದ ನಿವಾಸಿ ಶ್ರೀಧರ ಮಯ್ಯ (60) ಮೃತದೇಹ ಇಂದು ಬೆಳಿಗ್ಗೆ ಸಂತೆಕಟ್ಟೆ ಸಮೀಪದ ಉಪ್ಪೂರು ನದಿಯಲ್ಲಿ ಪತ್ತೆಯಾಗಿದೆ.
ಇಂದು ಬೆಳಿಗ್ಗೆ ಉಪ್ಪೂರು ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಮೃತದೇಹವನ್ನು ಮೇಲೆತ್ತಿದ್ದಾರೆ. ಮೃತದೇಹವನ್ನು ಶ್ರೀಧರ ಮಯ್ಯ ಅವರದೆಂದು ಅವರ ಪತ್ನಿ ಹಾಗೂ ಪುತ್ರಿ ಗುರುತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕೋಟೆ ಗ್ರಾಮ ಪಂಚಾಯತ್ ಸದಸ್ಯೆ ಕ್ಯಾನ್ಸರ್ ಗೆ ಬಲಿ
ಶ್ರೀಧರ ಮಯ್ಯ ಜುಲೈ 8ರಂದು ಸಂಜೆ ಕೋರ್ಟ್ ಕೇಸಿನ ವಿಚಾರವಾಗಿ ಚಿಕ್ಕಮಗಳೂರಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ತೆರಳಿದ್ದರು. ಅವರು ತೆರಳಿದ ಬಳಿಕ ಮಯ್ಯ ಬರೆದಿದ್ದಾರೆ ಎನ್ನಲಾದ ರಿಜಿಸ್ಟರ್ಡ್ ಪತ್ರವೊಂದು ದೇವಸ್ಥಾನಕ್ಕೆ ಬಂದಿದ್ದು, ದೇವಸ್ಥಾನದ ಅಧ್ಯಕ್ಷರಿಗೆ ಬರೆದ ಆ ಪತ್ರದಲ್ಲಿ “ನನಗೆ ತುಂಬಾ ಆರೋಗ್ಯ ಸಮಸ್ಯೆ ಕಾಡುತ್ತಿದೆ. ವಿಪರೀತ ಕಾಲುನೋವು ಹಾಗೂ ವಿಪರೀತ ಬಿಕ್ಕಳಿಕೆಯಿಂದ ಬದುಕಿನಲ್ಲಿ ಜಿಗುಪ್ಸೆಗೊಂಡಿದ್ದು, ಜೀವನವೇ ಬೇಡವೆನಿಸಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಅದರಲ್ಲಿ ಬರೆಯಲಾಗಿತ್ತು. ಈ ಪತ್ರ ಸಿಕ್ಕದ ಕೂಡಲೇ ಮನೆಯವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.