ಉಡುಪಿ: ಅಪರಿಚಿತನಿಂದ ಮಗು ಅಪಹರಣದ ಶಂಕೆ: ದೂರು ದಾಖಲು
Team Udayavani, Jul 11, 2021, 3:12 PM IST
ಸಾಂದರ್ಭಿಕ ಚಿತ್ರ
ಉಡುಪಿ: ಉಡುಪಿಯ ಕರಾವಳಿ ಬೈಪಾಸ್ ಬಳಿಯ ಶೆಡ್‌ವೊಂದರಲ್ಲಿ ವಾಸವಾಗಿರುವ ಬಾಗಲಕೋಟೆ ಮೂಲದ ದಂಪತಿಯ ಮಗುವನ್ನು ವ್ಯಕ್ತಿಯೊಬ್ಬ ಅಪಹರಿಸಿರುವ ಬಗ್ಗೆ ಶಂಕಿಸಲಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ನಾಪತ್ತೆಯಾದ ಮಗುವನ್ನು ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿಯ ಪುತ್ರ ಶಿವರಾಜ್ (2.4 ವರ್ಷ) ಎಂದು ಗುರುತಿಸಲಾಗಿದೆ.
ಭಾರತಿ- ಅರುಣ್‌ಗೆ ಅವಳಿ ಜವಳಿ ಮಕ್ಕಳಿದ್ದು, ಅದರಲ್ಲಿ ಧೀರಜ್ ಎಂಬ ಮಗುವನ್ನು ಊರಿನಲ್ಲೇ ಬಿಟ್ಟು ಶಿವರಾಜ್ ಎಂಬ ಮಗನೊಂದಿಗೆ ಇವರು ಎರಡು ತಿಂಗಳ ಹಿಂದೆ ಉಡುಪಿಗೆ ಬಂದಿದ್ದರು. ಲಾಕ್‌ಡೌನ್ ಸಂದರ್ಭದಲ್ಲಿ ಈ ದಂಪತಿ ಮತ್ತು ಮಗು ಸೇರಿದಂತೆ ಹಲವು ಮಂದಿ ವಲಸೆ ಕಾರ್ಮಿಕರು ಕರಾವಳಿ ಬೈಪಾಸ್ ಬಳಿಯ ಶೆಡ್‌ನಲ್ಲಿ ಮಲಗುತ್ತಿದ್ದರು.
ಇದನ್ನೂ ಓದಿ: ಜು.17ರಿಂದ ತೆರೆಯಲಿದೆ ಶಬರಿಮಲೆ ದೇವಸ್ಥಾನ: ಭಕ್ತರು ಈ ನಿಯಮಗಳನ್ನು ಪಾಲಿಸಲೇಬೇಕು
ಹೀಗೆ ಬಾಗಲಕೋಟೆಯ ಪರ್ಸು ಎಂದು ಹೇಳಿಕೊಂಡು ಬಂದ ವ್ಯಕ್ತಿಯೊಬ್ಬ ಈ ದಂಪತಿಗೆ ಪರಿಚಯವಾಗಿತ್ತು. ಇಂದು ಬೆಳಗ್ಗೆ ಮಗುವನ್ನು ಚಹಾ ಕುಡಿಸಿ ಕರೆದುಕೊಂಡು ಬರುತ್ತೇನೆ ಎಂದು ಹೇಳಿ ಆತ ಮಗುವನ್ನು ಕರೆದು ಕೊಂಡು ಹೋಗಿದ್ದಾನೆ. ಆದರೆ ಆತ ಈವರೆಗೆ ವಾಪಾಸ್ಸು ಬಾರದೆ ಮಗುವಿನೊಂದಿಗೆ ನಾಪತ್ತೆಯಾಗಿದ್ದಾನೆ ಎಂದು ದೂರಲಾಗಿದೆ.
ಆ ವ್ಯಕ್ತಿ ಮಗುವನ್ನು ಅಪಹರಿಸಿಕೊಂಡು ಹೋಗಿರಬಹುದೆಂದು ಭಾರತಿ- ಅರುಣ್ ದಂಪತಿ ದೂರಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.