ಉಡುಪಿ: ಇಂದ್ರಾಳಿಯಲ್ಲಿ ತಾಯಿಗೆ ನಿಂದಿಸಿದಕ್ಕೆ ವ್ಯಕ್ತಿಯ ತಲೆಗೆ ಸೊಂಟೆಯಿಂದ ಹೊಡೆದು ಕೊಲೆ
ಆರೋಪಿಗಳನ್ನು ಬಂಧಿಸಿದ ಪೊಲೀಸರು
Team Udayavani, Jul 21, 2022, 8:40 PM IST
ಉಡುಪಿ: ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಣಿಪಾಲದ ರಾ. ಹೆದ್ದಾರಿ 169A ನಿಂದ ಇಂದ್ರಾಳಿ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ.
ತಮಿಳುನಾಡು ಮೂಲದ ಕುಮಾರ್ (32) ಕೊಲೆಯಾದ ವ್ಯಕ್ತಿ.
ಕುಟ್ಟಿ ಮತ್ತು ನವೀನ್ ಎಂಬುವವರು ಇಂದ್ರಾಳಿ ಬಾರ್ ನಿಂದ ಮದ್ಯಪಾನ ಮಾಡಿ ನಡೆದುಕೊಂಡು ಬರುವಾಗ ಕುಮಾರ್ ಎಂಬುವವನು ಕುಡಿದ ಅಮಲಿನಲ್ಲಿ ನವೀನ್ ಮತ್ತು ಕುಟ್ಟಿಯ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದು, ಮೂವರ ನಡುವೆ ಮಾತಿಗೆ ಮಾತು ಬೆಳೆದಿರುತ್ತದೆ.
ನಂತರ ನವೀನ್ ಮತ್ತು ಕುಟ್ಟಿ ಸೇರಿ ಮರದ ಸೊಂಟೆಯಿಂದ ಕುಮಾರನ ತಲೆಗೆ ಹೊಡೆದಾಗ ಆತನು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಮೃತದೇಹವನ್ನು ಉಡುಪಿ ಅಜ್ಜರ ಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಉಡುಪಿ ನಗರ ಠಾಣಾ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.