ಡಿಸಿಎಂ ಹುದ್ದೆ ಹೆಚ್ಚಳ ನಿರ್ಣಯವಾಗಿಲ್ಲ: ಕಾರಜೋಳ
Team Udayavani, Jan 20, 2020, 1:55 AM IST
ಡಿಸಿಎಂ ಗೋವಿಂದ ಕಾರಜೋಳ ರವಿವಾರ ಪರ್ಯಾಯ ಅದಮಾರು ಶ್ರೀಗಳನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಉಡುಪಿ: ಸರಕಾರದಲ್ಲಿ ಡಿಸಿಎಂ ಹುದ್ದೆ ಹೆಚ್ಚಳದ ಬಗ್ಗೆ ಪಕ್ಷದಲ್ಲಿ ಯಾವುದೇ ನಿರ್ಣಯವಾಗಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
ಶ್ರೀಕೃಷ್ಣ ಮಠಕ್ಕೆ ರವಿವಾರ ಭೇಟಿ ನೀಡಿ ದೇವರ ದರ್ಶನ ಪಡೆದ ಸಂದರ್ಭ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಡಿಸಿಎಂ ಹುದ್ದೆಗೆ ಸಂಬಂಧಿಸಿ ಪಕ್ಷ ಮತ್ತು ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಾವೆಲ್ಲ ಬದ್ಧರಾಗಿರಬೇಕು. ಮುಖ್ಯಮಂತ್ರಿ ವಿದೇಶಿ ಪ್ರವಾಸಕ್ಕೆ ಹೋಗಿದ್ದು, ಅವರು ಬಂದ ಬಳಿಕ ಸಚಿವ ಸಂಪುಟದ ವಿಸ್ತರಣೆ ಮಾಡುತ್ತೇವೆ. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.
ಉಪ ಚುನಾವಣೆ ಗೆದ್ದ ಏಳು ಮಂದಿಗೆ ಮಂತ್ರಿ ಸ್ಥಾನ ನೀಡುವ ಕುರಿತು ಸದ್ಯ ಯಾವುದೇ ನಿರ್ಣಯವಾಗಿಲ್ಲ. ನಮ್ಮ ಸರಕಾರ ಅಧಿಕಾರಕ್ಕೆ ಬರಲು ಆ ಶಾಸಕರೇ ಕಾರಣ ಎನ್ನುವುದು ಗೊತ್ತಿದೆ. ಆ ವಿಚಾರವನ್ನು ಗಮನದಲ್ಲಿ ಇರಿಸಿಕೊಂಡು ನಿರ್ಣಯ ತಳೆಯಲಾಗುತ್ತದೆ. ಸಿಎಂ ಪಕ್ಷದ ವರಿಷ್ಠರ ಜತೆಗೆ ಚರ್ಚೆ ನಡೆಸಿ ಯೋಗ್ಯವಾದ ನಿರ್ಣಯವನ್ನೇ ತೆಗೆದುಕೊಳ್ಳುತ್ತಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಶಾಸಕ ರಘುಪತಿ ಭಟ್, ಸುವರ್ಧನ್ ನಾಯಕ್, ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.