ಸ್ವಾತಂತ್ರ್ಯ ದಿನಾಚರಣೆ ಸಜ್ಜುಗೊಂಡಿದೆ ಉಡುಪಿ ಜಿಲ್ಲೆ
Team Udayavani, Aug 15, 2019, 7:16 AM IST
ಉಡುಪಿ: 73ನೇ ಸ್ವಾತಂತ್ರ್ಯೋತ್ಸವಕ್ಕೆ ಉಡುಪಿ ಜಿಲ್ಲೆ ಸಜ್ಜಾಗಿದೆ. ಈಗಾಗಲೇ ಉಡುಪಿ ಬೀಡಿನಗುಡ್ಡೆಯಲ್ಲಿರುವ ಗಾಂಧೀ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೂರು ದಿನಗಳಿಂದ ಪೂರ್ವ ಸಿದ್ಧತೆಗಳು ನಡೆಯುತ್ತಿದೆ. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಧ್ವಜಾರೋಹಣ ನಡೆಸಲಿದ್ದಾರೆ.
ಮೊದಲು ಜಿಲ್ಲಾ ಕಚೇರಿಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಅನಂತರ ಅಜ್ಜರಕಾಡಿನಲ್ಲಿರುವ ಹುತ್ಮಾತ್ಮರ ಸ್ಮಾರಕದ ಬಳಿ ಧ್ವಜಾರೋಹಣಗೊಂಡ ಬಳಿಕ ಜಿಲ್ಲಾಧಿಕಾರಿಗಳು ಬೀಡಿನಗುಡ್ಡೆಗೆ ಆಗಮಿಸಿ ಧ್ವಜಾರೋಹಣ ಮಾಡಿ ಜಿಲ್ಲೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ನಗರದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿದ್ದು, ಪೊಲೀಸ್ ಪಡೆ, ಗೃಹರಕ್ಷಕ ಪಡೆ, ಸ್ಕೌಡ್ಸ್ ಗೈಡ್ಸ್, ಎನ್‌ಸಿಸಿ ಸೇರಿದಂತೆ ಒಟ್ಟು 28 ತಂಡಗಳು ಪಥಸಂಚಲನದಲ್ಲಿ ಭಾಗವಹಿಸಲಿವೆ. ಇನ್ನು ಎಸ್.ಎಲ್.ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಿ, ಸಮ್ಮಾನಿಸಲಾಗುವುದು.
ನೆರೆ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಲಾಗುತ್ತದೆ. ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಕಡಿಮೆಗೊಳಿಸಲಾಗಿದೆ.
ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ಖುದ್ದು ಸ್ಥಳದಲ್ಲಿ ಇದ್ದು, ಎಲ್ಲ ಕೆಲಸ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.