ಸ್ವಾತಂತ್ರ್ಯಹೋರಾಟಗಾರ, ಶೈಕ್ಷಣಿಕ ಹರಿಕಾರ: ಪಂಡಿತ್ ಸಂಸ್ಮರಣೆ
Team Udayavani, Dec 19, 2018, 3:20 AM IST
ಶಿರ್ವ: ಎಳವೆಯಲ್ಲೇ ಮುಂಬಯಿಗೆ ತೆರಳಿ, ದಿನವಿಡೀ ದುಡಿದು, ರಾತ್ರಿ ಶಾಲೆಯಲ್ಲಿ ಕಲಿತು, ಸ್ವಾತಂತ್ರ್ಯ ಹೋರಾಟಗಾರನಾಗಿ ಕ್ವಿಟ್ ಇಂಡಿಯಾ ಸಹಿತ ವಿವಿಧ ಚಳುವಳಿಗಳಲ್ಲಿ ಭಾಗವಹಿಸಿ, ಕೃಷ್ಣ ಮೆನನ್ ಅವರ ಆಪ್ತ ಸಹಾಯಕರಾಗಿ, ಮುಂದೆ ಭೂಗತರಾಗಿ ದೊಡ್ಡ ಮಟ್ಟದ ಹೋರಾಟಗಳನ್ನು ಸಂಘಟಿಸಿದ ಮೂಡುಬೆಳ್ಳೆಯ ದಿ|ಪಂಡಿತ್ ಡಾ|ಎಸ್.ಕೆ. ಸುವರ್ಣ ಅವರ 25ನೇ ಸಂಸ್ಮರಣೆ ಕಾರ್ಯಕ್ರಮ ಅವರ ಕರ್ಮಭೂಮಿ ಮುಂಬಯಿ ಮತ್ತು ಹುಟ್ಟೂರು ಬೆಳ್ಳೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಸ್ವಾತಂತ್ರ್ಯಾನಂತರ ಸನ್ಯಾಸಿಯಾಗಿ ವಜ್ರೇಶ್ವರಿಯ ನಿತ್ಯಾನಂದರು ಮತ್ತು ಕೊಲ್ಕತ್ತಾದ ಗಂಗಾಪ್ರಸಾದರ ಶಿಷ್ಯತ್ವ ಸ್ವೀಕರಿಸಿದ್ದ ಸುವರ್ಣರು, ಧಾರ್ಮಿಕ ರಂಗದ ಪಂಡಿತ ಗುರುವಾಗಿ, ಪಾರಂಪರಿಕ ವೈದ್ಯನಾಗಿ, ಉದ್ಯಮಿಯಾಗಿ ಮುಂಬಯಿ ಹಾಗೂ ಬೆಳ್ಳೆಯಲ್ಲಿ ಜನಹಿತ ಕಾರ್ಯ ನಡೆಸಿದ್ದಾರೆ. ಮುಂಬಯಿ ಬಿಲ್ಲವರ ಅಸೋಸಿಯೇಶನ್‌ನ ಭಾಂಡುಪ್ ಶಾಖಾ ಅಧ್ಯಕ್ಷರಾಗಿ, ಭಾರತ್ ಕೋ ಆಪರೇಟಿವ್ ಬ್ಯಾಂಕ್‌ನ ಸ್ಥಾಪಕ ನಿರ್ದೇಶಕರಾಗಿ, ಬೆಳ್ಳೆ ಬಿಲ್ಲವ ಸಂಘದ ಸ್ಥಾಪಕರಾಗಿ, ಆದಿ ಉಡುಪಿಯ ಶ್ರೀ ಬ್ರಹ್ಮಬೈದರ್ಕಳ ಅಧ್ಯಯನ ಪ್ರತಿಷ್ಠಾನ, ಬೆಳ್ಳೆ ಗೀತಾ ಮಂದಿರದ ಸ್ಥಾಪಕ ಟ್ರಸ್ಟಿ ಮತ್ತು ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಮುಂಬಯಿ, ಉಡುಪಿ, ದ.ಕ. ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ, ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳಿಗೆ ಪಂಡಿತರು ಕೊಡುಗೈ ದಾನಿಯಾಗಿ ಬೆಂಬಲವಿತ್ತವರು.
1950ರ ದಶಕದಲ್ಲಿ ಮುಂಬಯಿಯ ಭಾಂಡುಪ್‌ನಲ್ಲಿ ಶ್ರೀ ನಿತ್ಯಾನಂದ ಆಶ್ರಮ ಸ್ಥಾಪಿಸಿದರು. ಅದೇ ಆಶ್ರಮ ಇಂದು ಮುಂಬಯಿಯ ಖ್ಯಾತ ಮಂದಿರಗಳಲ್ಲಿ ಒಂದಾದ ಭಾಂಡುಪ್‌ನ ಸ್ವಾಮಿ ನಿತ್ಯಾನಂದ ಮಂದಿರವಾಗಿದೆ. ಮೂಡುಬೆಳ್ಳೆ ಕಪ್ಪಂದಕರಿಯದಲ್ಲಿ 1960ರಲ್ಲಿ ಶ್ರೀ ನಿತ್ಯಾನಂದ ಆಶ್ರಮ ಸ್ಥಾಪಿಸಿದರು. ಮೂಡುಬೆಳ್ಳೆಗೆ ವಿದ್ಯುತ್, ಟೆಲಿಫೋನ್ ಸೌಕರ್ಯ ಒದಗಿಸುವಲ್ಲಿಯೂ ಪಂಡಿತರದ್ದು ಪ್ರಮುಖ ಪಾತ್ರ. ಬೆಳ್ಳೆ ವ್ಯವಸಾಯ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪಡುಬೆಳ್ಳೆಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಶ್ರಮಿಸಿದವರಲ್ಲಿ ಸುವರ್ಣರು ಅಗ್ರಮಾನ್ಯರು.
1993ರ ಡಿ. 20ರಂದು ಮುಂಬಯಿಯಲ್ಲಿ ಇಹಲೋಕ ತ್ಯಜಿಸಿದ ಅವರ 25ನೇ ಸಂಸ್ಮರಣೆ ಕಾರ್ಯಕ್ರಮವು ಬೆಳ್ಳೆ ಹಾಗೂ ಮುಂಬಯಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿವೆ. ಡಿ. 20, 21 ಮತ್ತು 22ರಂದು ಅವರೇ ಸ್ಥಾಪಿಸಿದ ಮುಂಬಯಿ ಭಾಂಡುಪ್‌ನ ಶ್ರೀ ನಿತ್ಯಾನಂದ ಮಂದಿರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ಪಡುಬೆಳ್ಳೆ ನಾರಾಯಣ ಗುರು ಶಾಲೆಯಲ್ಲಿ ಸಂಸ್ಮರಣಾ ಸಪ್ತಾಹ ಜರಗಲಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.