ರಾಷ್ಟ್ರದ ಅಭಿವೃದ್ಧಿ ಎಲ್ಲರ ಜವಾಬ್ದಾರಿ: ಶಿಲ್ಪಾ ನಾಗ್‌

Team Udayavani, Aug 16, 2017, 7:30 AM IST

1508kde1-2.jpg

ಕುಂದಾಪುರ: ಪೂರ್ವಿಕರ ತ್ಯಾಗ ಹಾಗೂ ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯವನ್ನು ಕಾಪಾಡಬೇಕು. ಮಾತ್ರವಲ್ಲದೆ  ರಾಷ್ಟ್ರದ ಉಜ್ವಲ ಭವಿಷ್ಯವನ್ನು ಅಭಿವೃದ್ಧಿಯ ಪಥದೆಡೆಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು  ಕುಂದಾಪುರ ಉಪವಿಭಾಗಾಧಿಕಾರಿ  ಶಿಲ್ಪಾ ನಾಗ್‌ ಅವರು ಹೇಳಿದರು.

ಅವರು ಮಂಗಳವಾರ ಕುಂದಾಪುರ  ಗಾಂಧಿ ಮೈದಾನದಲ್ಲಿ  ತಾ.ಪಂ., ಪುರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇವರ ಆಶ್ರಯದಲ್ಲಿ  ‌ ಜರಗಿದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದು, ಪಥ ಸಂಚಲನದ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯ ಸಂದೇಶವನ್ನು ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾ.ಪಂ. ಅಧ್ಯಕ್ಷೆ ಜಯಶ್ರೀ ಮೊಗವೀರ ವಹಿಸಿದ್ದರು. ಅತಿಥಿಗಳಾಗಿ  ಪುರಸಭೆಯ ಅಧ್ಯಕ್ಷೆ  ವಸಂತಿ ಸಾರಂಗ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ವಿಕಾಸ್‌ ಹೆಗ್ಡೆ,  ಕುಂದಾಪುರ  ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಪ್ರವೀಣ್‌ ಎಚ್‌.ನಾಯಕ್‌ , ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌ ಕಾಮತ್‌,  ಕುಂದಾಪುರ ತಹಶೀಲ್ದಾರ್‌ ಜಿ.ಎಂ.ಬೋರ್ಕರ್‌,  ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಪುರಸಭೆಯ ಉಪಾಧ್ಯಕ್ಷ ರಾಜೇಶ್‌ ಕಾವೇರಿ,  ಪುರಸಭೆಯ ಸದಸ್ಯರು  ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿವಿಧ ಶಾಲಾ ಮಕ್ಕಳ ಸ್ಕೌಟ್ಸ್‌ ಗೈಡ್ಸ್‌, ಸೇವಾದಳ,  ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಎನ್‌. ಸಿ.ಸಿ., ಎನ್‌.ಎಸ್‌.ಎಸ್‌, ಹಾಗೂ ಪೊಲೀಸ್‌ ಪಡೆಯಿಂದ ಕುಂದಾಪುರ  ಪೊಲೀಸ್‌ ಠಾಣೆಯ ಉಪನಿರೀಕ್ಷಕ  ನಾಸಿರ್‌ ಹುಸೇನ್‌  ನೇತೃತ್ವದಲ್ಲಿ  ಆಕರ್ಷಕ ಪಥ ಸಂಚಲನ  ನಡೆಯಿತು.

ತಾಲೂಕಿನ ಸರಕಾರಿ ಶಾಲೆಗಳಲ್ಲಿ  ಅತಿ ಹೆಚ್ಚು ಅಂಕಗಳಿಸಿದ ಸರಕಾರಿ ಪ.ಪೂ.ಕಾಲೇಜು ಶಂಕರನಾರಾಯಣದ ಶ್ರೀವತ್ಸ ರಾವ್‌, ಸರಕಾರಿ ಪ.ಪೂ.ಕಾಲೇಜು ಸಿದ್ಧಾಪುರದ ಪ್ರಣೀತ್‌ ಶೆಟ್ಟಿ ಹಾಗೂ ಸರಕಾರಿ ಪ.ಪೂ.ಕಾಲೇಜು ಬಿದ್ಕಲ್‌ಕಟ್ಟೆಯ ಶಶಾಂಕ್‌ ಅವರಿಗೆ ಸರಕಾರದ ವತಿಯಿಂದ ಲ್ಯಾಪ್‌ಟಾಪ್‌ನ್ನು ನೀಡಲಾಯಿತು. ಕುಂದಾಪುರ ಪುರಸಭೆಗೆ ಭಾರತ ಸರಕಾರದ ಸ್ವತ್ಛ  ಭಾರತ ಮಿಷನ್‌ನ ಬಯಲು ಮುಕ್ತ ಶೌಚಾಲಯಪ್ರಶಸ್ತಿಯನ್ನು  ಹಸ್ತಾಂತರಿಸಲಾಯಿತು.

ಕುಂದಾಪುರ ತಹಶೀಲ್ದಾರ್‌ ಜಿ.ಎಂ.ಬೋರ್ಕರ್‌ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ  ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.