ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಕಾರ್ಕಳದ ಇಬ್ಬರಿಗೆ ಸೋಂಕು
Team Udayavani, May 12, 2020, 12:43 PM IST
ಮಂಗಳೂರು: ಇಲ್ಲಿನ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಇಬ್ಬರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.
ಫಸ್ಟ್ ನ್ಯೂರೋ ಆಸ್ಪತ್ರೆ ಯ ಕಾರಣದಿಂದ ಸೋಂಕಿತರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಂಗಳೂರಿನ ಶಕ್ತಿನಗರದ 80 ವರ್ಷದ ವೃದ್ಧೆ ( ಸೋಂಕಿತ ಸಂಖ್ಯೆ 507) ರ ಸಂಪರ್ಕದಿಂದ ಇಂದು ಇಬ್ಬರಿಗೆ ಸೋಂಕು ಹರಡಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನ ತಾಯಿ ಮತ್ತು ಮಗನಿಗೆ ಸೋಂಕು ತಾಗಿದೆ. 50 ವರ್ಷದ ಮಹಿಳಗೆ ( ತಾಯಿ) ಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಫಸ್ಟ್ ನ್ಯೂರೋ ತನಿಖೆಯ ವೇಳೆ ಇವರಿಬ್ಬರ ಮಾಹಿತಿ ಪಡೆದು ಕ್ಯಾರಂಟೈನ್ ಮಾಡಲಾಗಿತ್ತು. ಸದ್ಯ ತಾಯಿ ಮತ್ತು ಅವರ ಮಗ ( 26 ವರ್ಷ) ಇಬ್ಬರಿಗೂ ಕೋವಿಡ್-19 ದೃಢವಾಗಿದೆ.
ಎ.20 ರಂದು ನ್ಯೂರಾಲಜಿ ಚಿಕಿತ್ಸೆಗಾಗಿ ಮಂಗಳೂರಿನಫಸ್ಟ್ ನ್ಯೂರೋ ಗೆ ದಾಖಲಾಗಿದ್ದರು. ಆ ಬಳಿಕ ಅವರು ಕಾರ್ಕಳ ಬಂದಿಲ್ಲ. ಇವರಿಬ್ಬರಿಗೂ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಒಟ್ಟು 904 ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಇದುವರೆಗೆ ಸೋಂಕಿನ ಕಾರಣದಿಂದ 31 ಜನರು ಸಾವನ್ನಪ್ಪಿದ್ದು, 426 ಜನರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.