ಸುಧಾ ಮೂರ್ತಿಯವರಿಂದ ಉಡುಪಿ ಜಿಲ್ಲೆಗೆ 54 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಸಾಮಾಗ್ರಿ ನೆರವು
Team Udayavani, Apr 1, 2020, 10:25 PM IST
ಉಡುಪಿ: ಮಾರಕ ಕೋವಿಡ್ 19 ವೈರಸ್ ನಿಯಂತ್ರಿಸುವಲ್ಲಿ ಜಿಲ್ಲೆಗೆ ನೆರವಾಗುವ ಉದ್ದೇಶದಿಂದ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿ ಅವರು ಅಗತ್ಯ ವೈದ್ಯಕೀಯ ಸಾಮಾಗ್ರಿ ಸಹಿತ ಸುಮಾರು 54 ಲಕ್ಷ ರೂಪಾಯಿ ಮೌಲ್ಯದ ಸಾಮಾಗ್ರಿಗಳ ನೆರವನ್ನು ನೀಡಿದ್ದಾರೆ.
ಕೋವಿಡ್ 19 ಸೋಂಕು ನಿಗ್ರಹ ಹಾಗೂ ಪರೀಕ್ಷೆಗೆ ಅನುಕೂಲವಾಗುವಂತೆ 54 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಉಡುಪಿ ಜಿಲ್ಲೆಗೆ ಸುಧಾ ಮೂರ್ತಿಯವರು ದೇಣಿಗೆಯಾಗಿ ನೀಡಿದ್ದಾರೆ. ಜಿಲ್ಲಾಡಳಿತದ ಕರೆಗೆ ಸುಧಾ ಮೂರ್ತಿ ಸ್ಪಂದಿಸಿದ್ದು, 24 ಗಂಟೆಗಳಲ್ಲಿ 54 ಲಕ್ಷ ರೂಪಾಯಿ ಮೌಲ್ಯದ ಅತ್ಯಗತ್ಯ ವೈದ್ಯಕೀಯ ಸಾಮಾಗ್ರಿಗಳು ಜಿಲ್ಲೆಗೆ ಸರಬರಾಜು ಆಗಿವೆ.
ವೈದ್ಯಕೀಯ ಸಾಮಾಗ್ರಿಗಳಲ್ಲಿ 4000 ಎನ್ 95 ಮಾಸ್ಕ್, 4000 ಸ್ಯಾನಿಟೈಸರ್, 25000 ಟ್ರಿಪ್ಪಲ್ ಲೇಯರ್ ಮಾಸ್ಕ್, 10000 ಸರ್ಜಿಕಲ್ ಗ್ಲೌಸ್, 1500 ಪಿಪಿಇ ಕಿಟ್ ಗಳನ್ನು ನೀಡಿರುತ್ತಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.