ಮೂಲಸೌಕರ್ಯ ಅವಶ್ಯ: ಡಾ| ಜಯಮಾಲಾ
Team Udayavani, Mar 3, 2019, 1:05 AM IST
ಬ್ರಹ್ಮಾವರ: ಆಸ್ಪತ್ರೆಗೆ ಹೊಸ ಕಟ್ಟಡದ ಜತೆಗೆ ಮೂಲಸೌಕರ್ಯ ಅತೀಅವಶ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಹೇಳಿದರು.
ಅವರು ಶನಿವಾರ ಬ್ರಹ್ಮಾವರದಲ್ಲಿ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಮತ್ತು ಸುಧಾರಣೆ ಯೋಜನೆಯನ್ವಯ ನಿರ್ಮಿಸಲಾದ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಮುದಾಯ ಆರೋಗ್ಯ ಕೇಂದ್ರ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಾಗಿ ಬದಲಾಗಬೇಕು. ವೈದ್ಯರು ಮತ್ತು ದಾದಿಯರು ಸಂಘಟಿತರಾಗಿ ದುಡಿದಲ್ಲಿ ಆಸ್ಪತ್ರೆಗೆ ಉತ್ತಮ ಹೆಸರು ಬರುತ್ತದೆ ಎಂದರು.
ಹೆರಿಗೆ ತಜ್ಞರು
ಕೇಂದ್ರಕ್ಕೆ ನೇಮಕವಾದ ಹೆರಿಗೆ ತಜ್ಞರನ್ನು ಉಡುಪಿಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅವರನ್ನು ಇಲ್ಲಿಗೇ ನೇಮಕ ಮಾಡುವಲ್ಲಿ ಕಾರ್ಯನಿರ್ವಹಿಸುತ್ತೇನೆ. ಪ್ರಮೋದ್ ಮಧ್ವರಾಜ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಉಡುಪಿ ಕ್ಷೇತ್ರಕ್ಕೆ 2,000 ಕೋಟಿ ರೂ.ಗೂ ಮಿಕ್ಕಿದ ಅನುದಾನ ತಂದಿದ್ದರು. ಈ ಕಟ್ಟಡವೂ ಅವರ ಅವಧಿಯಲ್ಲೇ ಮಂಜೂರಾಗಿತ್ತು ಎಂದು ಡಾ| ಜಯಮಾಲಾ ತಿಳಿಸಿದರು.
ವಾರಂಬಳ್ಳಿ ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಸದಸ್ಯರಾದ ಕುಸುಮಾ ಪೂಜಾರಿ, ಸುಧೀರ್ ಕುಮಾರ್ ಶೆಟ್ಟಿ, ವಸಂತಿ ಪೂಜಾರಿ, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ ನಾಯ್ಕ, ಜಯಲಕ್ಷ್ಮೀ ಶೆಟ್ಟಿ, ಪ್ರತಿಮಾ ಶೆಟ್ಟಿ, ಜಿಲಾ ಆರೋಗ್ಯಾಧಿಕಾರಿ ಡಾ| ಓಂಪ್ರಕಾಶ್ ಉಪಸ್ಥಿತರಿದ್ದರು.
ಸಮ್ಮಾನ
ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯಾ ಧಿಕಾರಿಗಳನ್ನು ಮತ್ತು ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಿಸಿದ ಪ್ರಭಾಕರ್ ಯೆಯ್ನಾಡಿ ಅವರನ್ನು ಸಮ್ಮಾನಿಸಲಾಯಿತು.ತಾಲೂಕು ಆರೋಗ್ಯಾ ಧಿಕಾರಿ ಡಾ| ನಾಗರತ್ನಾ ಸ್ವಾಗತಿಸಿ, ಮಂಜುನಾಥ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.