ನೆರೆಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
Team Udayavani, May 21, 2022, 1:20 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿ, ಆ ಪ್ರದೇಶದಲ್ಲಿ ಅಗತ್ಯ ಮುಂಜಾಗ್ರತ ಕ್ರಮ ಹಾಗೂ ತುರ್ತು ಪರಿಸ್ಥಿತಿಯಲ್ಲಿ ತತ್‌ಕ್ಷ ಣವೇ ಸ್ಪಂದಿಸಲು ಬೇಕಾದ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು.
ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನದಿಗಳ ನೀರು ಸಮುದ್ರ ಸೇರುವ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುವ ಸಾಧ್ಯತೆಯಿದೆ. ಇಂತಹ ಪ್ರದೇಶದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಬೇಕು ಎಂದರು.
ಅಪಾಯಕಾರಿ ಮರ ಗುರುತಿಸಿ
ಮಾನ್ಸೂನ್ ಸಂದರ್ಭ ಗಾಳಿ -ಮಳೆಯಿಂದ ಮರಗಳು ಉರುಳುವ ಸಂಭವವಿದ್ದು, ಅಂತಹ ಮರಗಳನ್ನು ಗುರುತಿಸಿ, ತೆರವುಗೊಳಿಸುವ ಕುರಿತು ತತ್ ಕ್ಷ ಣವೇ ಕ್ರಮ ತೆಗೆದುಕೊಳ್ಳಬೇಕು. ಇದಕ್ಕಾಗಿ ಅರಣ್ಯ ಇಲಾಖೆಯ ಅನುಮತಿ ವಿಳಂಬವಾದಲ್ಲಿ ಮೊದಲು ಮರಗಳನ್ನು ತೆರವುಗೊಳಿಸಿ ಅನಂತರ ಘಟನೋತ್ತರ ಮಂಜೂರಾತಿ ಪಡೆಯಿರಿ. ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಸಾರ್ವಜನಿಕ ಕಾರ್ಯಗಳಿಗೆ ಯಾವುದೇ ತೊಂದರೆ, ವಿಳಂಬವಾಗದಂತೆ ಅಗತ್ಯ ನೆರವು ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕ ಕಟ್ಟಡದ ಆಡಿಟ್
ಎಲ್ಲ ಶಾಲಾ ಕಟ್ಟಡಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಭವನಗಳ ಸ್ಥಿತಿಗತಿ ಕುರಿತು ಆಡಿಟ್ ನಡೆಸಬೇಕು ಎಂದರು.
24 ಗಂಟೆಯಲ್ಲಿ ಪರಿಹಾರ
ವಿಕೋಪದಿಂದ ಮಾನವ ಜೀವ ಹಾನಿಯಾದಲ್ಲಿ ವರದಿಗಳನ್ನು ಶೀಘ್ರ ಸಿದ್ಧಪಡಿಸಿ 24 ಗಂಟೆಯ ಒಳಗೆ ಪರಿಹಾರ ವಿತರಿಸಬೇಕು ಎಂದರು.
ಮೇ 31ರೊಳಗೆ ಎಲ್ಲಾ ಇಲಾಖೆಗಳು ತಮ್ಮ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿಕೊಂಡು ಅದರಂತೆ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.
ಜಿ.ಪಂ. ಸಿಇಒ ಪ್ರಸನ್ನ ಎಚ್., ಕುಂದಾಪುರ ಡಿಎಫ್‌ಒ ಆಶೀಶ್ ರೆಡ್ಡಿ, ಎಡಿಸಿ ವೀಣಾ, ಎ.ಸಿ. ರಾಜು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.