ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 1.28 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯಗಳ ನಾಶ
Team Udayavani, Jun 26, 2021, 11:17 AM IST
ಪಡುಬಿದ್ರಿ: ನಂದಿಕೂರಿನ ಆಯುಷ್ ಬಯೋ ಮೆಟ್ರಿಕ್ ವೇಸ್ಟ್ ನಿರ್ವಹಣಾ ಘಟಕದಲ್ಲಿ ಉಡುಪಿ ಜಿಲ್ಲೆಯಲ್ಲಿ 50 ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ 1.28 ಕೋಟಿ ರೂ. ಮೌಲ್ಯದ ಗಾಂಜಾ ಮತ್ತಿತರ ಡ್ರಗ್ಸ್ ಗಳನ್ನು ನಾಶಪಡಿಸಲಾಯಿತು.
ಈ ಸಂದರ್ಭದಲ್ಲಿ ಮಾತಾಡಿದ ಉಡುಪಿ ಎಸ್ ಪಿ ವಿಷ್ಣುವರ್ಧನ್, 2008ರಿಂದ 2021ರ ಇದುವರೆಗಿನ ಎಲ್ಲಾ ಮಾದಕ ದ್ರವ್ಯಗಳನ್ನು ನಾಶಪಡಿಸಲಾಗಿದೆ. ಇನ್ನು ಪ್ರತೀ ವರ್ಷವೂ ಇದನ್ನು ಮಾದಕ ದ್ರವ್ಯ ವಿರೋಧಿ ಹಾಗೂ ಅವುಗಳ ಕಳ್ಳಸಾಗಣೆ ವಿರೋಧಿ ಅಂತರಾಷ್ಟ್ರೀಯ ದಿನವಾದ ಜೂ. 26ರಂದು ಮುಂದುವರಿಸಲಾಗುವುದು. ಉಡುಪಿ ಜಿಲ್ಲೆಯ ಎಲ್ಲಾ ಮಾದಕ ದ್ರವ್ಯ ವ್ಯಸನಿಗಳು ಮತ್ತು ಕಳ್ಳಸಾಗಣೆದಾರರ ಮೇಲೆ ಇಲಾಖೆ ನಿಗಾವಿಡಲಾಗಿದೆ. ಮಾದಕ ದ್ರವ್ಯ ವ್ಯಸನದ ವಿರುದ್ಧ ಇಲಾಖಾ ಸಮರವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದೆಂದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಎಡಿಷನಲ್ ಎಸ್ಪಿ ಕುಮಾರಚಂದ್ರ, ಕಾರ್ಕಳ ಡಿವೈಎಸ್ಪಿ ವಿಜಯಪ್ರಸಾದ್, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಉಡುಪಿ ಡಿವೈಎಸ್ಪಿ ಸುಧಾಕರ ನಾಯಕ್, ವೃತ್ತ ನಿರೀಕ್ಷಕರಾದ ಮಂಚುನಾಥ್, ಮಂಜುನಾಥ್ ಗೌಡ, ಪ್ರಮೋದ್ ಕುಮಾರ್, ಸಂಪತ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
Udupi: ಹಾವು ಕಡಿದು ಕೃಷಿಕ ಸಾವು
Request: ಕರಕುಶಲ ಕರ್ಮಿಗಳಿಗೆ ಸಕಾಲದಲ್ಲಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸೂಚಿಸಿ
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.