“ಕರ್ತವ್ಯದಲ್ಲಿ ಬೇಜವಾಬ್ದಾರಿ; ಅಧಿಕಾರಿಗಳಿಗೆ ನೋಟಿಸ್ ನೀಡಿ’
Team Udayavani, Oct 20, 2019, 5:00 AM IST
ಬೈಂದೂರು: ಕೊಡೇರಿ ಕಿರು ಬಂದರು ಕಾಮಗಾರಿಗೆ 27 ಕೋಟಿ ರೂ. ಅನುದಾನ 2016ರಲ್ಲಿ ಮಂಜೂರಾಗಿದೆ. 2019 ಜನವರಿ ಒಳಗೆ ಕಾಮಗಾರಿ ಮುಗಿಯಬೇಕಿತ್ತು. ಆದರೆ ಇದುವರೆಗೆ ಕಾಮಗಾರಿ ಪ್ರಗತಿ ಕಂಡಿಲ್ಲ. ಈ ಕುರಿತು ಎರಡೆರಡು ಬಾರಿ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳಲ್ಲಿ ಕಾರಣ ಕೇಳಲಾಗಿದೆ. ಆದರೆ ಇದುವರೆಗೆ ಕೇವಲ ಸಬೂಬು ನೀಡುತ್ತಿದ್ದಾರೆ ಬಿಟ್ಟರೆ ಕಾಮಗಾರಿ ಆರಂಭಿಸಿಲ್ಲ. ಜನರ ಸೇವೆ ಮಾಡಲು ಇಷ್ಟವಿದ್ದರೆ ಕೆಲಸ ಮಾಡಿ, ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ತೆರಳಿ ಎಂದು ಸಂಸದ ಬಿ.ವೈ. ರಾಘವೇಂದ್ರ ಬಂದರು ಮತ್ತು ಮೀನುಗಾರಿಕಾ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ.
ಕಮಲಶಿಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಮರವಂತೆಯಲ್ಲಿ ಹೊಸ ಕಾಮಗಾರಿ ಟೆಂಡರ್ ಆಗಿದೆ. ಹಳೆಯ ಕಾಮಗಾರಿ ಮುಗಿದು 3 ವರ್ಷದಲ್ಲಿ ಶಿಥಿಲಗೊಂಡಿದೆ. ಇಂತಹ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸ ಬೇಕು ಹಾಗೂ ಬೇಜವಾಬ್ದಾರಿಯಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಗಳಿಗೆ ನೋಟಿಸ್ ನೀಡಬೇಕು ಎಂದು ಮುಖ್ಯ ಮಂತ್ರಿಗಳ ಆಪ್ತ ಕಾರ್ಯದರ್ಶಿಗಳಿಗೆ ತಿಳಿಸಿದರು.
ಬೈಂದೂರು ತಾ| ಆಸ್ಪತ್ರೆ ಸಂಕೀರ್ಣ ನೀಲನಕಾಶೆ ವೀಕ್ಷಿಸಿ ವಿವಿಧ ಕಚೇರಿ ಗಳನ್ನು ಒಂದೇ ವಲಯದಲ್ಲಿ ಪ್ರಾರಂಭಿಸ ಬೇಕಾಗಿರುವುದರಿಂದ ಭವಿಷ್ಯದ ಯೋಚನೆ ಮನಗಂಡು ಯೋಜನೆ ರೂಪಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಟವರ್ ಸ್ಥಾಪಿಸಲು ಆದೇಶ
ಬಿಎಸ್ಸೆನ್ನೆಲ್ ನಿರ್ವಹಣೆ ಕೊರತೆಯಿಂದ ಸ್ತಬ್ಧಗೊಳ್ಳುತ್ತಿದೆ. ಆದರೆ ಗ್ರಾಮೀಣ ಭಾಗ ದಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ.
ಹೀಗಾಗಿ ಸಭೆಯಲ್ಲಿ ಹಾಜರಿದ್ದ ಜಿಯೋ ಹಾಗೂ ಏರ್‌ಟೆಲ್ ಪ್ರತಿನಿಧಿಗಳಿಗೆ ಜಿಲ್ಲಾಡಳಿತ, ಗ್ರಾಮ ಪಂಚಾಯತ್ ಪೂರಕವಾಗಿ ಸ್ಪಂದಿಸಲು ತಿಳಿಸಿದರು.
ಸಮರ್ಪಕವಾಗಿ ಕಾಮಗಾರಿ ನಡೆಸಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಕ್ಷೇತ್ರಕ್ಕೆ 200 ಕೋಟಿ ರೂ.ಗೂ ಅಧಿಕ ಕಾಮಗಾರಿ ಮಂಜೂರಾಗಿದೆ.ಇಲಾಖಾ ಅಧಿಕಾರಿಗಳು ಸಮರ್ಪಕವಾಗಿ ಕಾಮಗಾರಿ ನಡೆಸಬೇಕು. ಗುತ್ತಿಗೆದಾರರ ಲಾಬಿಗೆ ಮಣಿಯುವುದನ್ನು ಸಹಿಸುವುದಿಲ್ಲ. ಪಾರದರ್ಶಕ ಆಡಳಿತ ನೀಡುವುದು ನನ್ನ ಪ್ರಮುಖ ಧ್ಯೇಯ ಎಂದರು.
ಹೆದ್ದಾರಿ ಅಧಿಕಾರಿಗಳು ಗೈರು
ಈ ಹಿಂದೆ ಬೈಂದೂರಿನಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿಯೂ ಹೆದ್ದಾರಿ ಅಧಿಕಾರಿಗಳು ಹಾಜರಾಗಿರಲಿಲ್ಲ. ಈಗ ಕೂಡ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆಯಲ್ಲಿ ಉಪಸ್ಥಿತರಿರಲಿಲ್ಲ. ಇದುವರೆಗೆ ನಿರ್ಮಾಣವಾಗದ ಸರ್ವಿಸ್ ರಸ್ತೆ ಹಾಗೂ ಶಿರೂರಿನಲ್ಲಿ ಟೋಲ್‌ಗೇಟ್ ಆರಂಭಿಸುವ ಸಿದ್ಧತೆಯಲ್ಲಿದ್ದು ಸ್ಥಳೀಯರಿಗೆ ರಿಯಾಯಿತಿ ನೀಡಲು ಮನವಿಗಳಿದ್ದು ಅಧಿಕಾರಿಗಳು ಗೈರು ಹಾಜರಾದ ಕಾರಣ ಪತ್ರ ಬರೆಯಲು ಸಭೆಯಲ್ಲಿ ತಿಳಿಸಲಾಯಿತು.
ಈ ಸಂದರ್ಭ ಜಿಲ್ಲಾಧಿಕಾರಿ ಜಿ. ಜಗದೀಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹೊÉàಟ್, ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ರಾಜಪ್ಪ, ಶ್ರೀರಂಗಯ್ಯ, ಕುಂದಾಪುರ ಡಿ.ವೈ.ಎಸ್.ಪಿ. ಹರಿರಾಮ್ ಶಂಕರ್, ಬೈಂದೂರು ತಹಶೀಲ್ದಾರ ಬಿ.ಪಿ. ಪೂಜಾರ್, ಜಿ.ಪಂ. ಹಾಗೂ ತಾ.ಪಂ. ಸದಸ್ಯರು ಉಪಸ್ಥಿತರಿದ್ದರು.ಕುಂದಾಪುರ ತಹಶೀಲ್ದಾರ ತಿಪ್ಪೇಸ್ವಾಮಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.