Udupi Case: ವಿಡಿಯೋ ಪ್ರಕರಣದಲ್ಲಿ ಇಸ್ಲಾಮಿಕ್ ಕೈವಾಡ: ಪ್ರಮೋದ್ ಮುತಾಲಿಕ್
Team Udayavani, Aug 1, 2023, 10:16 PM IST
ಮೈಸೂರು: ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಹಿಂದೆ ಇಸ್ಲಾಮಿಕ್ ಕೈವಾಡವಿದ್ದು, ಸೂಕ್ತ ತನಿಖೆ ನಡೆಸಿ ಸತ್ಯಾಂಶ ಹೊರತರಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಕುರಿತು ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರ ಹೇಳಿಕೆ ಒಪ್ಪುವುದಿಲ್ಲ. ಘಟನೆ ನಡೆಯದಿದ್ದರೆ ಸಿಎಂ ಯಾಕೆ ಅಲ್ಲಿಗೆ ಹೋದರು? ಮಕ್ಕಳಿಂದ ತಪ್ಪೊಪ್ಪಿಗೆ ಪತ್ರ ಬರೆಸಿದ್ದಾರೆ ಅಂದ ಮೇಲೆ ತಪ್ಪು ಮಾಡಿದ್ದಾರೆ ಎಂದಲ್ಲವೆ ಎಂದು ದೂರಿದರು.
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ತನಿಖೆ ಮಾಡದೇ ಆ ರೀತಿ ಹೇಳಬಾರದಿತ್ತು. ಎಲ್ಲವೂ ತನಿಖೆ ನಡೆದು ಸತ್ಯಾಸತ್ಯತೆ ಹೊರ ಬರಲಿ. ಎಷ್ಟು ವಿಡಿಯೋಗಳು ಆಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದ್ದಾವೋ ಗೊತ್ತಿಲ್ಲ. ಎಲ್ಲವೂ ಸಮಗ್ರವಾಗಿ ತನಿಖೆಯಾಗಬೇಕು ಎಂದು ಹೇಳಿದರು.
ಹನುಮ ಜಯಂತಿ ವಿರೋಧಿಗಳಿಂದ ಕೊಲೆ:
ತಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇದೊಂದು ಪೂರ್ವಯೋಜಿತ ಕೊಲೆ. ಇದರಲ್ಲಿ ವೈಯಕ್ತಿಕ ಕಾರಣ ಏನಿಲ್ಲ. ಹಿಂದೂ ವಿರೋಧಿಗಳು ಈ ಕೊಲೆ ಮಾಡಿದ್ದಾರೆ. ಹನುಮ ಜಯಂತಿಯೇ ಈ ಕೊಲೆಗೆ ಕಾರಣ ಎಂದು ಹೇಳಿದರು.
ಹನುಮ ಜಯಂತಿಯನ್ನು ಸಹಿಸದ ಹಿಂದೂ ವಿರೋಧಿಗಳು ಈ ಕೊಲೆ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ. ಪ್ರಕರಣದ ಕೊಲೆ ಆರೋಪಿಗಳನ್ನು ಜೈಲಿನಿಂದ ಬಿಡಿಸುವ ಕೆಲಸವೂ ನಡೆಯುತ್ತಿದೆ. ಆದರೆ, ಪ್ರಕರಣ ಮುಚ್ಚಿ ಹಾಕಲು ಶ್ರೀರಾಮಸೇನೆ ಬಿಡುವುದಿಲ್ಲ. ವೇಣುಗೋಪಾಲ್ ಹೆಂಡತಿಗೆ ಸರ್ಕಾರಿ ಕೆಲಸದ ಜತೆಗೆ 25 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.
ಮುಸ್ಲಿಮರಿಗೆ ಕಾಮಗಾರಿ ನೀಡಿರುವುದು ತಪ್ಪು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಪ್ರತಿಕ್ರಿಯಿಸಿ, ಗರ್ಭ ಗುಡಿಯ ಕಾಮಗಾರಿಯನ್ನು ಮುಸ್ಲಿಮರಿಗೆ ಗುತ್ತಿಗೆ ನೀಡಿರುವುದು ಸರಿಯಲ್ಲ. ದೇವಸ್ಥಾನಗಳನ್ನು ಭಗ್ನ ಮಾಡಿದವರಿಗೆ, ಗೋ ಮಾತೆಯನ್ನು ಭಕ್ಷಣೆ ಮಾಡುವವರಿಗೆ ಕಾಮಗಾರಿ ಕೊಟ್ಟಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
500 ವರ್ಷ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಆದರೆ, ಗರ್ಭಗುಡಿ ಕಾಮಗಾರಿ ಮುಸ್ಲಿಮರಿಗೆ ನೀಡಲಾಗಿದೆ. ಇದು ಅಕ್ಷಮ್ಯ ಅಪರಾಧ, ಬಹುದೊಡ್ಡ ತಪ್ಪು. ಇದರಿಂದ ಆ ಸ್ಥಳ ಅಪವಿತ್ರವಾಗಿದೆ. ಅಲ್ಲಾ ಒಬ್ಬನೇ ದೇವರು ಎನ್ನುವವರಿಗೆ ಗುತ್ತಿಗೆ ನೀಡಬಾರದಿತ್ತು. ಕೂಡಲೇ ಗುತ್ತಿಗೆ ರದ್ದು ಮಾಡಬೇಕು. ಎಲ್ಲಾ ಮುಸ್ಲಿಂ ಕಾರ್ಮಿಕರನ್ನು ಅಲ್ಲಿಂದ ಹೊರ ಹಾಕಿ ಆ ಸ್ಥಳದ ಪಾವಿತ್ರ್ಯತೆ ಕಾಪಾಡಬೇಕು. ಈ ಬಗ್ಗೆ ಟ್ರಸ್ಟಿಗಳಾಗಿರುವ ಉಡುಪಿ ಪೇಜಾವರ ಮಠದ ಶ್ರೀಗಳಿಗೆ ಮನವಿ ಮಾಡಲಾಗಿದೆ ಎಂದರು.
ಜ್ಞಾನವಾಪಿ ಮಸೀದಿ ವಿವಾದ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆ ಸ್ವಾಗತಿಸುತ್ತೇನೆ. ಒಬ್ಬ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಸರಿಯಾಗಿ ಹೇಳಿದ್ದಾರೆ. ನೂರು ಕೋಟಿ ಭಾರತೀಯರು ಅವರೊಂದಿಗೆ ಇರುತ್ತೇವೆ. ದೇಶದ ಮುಸ್ಲಿಮರು ಸೌಜನ್ಯದಿಂದ ನಡೆದುಕೊಳ್ಳಬೇಕು. ಉದ್ದಟತನದ ವರ್ತನೆ ತೋರಬಾರದು. ಕಾಶಿ ವಿಶ್ವನಾಥ ದೇಗುಲವನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು. ಡಿ.6ರ ಘಟನೆ ಮರುಕಳಿಸುವಂತೆ ಮಾಡಬೇಡಿ. ಹಿಂದೂಗಳನ್ನು ಕೆರಳಿಸುವ ಕೆಲಸ ಮಾಡಬೇಡಿ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.