ಇಲ್ಲಿನ ರಸ್ತೆಯಲ್ಲಿ ಬಸ್ ತಿರುಗಿಸುವುದೇ ಕಷ್ಟ
Team Udayavani, Apr 29, 2019, 6:30 AM IST
ಕಾರ್ಕಳ: ಇಲ್ಲಿನ ಪೇಟೆಯ ಹೃದಯ ಭಾಗ ತೀರ ಕಿರಿದಾಗಿದ್ದು ರಸ್ತೆ ಅಭಿವೃದ್ಧಿ ಕಾಣದೆ ಸುಗಮ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ.
ವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆಯೂ ಇಲ್ಲಿಲ್ಲ. ನಗರದ ಪ್ರಮುಖ ಸಮಸ್ಯೆ ಇದಾದರೂ, ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿ ಕಾರಿಗಳಾಗಲಿ, ಜನಪ್ರತಿನಿ ಧಿಗಳಾಗಲಿ ಇಚ್ಚಾಶಕ್ತಿ ಪ್ರದರ್ಶಿಸಿಲ್ಲ.
ಇದರಿಂದಾಗಿ ಮೂರು ಮಾರ್ಗ ಪ್ರದೇಶದಲ್ಲಿ ಬಸ್ ಚಾಲಕರಿಗೆ ಬಸ್ ತಿರುಗಿಸುವುದು ಸವಾಲಿನ ಕೆಲಸವೇ ಆಗಿದೆ. ರಸ್ತೆ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗುತ್ತಿದ್ದು, ಸವಾರರು ಟ್ರಾಫಿಕ್ ಸಮಸ್ಯೆಯಿಂದ ಪರಿತಪಿಸುವಂತಾಗುತ್ತಿದೆ.
ಇಕ್ಕಟ್ಟಾದ ರಸ್ತೆ
ತೀರಾ ಇಕ್ಕಟ್ಟಾಗಿರುವ ರಸ್ತೆಯಾಗಿರುವುದರಿಂದ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಕಿಷ್ಕಿಂದೆಯಂತಿರುವ ಈ ರಸ್ತೆಯಲ್ಲಿ ಪಾದಚಾರಿಗಳೂ ನಿತ್ಯ ಪರದಾಡುವಂತಾಗಿದೆ. ರಸ್ತೆಯನ್ನು ಅಗಲಗೊಳಿಸುವತ್ತ ಈ ವರೆಗೂ ಯಾರೂ ಗಮನ ವಹಿಸಿಲ್ಲ.
ಪಾರ್ಕಿಂಗ್‌ಗೆ ಇಲ್ಲ ಜಾಗ
ಪೇಟೆಯಲ್ಲಿ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಲಾಗುತ್ತಿದೆ. ಪಾರ್ಕಿಂಗ್‌ಗಾಗಿ ಸೂಕ್ತ ಜಾಗ ಗುರುತಿಸಿಲ್ಲ. ಇದರಿಂದ ಹಬ್ಬ ಹರಿದಿನಗಳು, ಉತ್ಸವಾದಿಗಳ ಸಂದರ್ಭದಲ್ಲಿ ಹೆಚ್ಚಿನ ಸಮಸ್ಯೆಯಾಗುತ್ತದೆ.
ರಸ್ತೆ ಬದಿ ಗುಂಡಿ
ಪೈಪ್‌ಲೆ„ನ್ ಅಳವಡಿಕೆಗೆ ಮುಖ್ಯರಸ್ತೆಬದಿ ಅಗೆದ ಗುಂಡಿ ಗಳನ್ನು ಮುಚ್ಚಿಲ್ಲ. ಬಸ್ ಸ್ಟಾಂಡ್‌ನಿಂದ ಬಂಡಿಮಠದವರೆಗಿನ ರಸ್ತೆ ಯಲ್ಲಿ ಇಂಗುಗುಂಡಿಯಂತೆ ಅಲ್ಲಲ್ಲಿ ಹೊಂಡವಿದ್ದು, ತೊಡಕಾಗಿ ಪರಿಣಮಿಸಿದೆ.
ಡಿಸಿ ಮುಂದಾಗಿದ್ದರು
ಈ ಹಿಂದೆ ಉಡುಪಿ ಡಿಸಿಯಾಗಿದ್ದ ಹೇಮಲತಾ ಅವರು ರಸ್ತೆಗೆ ಹೊಂದಿಕೊಂಡಂತಿದ್ದ ಅಂಗಡಿ ಮುಂಭಾಗ ತೆರವುಗೊಳಿಸುವತ್ತ ದಿಟ್ಟ ಕ್ರಮ ಕೈಗೊಂಡಿದ್ದರು. ಅವರ ಪ್ರಯತ್ನ ಮಾತ್ರ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿಲ್ಲ. ಕೆಲವೆಡೆ ಕಟ್ಟಡ ಮಾಲಕರು ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಹಕರಿಸಿದ್ದರೆ ಇನ್ನು ಕೆಲವರು ಜಾಗ ಬಿಟ್ಟುಕೊಡಲು ನಿರಾಕರಿಸಿದ್ದರು. ಆದ್ದರಿಂದ ಜಾಗದ ಮಾಲಕರಿಗೆ ಸೂಕ್ತ ಪರಿಹಾರ ನೀಡಿ ರಸ್ತೆ ಅಭಿವೃದ್ಧಿಪಡಿಸುವತ್ತ ಗಮನ ನೀಡಬೇಕೆಂಬುದು ಸಾರ್ವಜನಿಕರ ಆಗ್ರಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.