Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ


Team Udayavani, Nov 1, 2024, 11:07 PM IST

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

ಮಣಿಪಾಲ: ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ಸರ ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಳ್ಳಿ ಗ್ರಾಮದ ನಿವಾಸಿ ಪೆರಂಪಳ್ಳಿ ರಸ್ತೆಯ ಜ್ಯೂಲಿಯಟ್‌ ಅವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಕೆಲಸದಾಕೆ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಸುನೀತಾ ಅವರು ಜೂಲಿಯೆಟ್‌ಗೆ ಗಂಡನಿಗೆ ವಿಚ್ಛೇದನ ಕೊಡುವಂತೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್‌ ಮನೆ ಬಿಟ್ಟು ಹೋಗಲು ನಿರ್ಧರಿಸಿದ್ದರು. ತಾಯಿಯನ್ನು ಮನೆಗೆ ಬರಲು ಹೇಳಿ ಅ. 10ರಂದು ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್‌ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.

ಅ. 29ರಂದು ಬೆಳಗ್ಗೆ 10.30ಕ್ಕೆ ಗಂಟೆಗೆ ಜ್ಯೂಲಿಯೆಟ್‌ ಮನೆಯಲ್ಲಿದ್ದಾಗಲೇ ಸುನೀತಾ ಅವರು ಸ್ಟ್ಯಾನಿ ಅವರೊಂದಿಗೆ ಮನೆಗೆ ಬಂದು ಐ.ಟಿ. ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಮನೆಗೆ ರೈಡ್‌ ಮಾಡುತ್ತಾರೆ. ಲಾಕರ್‌ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆಯಬೇಕು ಎಂದು ಹೇಳಿ ಲಾಕರ್‌ ಕೀ ತೆಗೆದುಕೊಂಡು ಲಾಕರ್‌ ಓಪನ್‌ ಮಾಡಿ ಅದರಲ್ಲಿ ಇದ್ದ ಹಣದಲ್ಲಿ 1.50 ಲಕ್ಷ ರೂ.ಗಳನ್ನು ಜ್ಯೂಲಿಯೆಟ್‌ ಅವರ ಬ್ಯಾಗ್‌ ಗೆ ಹಾಕಿ ಉಳಿದ 7 ಲಕ್ಷ 50 ಸಾವಿರ ರೂ. ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ನೆಕ್ಲೆಸ್‌ ಅವಳ ಚೀಲದಲ್ಲಿ ಹಾಕಿಕೊಂಡು ನನ್ನಲ್ಲಿ ಇರಲಿ ಆನಂತರ ಕೊಡುತ್ತೇನೆ ಎಂದು ಹೇಳಿದ್ದರು. ಐ.ಟಿ.ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಸುನೀತಾ ಹಾಗೂ ಸ್ಟಾನಿ7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ಸರವನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Electricity

Adani;ಬಿಲ್‌ ಕೊಡದ್ದಕ್ಕೆ ಬಾಂಗ್ಲಾಕ್ಕೆ ಆಂಶಿಕ ವಿದ್ಯುತ್‌

1-adsadsa

Pakistan;ಬಾಂಬ್‌ ದಾಳಿಗೆ 5 ಮಕ್ಕಳು ಸೇರಿ 9 ಜನ ಸಾ*ವು

1-a-chenab

China ಚಿತಾವಣೆ ಹಿನ್ನೆಲೆ: ಚೆನಾಬ್‌ ಬ್ರಿಡ್ಜ್ ಮಾಹಿತಿ ಸಂಗ್ರಹಿಸುತ್ತಿರುವ ಪಾಕ್‌

yogi-2

UP; ‘ಜುಡೇಂಗೆ ಜೀತೇಂಗೆ’: ಸಿಎಂ ಯೋಗಿ ಹೇಳಿಕೆಗೆ ಎಸ್‌ಪಿ ತಿರುಗೇಟು!

GST

GST; ಅಕ್ಟೋಬರಲ್ಲಿ 1.87 ಲಕ್ಷ ಕೋಟಿ ಸಂಗ್ರಹ: 2ನೇ ಗರಿಷ್ಠ!

1-a-rb

Rohit Bal; ಖ್ಯಾತ ಫ್ಯಾಷನ್‌ ಡಿಸೈನರ್‌ ರೋಹಿತ್‌ ಬಲ್‌ ನಿಧನ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Padubidri: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್‌ ಢಿಕ್ಕಿ… ಮಹಿಳೆಗೆ ಗಾಯ

Padubidri: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್‌ ಢಿಕ್ಕಿ… ಮಹಿಳೆಗೆ ಗಾಯ

28

Indrali ರೈಲ್ವೇ ನಿಲ್ದಾಣಕ್ಕೆ ಶೆಲ್ಟರ್‌ ಅಳವಡಿಕೆ

27

Deepavali ಹಿರಿಯರ ನೆನಪಿನ ಬೆಳಕು; ನರಕ ಚತುರ್ದಶಿಗೂ ಮೊದಲೇ ನಡೆಯುತ್ತದೆ ಸೈತಿನಕ್ಲೆನ ಪರ್ಬ

Udupi District Rajyotsava Award for Udupi District Working Journalists Association

Udupi: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

puttige-2

Udupi; ಗೀತಾರ್ಥ ಚಿಂತನೆ 82: ಮೊದಲು ವಿಷಾದ ಯೋಗ, ಕೊನೆಗೆ ಅಮೃತ ಯೋಗ!

congress

Goa; 8 ಶಾಸಕರ ಅನರ್ಹಕ್ಕೆ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

Suresh Gopi

AMMA; ಶೀಘ್ರದಲ್ಲೇ ನೂತನ ಸಮಿತಿ: ಸುರೇಶ್‌ ಗೋಪಿ

Electricity

Adani;ಬಿಲ್‌ ಕೊಡದ್ದಕ್ಕೆ ಬಾಂಗ್ಲಾಕ್ಕೆ ಆಂಶಿಕ ವಿದ್ಯುತ್‌

sens-2

Deepavali; ಮುಹೂರ್ತ ಟ್ರೇಡಿಂಗ್‌ನಲ್ಲಿ 448 ಅಂಕ ಏರಿದ ಸೆನ್ಸೆಕ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.