ಮೆದುಳು ಜ್ವರ ತಡೆಗಟ್ಟಲು ಜೆಇ ಲಸಿಕಾ ಅಭಿಯಾನ; ಮಕ್ಕಳ ಆರೋಗ್ಯಕ್ಕೆ ಅಗತ್ಯ: ಕೂರ್ಮಾರಾವ್
Team Udayavani, Dec 5, 2022, 7:13 PM IST
brain fever,
ಉಡುಪಿ: ಜಿಲ್ಲೆಯಲ್ಲಿನ 1ರಿಂದ 15 ವರ್ಷದೊಳಗಿನ ಮಕ್ಕಳು ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅತ್ಯಗತ್ಯವಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಪಡೆಯಲು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.
ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೆದುಳು ಜ್ವರವು 1 ರಿಂದ 15 ವರ್ಷದೊಳಗಿನ ಮಕ್ಕಳನ್ನು ಬಾಧಿಸುವುದರಿಂದ ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವೈಕಲ್ಯ ಹಾಗೂ ಮರಣ ಸಂಭವಿಸುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆಯಾಗಿ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲ ಎಂದರು.
1,932 ಲಸಿಕಾ ಕೇಂದ್ರ
ಜಿಲ್ಲೆಯಲ್ಲಿ ಈ ಲಸಿಕಾ ಅಭಿಯಾನದಲ್ಲಿ 2,18,324 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಒಟ್ಟು 1,932 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ. ಶಾಲೆ, ಅಂಗನವಾಡಿ, ಆರೋಗ್ಯ ಕೇಂದ್ರ ಮತ್ತು ಸಮುದಾಯ ಮಟ್ಟದಲ್ಲಿ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರೋಗ್ಯ ಇಲಾಖೆ ಸಿಬಂದಿ ಈ ಕಾರ್ಯಕ್ರಮದಲ್ಲಿ ಶೇ.100 ಗುರಿ ಸಾಧಿಸುವಂತೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ನಾಗಭೂಷಣ ಉಡುಪ ಪ್ರಾಸ್ತಾವನೆಗೈದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮರಾವ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು, ಜಿಲ್ಲಾಸ್ಪತ್ರೆಯ ವೈದ್ಯೆ ಡಾ| ವೀಣಾ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ| ಕೀರ್ತಿನಾಥ್ ಬಲ್ಲಾಳ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ವೀಣಾ ವಿವೇಕಾನಂದ, ಬೋರ್ಡ್ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯಿನಿ ಶಾಂತಿ ಪೈ, ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ನಾಗರತ್ನಾ ಸ್ವಾಗತಿಸಿ, ವಂದಿಸಿದರು. ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ| ಎಂ.ಜಿ. ರಾಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.