Jewellery ಉದ್ಯೋಗ ತರಬೇತಿ: ಸರಕಾರಿ ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ವಿನೂತನ ಯೋಜನೆ

Team Udayavani, Nov 13, 2023, 6:50 AM IST

Jewellery ಉದ್ಯೋಗ ತರಬೇತಿ: ಸರಕಾರಿ ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ವಿನೂತನ ಯೋಜನೆ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಅನಂತರದ ಹಾಸ್ಟೆಲ್‌ಗ‌ಳಲ್ಲಿದ್ದು ವ್ಯಾಸಂಗ ಮಾಡುತ್ತಿರುವ ಆಯ್ದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸದ ಜತೆಗೆ ಆಭರಣ ಉತ್ಪಾದನೆ, ವಿನ್ಯಾಸ ತರಬೇತಿಯೂ ಸಿಗಲಿದೆ.

ಕಲಿಕೆಯ ಜತೆಗೆ ಸ್ವೋದ್ಯೋಗಕ್ಕೆ ಪೂರಕವಾಗುವ ತರಬೇತಿ ನೀಡುವ ಉದ್ದೇಶದಿಂದ ಉಡುಪಿಯ ಕರಾವಳಿ ಬೈಪಾಸ್‌ನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಜೆಮ್ಸ್‌ ಆ್ಯಂಡ್‌ ಜುವೆಲರಿ (ಐಐಜಿಜೆ)ಯಲ್ಲಿ ಅಲ್ಪಾವಧಿ ತರಬೇತಿ ಒದಗಿಸುವ ಪ್ರಸ್ತಾವನೆಗೆ ಅಂಗೀಕಾರ ದೊರೆತಿದ್ದು, ಮೊದಲ ಬ್ಯಾಚ್‌ನಲ್ಲಿ 30 ವಿದ್ಯಾರ್ಥಿನಿಯರಿಗೆ ತರಬೇತಿ ಸಿಗಲಿದೆ.

ಓರಿಯಂಟೇಶನ್‌
ಐಐಜಿಜೆ ತರಬೇತುದಾರರು ಹಾಸ್ಟೆಲ್‌/ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಜೆಮ್ಸ್‌ ಮತ್ತು ಜುವೆಲರಿ ತರಬೇತಿ ಹೇಗಿರಲಿದೆ ಎಂಬುದರ ಬಗ್ಗೆ ಓರಿಯಂಟೇಶನ್‌ ನೀಡಿದ್ದಾರೆ. ಅನಂತರ ಇಲಾಖೆಯ ಅಧಿಕಾರಿಗಳು ತರಬೇತಿಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿನಿಯರ ಪಟ್ಟಿ ಸಿದ್ಧಪಡಿಸಿ 30 ಮಂದಿಯನ್ನು ಆಯ್ಕೆ ಮಾಡಿದ್ದಾರೆ.

ಒಂದು ತಿಂಗಳು ತರಬೇತಿ
ಅಂತಿಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡಲಾಗಿದೆ. ತರಬೇತಿ ಒಂದು ತಿಂಗಳು ಇರಲಿದೆ.

ಸೋಮವಾರದಿಂದ ಶುಕ್ರವಾರ ದವರೆಗೆ ಕಾಲೇಜು ಅವಧಿ ಮುಗಿದ ಅನಂತರ ಎರಡು ತಾಸು ತರಬೇತಿ ಮತ್ತು ವಾರಾಂತ್ಯದಲ್ಲಿ ವಿದ್ಯಾರ್ಥಿಗಳ ಆಸಕ್ತಿಗೆ ಅನುಸಾರವಾಗಿ ಹೆಚ್ಚುವರಿ ತರಬೇತಿ ನಡೆಯಲಿದೆ ಎಂದು ಐಐಜಿಜೆ ತರಬೇತುದಾರರೊಬ್ಬರು ಮಾಹಿತಿ ನೀಡಿದ್ದಾರೆ.

2ನೇ ಹಂತಕ್ಕೆ ಮತ್ತೆ ಪ್ರಸ್ತಾವನೆ
ಮೊದಲ ಬ್ಯಾಚ್‌ನ ತರಬೇತಿ ಮುಗಿಯುತ್ತಿದ್ದಂತೆ ಎರಡು ಬ್ಯಾಚ್‌ಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು. ಅದಕ್ಕೆ ಒಪ್ಪಿಗೆ ದೊರೆತ ಅನಂತರ ತರಬೇತಿ ನಡೆಯಲಿದೆ. ಸ್ಕಿಲ್‌ ಇಂಡಿಯಾ ಕಾರ್ಯಕ್ರಮದ ಭಾಗವಾಗಿ ತರಬೇತಿ ಇರಲಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜುವೆಲರಿ ಮೇಕಿಂಗ್‌

ಕೇಂದ್ರ ಸರಕಾರವು ಅಹ್ಮದಾಬಾದ್‌ನ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಡಿಸೈನ್‌ (ಎನ್‌ಐಡಿ) ಸಹ ಯೋಗ ದಲ್ಲಿ ಮುಂಬಯಿ, ವಾರಾಣಸಿ, ಜೈಪುರ, ದಿಲ್ಲಿ ಹಾಗೂ ಉಡುಪಿಯಲ್ಲಿ ಐಐಜಿಜೆ ಸ್ಥಾಪಿಸಿದೆ. ಜೆಮ್ಸ್‌ ಆ್ಯಂಡ್‌ ಜುವೆಲರಿಗೆ ಸಂಬಂಧಿಸಿದ ಕೋರ್ಸ್‌ಗಳನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ನೀಡಲಾಗುತ್ತದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ವಿಶೇಷ ಆಸಕ್ತಿ ವಹಿಸಿ ಉಡುಪಿಯಲ್ಲಿ ಈ ಕೇಂದ್ರ ಸ್ಥಾಪಿಸಿದ್ದಾರೆ. ಈಗಾಗಲೇ 360ಕ್ಕೂ ಅಧಿಕ ಮಂದಿ ತರಬೇತಿ ಪಡೆದಿದ್ದಾರೆ. ಉಡುಪಿಯಲ್ಲಿ ನಾಲ್ವರು ತರಬೇತುದಾರರಿದ್ದಾರೆ.

ನಿರ್ಮಲಾ ಸೀತಾರಾಮನ್‌ ಪ್ರತಿಕ್ರಿಯೆ
ಐಐಜಿಜೆ ವಿಶೇಷ ಕಾರ್ಯಕ್ರಮದಡಿ ಆಭರಣ ತಯಾರಿಕೆ ಮತ್ತು ವಿನ್ಯಾಸ ತಾಂತ್ರಿಕತೆಯನ್ನು ಬೋಧಿಸುತ್ತದೆ. ಚಿನ್ನದ ಆಭರಣ ತಯಾರಿಕೆಯಲ್ಲಿ ವಿದ್ಯಾರ್ಥಿನಿಯರಿಗೆ ಚಿನ್ನದ ತಂತಿ (ವೈರ್‌) ಸಿದ್ಧಪಡಿಸುವ ಕೆಲಸ, ಬೆಸುಗೆ ಹಾಕುವುದು, ಅಂತಿಮ ವಿನ್ಯಾಸ ಕೊಡುವ “ಫೈಲಿಂಗ್‌ ವರ್ಕ್‌’, ಪಾಲಿಶ್‌ ಮಾಡುವುದು ಮತ್ತು ಆಭರಣವಾಗಿ ಸಿದ್ಧಪಡಿಸುವ ಪ್ರಾಯೋಗಿಕ ಕೌಶಲಗಳನ್ನು ಕಲಿಸಿಕೊಡಲಾಗುತ್ತದೆ. ರತ್ನ ಮತ್ತು ಆಭರಣ ಉದ್ಯಮದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಅನುವು ಮಾಡಿಕೊಡಲು ಈ ಕೌಶಲವು ಅತ್ಯಗತ್ಯವಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಎಕ್ಸ್‌ (ಟ್ವೀಟ್‌)ನಲ್ಲಿ ತಿಳಿಸಿದ್ದಾರೆ.

ವಿವಿಧ ಕೋರ್ಸ್‌ಗಳು
ಬನ್ನಂಜೆ ಮತ್ತು ದೊಡ್ಡಣಗುಡ್ಡೆಯ ಹಾಸ್ಟೆಲ್‌ ಗಳ ವಿದ್ಯಾರ್ಥಿನಿಯರನ್ನು ಮೊದಲ ಹಂತ ದಲ್ಲಿ ಆಯ್ಕೆ ಮಾಡಲಾಗಿದೆ. 30 ದಿನ ಗಳ ತರಬೇತಿಯಲ್ಲಿ ವಿದ್ಯಾರ್ಥಿನಿಯರಿಗೆ ಮುಖ್ಯ ವಾಗಿ ಆಭರಣ ಮೇಕಿಂಗ್‌ ಆ್ಯಂಡ್‌ ಮ್ಯಾನು ಫ್ಯಾಕ್ಚರಿಂಗ್‌, ಬೆಂಚ್‌ವರ್ಕ್‌, ಡಿಸೈನ್‌, ಫಿನಿಶಿಂಗ್‌, ಲೇಪನದ ಜತೆಗೆ ವಿನ್ಯಾಸದ ತಾಂತ್ರಿಕತೆಯ ಉಚಿತ ತರಬೇತಿ ನೀಡಲಾಗುತ್ತದೆ.

30 ವಿದ್ಯಾರ್ಥಿನಿಯರು ಮೊದಲ ಬ್ಯಾಚ್‌ನಲ್ಲಿ ಕೌಶಲಾಧಾರಿತ ತರಬೇತಿಯ ಜತೆಗೆ ಕೆರಿಯರ್‌ ಡೆವಲಪ್‌ಮೆಂಟ್‌ಗೆ ಅನುಕೂಲವಾಗುವಂತೆ ಜೆಮ್ಸ್‌ ಆ್ಯಂಡ್‌ ಜುವೆಲರಿ ತರಬೇತಿ ಪಡೆಯಲಿದ್ದಾರೆ.
-ಅನಿತಾ ವಿ. ಮಡ್ಲೂರು, ಉಪನಿರ್ದೇಶಕಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.