ಕಚ್ಚಾರು ದೇಗುಲ ಅಭಿವೃದ್ಧಿ: ಪ್ರಮೋದ್‌ ಮಧ್ವರಾಜ್‌


Team Udayavani, Jan 22, 2018, 11:33 AM IST

22-21.jpg

ಬ್ರಹ್ಮಾವರ: ಕಚ್ಚಾರು ಮಾಲ್ತಿದೇವಿ ಹಾಗೂ ಬಬ್ಬುಸ್ವಾಮಿ ಮೂಲಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಸತಿ ನಿಲಯ ಸ್ಥಾಪನೆ ಹಾಗೂ ಒಂದು ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ಮುಂತಾದ ಅಭಿವೃದ್ಧಿ ಕಾರ್ಯಗಳಿಗಾಗಿ ಸರಕಾರಕ್ಕೆ ಪ್ರಸ್ತಾವನೆ ಹಾಗೂ ಮನವಿ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಬೇಡಿಕೆ ಈಡೇರುವ ನಿರೀಕ್ಷೆ ಇದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು ರವಿವಾರ ಬಾರ್ಕೂರು ಕಚ್ಚಾರು ಮಾಲ್ತಿ ದೇವಿ ಹಾಗೂ ಬಬ್ಬುಸ್ವಾಮಿ ಮೂಲಕ್ಷೇತ್ರದಲ್ಲಿ ಜಾತ್ರೆಯ ಪ್ರಯುಕ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸಮ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣಕ್ಕೆ ಎಲ್ಲದಕ್ಕಿಂತ ಹೆಚ್ಚಿನ ಶಕ್ತಿ ಇದೆ. ಆದ್ದರಿಂದ ನಿಮ್ಮ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣವನ್ನು ನೀಡಿ. ನಿಮ್ಮ ಎಲ್ಲ ಅಭಿವೃದ್ಧಿ ಕಾರ್ಯಗಳಲ್ಲೂ ಕೈ ಜೋಡಿಸುತ್ತೇನೆ ಎಂದರು.

ಕ್ಷೇತ್ರದ ಇನ್ನಷ್ಟು ಅಭಿವೃದ್ಧಿ ಅಗತ್ಯ
ನನ್ನ ಶಾಸಕತ್ವದ ಅವಧಿಯಲ್ಲಿ ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಲವು ರೀತಿಯಲ್ಲಿ ಸಹಕಾರ ನೀಡಿದ್ದೇನೆ. ವಸತಿ ನಿಲಯ, ಶಿಕ್ಷಣ ಸಂಸ್ಥೆ, ಕ್ಷೇತ್ರದ ಅಭಿವೃದ್ಧಿ ಹೀಗೆ ಹಲವಾರು ಕಾರ್ಯಗಳು ಇಲ್ಲಿ ನಡೆಯಬೇಕಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಕೆ. ರಘುಪತಿ ಭಟ್‌ ಹೇಳಿದರು. ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಪಿ. ಬಾಬು ಮಲ್ಲಾರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಾಧಕರಿಗೆ ಸಮ್ಮಾನ
ಈ ಸಂದರ್ಭ ವಿವಿಧ ಕ್ಷೇತ್ರಗಳ ಸಾಧಕರಾದ ನಿವೃತ್ತ ಸೈನಿಕ ಬಿ. ಸಂಜೀವ ರಾವ್‌, ರವಿ ಎಸ್‌. ಕಟಪಾಡಿ, ನಿಖೀತ, ಸಂಚಲನ ತಂಡ ಹಾಗೂ ಮುರುಳಿ ಕುಮಾರ್‌ ಅವರನ್ನು ಸಮ್ಮಾನಿಸಲಾಯಿತು. ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಡುಪಿ ತಾಲೂಕು ಪಂಚಾಯತ್‌ ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ವಿಶ್ವ ಹಿಂದೂ ಪರಿಷತ್‌ ಮಾಜಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್‌ ಶೆಟ್ಟಿ, ಮಂಗಳೂರು ಮನಪಾ ಉಪ ಮೇಯರ್‌ ರಜನೀಶ್‌ ಅವರನ್ನು ಗೌರವಿಸಲಾಯಿತು ಹಾಗೂ ಸಮಾಜದ ಶೈಕ್ಷಣಿಕ ಸಾಧಕರನ್ನು ಸಮ್ಮಾನಿಸಲಾಯಿತು.

ಸಿಂಡಿಕೇಟ್‌ ಬ್ಯಾಂಕ್‌ ನಿವೃತ್ತ ಅಧಿಕಾರಿ ಎಸ್‌. ನಾರಾಯಣ, ನಿವೃತ್ತ ಅಧಿಕಾರಿಗಳಾದ ಗುರುವಪ್ಪ, ಹರಿಶ್ಚಂದ್ರ ಹೊಗೆ ಬಜಾರ್‌, ಎಂ.ಬಿ. ಜಯ, ಗುರಿಕಾರರಾದ ಹರಿಶ್ಚಂದ್ರ ಪಿಲಾರ್‌, ಶಂಕರಪ್ಪ, ಸುಂದರ್‌ ಎನ್‌., ವೆಂಕಪ್ಪ, ಬಾಲಕೃಷ್ಣ ಎಸ್‌., ಪೂವಪ್ಪ ಅಮೀನ್‌, ಕೃಷ್ಣಪ್ಪ, ಕಾಡ್ಯಾ, ಸತೀಶ್‌ ಬಿ. ಅಮೀನ್‌, ವಸಂತ್‌, ಮಂಜುನಾಥ, ಆನಂದ್‌, ಶಂಕರ ಬಿ.ಎಮ್‌., ನಾಗೇಶ್‌, ನರಸಿಂಹ ಉಪಸ್ಥಿತರಿದ್ದರು.

ಆಡಳಿತ ಮಂಡಳಿಯ ಕಾರ್ಯದರ್ಶಿ ಗೋಕುಲ್‌ದಾಸ್‌ ಸ್ವಾಗತಿಸಿ, ಉಪನ್ಯಾಸಕ ಪ್ರೇಮಾನಂದ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.