Kadaba ನಾಪತ್ತೆಯಾಗಿರುವ ವ್ಯಕ್ತಿಗಾಗಿ ಹುಡುಕಾಟ
Team Udayavani, Aug 27, 2023, 12:40 AM IST
ಕಡಬ: ಎಡಮಂಗಲ ಗ್ರಾಮದ ಪಾದೆ ಮನೆ ನಿವಾಸಿ, ಕೂಲಿ ಕಾರ್ಮಿಕ ಬಾಲಕೃಷ್ಣ ಗೌಡ (56) ಅವರು ಕಳೆದ 25 ದಿನಗಳ ಹಿಂದೆ ನಾಪತ್ತೆಯಾಗಿದ್ದು, ಅವರು ಕುಮಾರಧಾರ ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆಯಿಂದ ಕಡಬ ಸಮೀಪದ ಪಿಜಕಳ ಬಳಿ ನದಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ಸದಸ್ಯರು ಶನಿವಾರ ಹುಡುಕಾಟ ನಡೆಸಿದರು.
ಬಾಲಕೃಷ್ಣ ಗೌಡ ಅವರು ಜು. 31ರಂದು ಮನೆಯಿಂದ ಹೊರ ಹೋದವರು ನಾಪತ್ತೆಯಾಗಿದ್ದರು. ಅಂದು ಮಧ್ಯಾಹ್ನ ಕಡಬದ ಪಿಜಕಳ ಬಳಿ ಅಂಗಡಿಯೊಂದಕ್ಕೆ ಹೋಗಿದ್ದ ಅವರು ಬಳಿಕ ಪಿಜಕಳ ಪಾಲೋಳಿ ಕಡೆ ತೆರಳಿರುವುದನ್ನು ಅಂಗಡಿ ಮಾಲಕರು ಗಮನಿಸಿದ್ದರು. ಪಾಲೋಳಿಯಲ್ಲಿ ಕುಮಾರಧಾರ ನದಿಗೆ ಬೃಹತ್ ಸೇತುವೆ ನಿರ್ಮಾಣವಾಗುತ್ತಿದ್ದು, ಅದರ ಕೆಳ ಭಾಗದಲ್ಲಿ ಕೆಲವರು ನೀರು ಕಡಿಮೆ ಇದ್ದಾಗ ನದಿ ದಾಟಿ ಎಡಮಂಗಲ ಭಾಗಕ್ಕೆ ಹೋಗುತ್ತಾರೆ. ಬಾಲಕೃಷ್ಣ ಗೌಡರು ಕೂಡ ಪಾಲೋಳಿ ಕಡೆ ಹೆಜ್ಜೆ ಹಾಕಿರುವುದರಿಂದ ಅವರು ಕೂಡ ನದಿ ದಾಟಿ ಹೋಗಲು ಯತ್ನಿಸಿ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿರಬಹುದೆಂದು ಶಂಕಿಸಲಾಗಿದೆ. ಅದಕ್ಕೆ ಪೂರಕವೆಂಬಂತೆ ಅವರ ಬಳಿ ಇದ್ದ ಕೈ ಚೀಲವೊಂದು ನಾಡೋಳಿ ಎಂಬಲ್ಲಿ ಕುಮಾರಧಾರ ನದಿ ತಟದಲ್ಲಿ ಕೆಲವು ದಿನಗಳ ಹಿಂದೆ ಪತ್ತೆಯಾಗಿತ್ತು. ಆ ಹಿನ್ನೆಲೆಯಲ್ಲಿ ಈಗಾಗಲೇ ಬೆಳ್ಳಾರೆ ಪೊಲೀಸರು ನದಿ ಭಾಗದಲ್ಲಿ ಹುಡುಕಾಟ ನಡೆಸಿದ್ದಾರೆ.
ಶನಿವಾರ ಶೌರ್ಯ ತಂಡದ 8 ಜನ ಪರಿಣತಿ ಪಡೆದ ಈಜುಗಾರರು ಕುಮಾರಧಾರ ನದಿಯ ಪಾಲೋಳಿಯಿಂದ ಕೂಡಿಗೆ ತನಕ ಹುಡುಕಾಟ ನಡೆಸಿದರು. ಬೆಳಗ್ಗೆಯಿಂದ ಸಂಜೆಯ ತನಕ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತ ಮನೆಯವರು ಬಾಲಕೃಷ್ಣ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಕಂಗಾಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.