ಕಲ್ಲೋಳಿ ಕಿಂಡಿ ಅಣೆಕಟ್ಟು: ರಸ್ತೆ ಇಲ್ಲದೆ ಇಕ್ಕಟ್ಟು!

ಹಳೆಯ ಅಣೆಕಟ್ಟು ಸೇತುವೆ ಮುಳುಗಿ ನಿತ್ಯ ಸಂಚಾರಿಗಳಿಗೆ ಸಮಸ್ಯೆ

Team Udayavani, Jan 13, 2020, 5:48 AM IST

0601BELMNE3A

ಜನರಿಗೆ ಉಪಕಾರಿಯಾದ ನಲ್ಲೆಗುತ್ತು ಕಿಂಡಿ ಅಣೆಕಟ್ಟು ಕಾರ್ಯ ಮುಗಿದಿದೆ. ಆದರೆ ಇದರೊಂದಿಗೇ ಪೂರ್ಣಗೊಳ್ಳಬೇಕಿದ್ದ ಸಂಪರ್ಕ ರಸ್ತೆ ಕಾಮಗಾರಿ ವಿಳಂಬಗೊಂಡಿರುವುದರಿಂದ ನೀರು ತುಂಬಿ ಜನರು ಪರದಾಡುವಂತಾಗಿದೆ.

ಬೆಳ್ಮಣ್‌: ಕಡಂದಲೆ ಕಲ್ಲೋಳಿಯ ನಲ್ಲೆಗುತ್ತು ಬಳಿ ನೂತನವಾಗಿ ನಿರ್ಮಿಸಲಾದ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕಿದ್ದರಿಂದ ನೀರು ತುಂಬಿದ್ದು ಈಗ ರಸ್ತೆ ಸಂಪರ್ಕವಿಲ್ಲದೆ ಜನರು ಪರದಾಡುವಂತಾಗಿದೆ.

ಹೊಸ ಅಣೆಕಟ್ಟಿನಲ್ಲಿ ನೀರು ತುಂಬಿದಂತೆಯೇ ಹಳೆಯ ಅಣೆಕಟ್ಟು-ಸೇತುವೆ ಮುಳುಗಿದ್ದು ಶಾಲಾ ಮಕ್ಕಳು, ಸಾರ್ವಜನಿಕರು ನೀರು ತುಂಬಿದ ಪ್ರದೇಶದಲ್ಲೇ ಅಪಾಯಕಾರಿಯಾಗಿ ಸಂಚರಿಸುವಂತಾಗಿದೆ.

ಸಂಪರ್ಕ ರಸ್ತೆ ಆಗಿಲ್ಲ
ನೂತನ ಕಿಂಡಿ ಅಣೆಕಟ್ಟುವಿಗೆ ರಸ್ತೆ ಸಂಪರ್ಕ ನಡೆಯದ ಕಾರಣ ಜನ ಈ ಹಿಂದಿನ ಓಡಾಟಕ್ಕಿದ್ದ ಹಳೆಯ ಸೇತುವೆಯನ್ನೇ ಬಳಸುತ್ತಿದ್ದಾರೆ.ಇಲ್ಲಿ ಸುಮಾರು 500 ಮೀಟರ್‌ನಷ್ಟು ರಸ್ತೆ ಕಾಮಗಾರಿ ಬಾಕಿ ಇದೆ. ಏತನ್ಮಧ್ಯೆ ನೀರು ತುಂಬಿದ್ದರೂ ಅದರ ಮೇಲೆಯೇ ಜನ ಸಂಚಾರ ನಡೆಯುತ್ತಿದೆ. ನೂತನ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣವಾದರೂ ಸಂಪರ್ಕ ರಸ್ತೆಯನ್ನು ಗುತ್ತಿಗೆದಾರರು ನಿರ್ಮಿಸದ್ದರಿಂದ ಜನರು ಕಷ್ಟಪಡುತ್ತಿದ್ದಾರೆ.

ನೀರಿನ ಮಟ್ಟ ಹೆಚ್ಚಳವಾಗಿ ಸಮಸ್ಯೆ
ಹೊಸ ಸೇತುವೆಯ ಅಣೆಕಟ್ಟುವಿಗೆ ಹಲಗೆ ಹಾಕಿದ ಬಳಿಯ ಹಳೆಯ ಅಣೆಕಟ್ಟಿನ ಸೇತುವೆ ಹಲವು ಬಾರಿ ಮುಳುಗಡೆಯಾಗಿದ್ದು ಪಕ್ಕದ ಕೃಷಿ ಭೂಮಿಗೂ ನೀರು ಆವರಿಸಿತ್ತು. ಸ್ಥಳೀಯರು ಅಪಾಯವನ್ನರಿತು ಒಂದು ಕಿಂಡಿಯನ್ನು ತೆರವು ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಕಲ್ಪಿಸಿದ್ದರು. ಇದಲ್ಲದೆ ಬೋಳ ಪಾಲಿಂಗೇರಿಯಲ್ಲಿರುವ ಅಣೆಕಟ್ಟಿನ ಹಲಗೆಯನ್ನುತೆರವು ಮಾಡಿದ್ದರಿಂದ ಇಲ್ಲಿ ನೀರಿನ ಮಟ್ಟ ಹೆಚ್ಚಾಗಿತ್ತು. ಜತೆಗೆ ನಲ್ಲೆಗುತ್ತು ಹಳೆಯ ಅಣೆಕಟ್ಟಿನ ಸೇತುವೆ ಸಂಪೂರ್ಣ ಮುಳುಗಡೆಯಾಗಿ ರಸ್ತೆಯುದ್ದಕ್ಕೂ ನೀರು ಆವರಿಸಿದೆ. ಇದರಿಂದ ಬೋಳ, ಕಡಂದಲೆ ಹಾಗೂ ಸಚ್ಚೇರಿಪೇಟೆ ಭಾಗದ ಜನ ಸಂಚಾರ ದುಸ್ತರವಾಗಿದೆ.

ರಸ್ತೆಯಲ್ಲೇ ಬಾಕಿ
ಇತ್ತೀಚೆಗೆ ಶಾಲೆ ಬಿಟ್ಟು ಮನೆಗೆ ತೆರಳಬೇಕಾದ ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ಉಳಿಯಬೇಕಾಯಿತು. ನೀರು ಅಣೆಕಟ್ಟೆ ಮೇಲ್ಭಾಗದಲ್ಲಿ ಹರಿಯುತ್ತಿತ್ತು. ಒಂದಷ್ಟು ವಾಹನಗಳು ನೀರಿನ ನಡುವೆ ಸಾಹಸ ಮಾಡಿಕೊಂಡು ರಸ್ತೆಯನ್ನು ದಾಟಿದರೆ ಶಾಲಾ ಮಕ್ಕಳನ್ನು ಹೊತ್ತು ತಂಡ ವಾಹನಗಳು ರಸ್ತೆಯಲ್ಲೇ ಉಳಿಯುವಂತಾಯಿತು. ಬಳಿಕ ವಿದ್ಯಾರ್ಥಿಗಳನ್ನು ಸ್ಥಳೀಯರು ನೀರಿನ ನಡುವೆ ದಡ ಸಾಗಿಸುವ ಪ್ರಯತ್ನವನ್ನು ಮಾಡಿದರು. ಕೆಲವು ವಾಹನ ಸವಾರರು ನೀರಿನ ಮಟ್ಟ ಕಡಿಮೆಯಾಗುವವರೆಗೂ ಕಾದು ಬಳಿಕ ಮನೆ ಸೇರಿದರು.

ನಲ್ಲೆಗುತ್ತು ಹಳೆ ಅಣೆಕಟ್ಟಿನ ಮೂಲಕ ಸುಗಮವಾಗಿ ದಾಟಬಹುದಾಗಿದ್ದರೂ, ನೀರು ತುಂಬಿರುವುದರಿಂದ ಮುಳುಗಿದೆ. ನಿತ್ಯ ಶಾಲಾ ಮಕ್ಕಳು ಇದೇ ದಾರಿಯಲ್ಲಿ ಸಂಚರಿಸಬೇಕಾಗಿರುವುದರಿಂದ ಯಾರಾದರೂ ಹಿರಿಯರು ಇದ್ದುಕೊಂಡೇ ಅಣೆಕಟ್ಟು ದಾಟಬೇಕಾಗಿದೆ.

ರಸ್ತೆ ಸಂಪರ್ಕ ಕಲ್ಪಿಸಲು ಆಗ್ರಹ
ಹಳೆಯ ಅಣೆಕಟ್ಟಿನ ಪಕ್ಕದಲ್ಲೇ ನೂತನ ಸೇತುವೆಯನ್ನು ನಿರ್ಮಿಸಿದ್ದರೂ ಅದಕ್ಕೆ ಸಂಪರ್ಕವನ್ನು ಇನ್ನೂ ಕಲ್ಪಿಸಿಲ್ಲ ಹೀಗಾಗಿ ಅಪಾಯಕಾರಿಯಾಗಿರುವ ಹಳೆಯ ಸೇತುವೆಯಲ್ಲೇ ನದಿ ನೀರಿನ ಮಧ್ಯೆ ವಿದ್ಯಾರ್ಥಿಗಳು ವಾಹನ ಸವಾರರು ಅತ್ತಿತ್ತ ನಿತ್ಯ ಸಾಗಬೇಕಾದ ಅನಿವಾರ್ಯ ಎದುರಾಗಿದೆ. ಹೊಸ ಸೇತುವೆಯ ರಸ್ತೆ ಸಂಪರ್ಕಕ್ಕೆ ಮಣ್ಣು ತಂದು ರಾಶಿ ಹಾಕಿದರೂ ಸಂಪರ್ಕ ಕಲ್ಪಿಸಿಲ್ಲ. ಕೂಡಲೇ ಹೊಸ ಸೇತುವೆಗೆ ರಸ್ತೆಯ ಸಂಪರ್ಕವನ್ನು ಕಲ್ಪಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಶೀಘ್ರ ಕಾಮಗಾರಿ
ಗುತ್ತಿಗೆದಾರರ ವಿಳಂಬ ನೀತಿಯಿಂದ ಈ ತೊಂದರೆ ಉಂಟಾಗಿದೆ. ಬಿಲ್‌ ಪಾವತಿಯಾಗದ ಹಿನ್ನೆಲೆಯಲ್ಲಿ ಈ ವಿಳಂಬ ನಡೆದಿದೆ. ಆದರೂ ಎಚ್ಚರಿಕೆ ನೀಡಲಾಗಿದ್ದು ಸೇತುವೆ ಸಂಪರ್ಕ ಕೆಲಸ ನಡೆಯುತ್ತಿದೆ. ಈ ಬಾರಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಅಣೆಕಟ್ಟುವಿಗೆ ಬೇಗ ಹಲಗೆ ಹಾಕಿದ್ದರಿಂದ ನೀರಿನ ಹೆಚ್ಚಳ ಉಂಟಾಗಿ ಈ ತೊಂದರೆ ಆಗಿದೆ. ಕೆಲವೇ ದಿನಗಳಲ್ಲಿ ನೂತನ ಸೇತುವೆ ಸಂಪರ್ಕ ಕಾರ್ಯ ಪೂರ್ಣಗೊಳ್ಳಲಿದೆ..
-ಅರುಣ್‌, ಸಹಾಯಕ ಇಂಜಿನಿಯರ್‌ ,
ಸಣ್ಣ ನೀರಾವರಿ ಇಲಾಖೆ, ಉಡುಪಿ.

ಕ್ರಮ ಕೈಗೊಳ್ಳಲಾಗುವುದು
ಸಂಚಾರ ಅಪಾಯಕಾರಿಯಾಗಿರುವುದರ ಬಗ್ಗೆ ಗುತ್ತಿಗೆದಾರರಿಗೆ ತಿಳಿಸಿ ಕ್ರಮ ಕೈಗೊಳ್ಳಲಾಗುವುದು. ಅಕಾಲಿಕ ಮಳೆಯಿಂದಾಗಿ ನೀರಿನ ಮಟ್ಟ ಏರಿದೆ. ಇನ್ನು ಕಡಿಮೆಯಾಗಬಹುದು. ಕೃಷಿಕರ ಪ್ರಯೋಜನಕ್ಕಾಗಿ ಈ ಅಣೆಕಟ್ಟು ನಿರ್ಮಿಸಲಾಗಿದೆ.
-ಶುಭಾ ಪಿ. ಶೆಟ್ಟಿ,
ಮುಂಡ್ಕೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ

ಅಪಾಯಕಾರಿ
ಅಣೆಕಟ್ಟು ನಿರ್ವಹಣೆಯಿಂದಾಗಿ ನದಿಯಲ್ಲಿ ನೀರು ತುಂಬಿದ್ದು ಸೇತುವೆಗೆ ಯಾವುದೇ ತಡೆಬೇಲಿ ಇಲ್ಲದೆ ದಾಟಬೇಕಾಗಿದೆ. ಶಾಲೆಯ ಮಕ್ಕಳು ತುಂಬಿದ ನೀರಿನ ಮಧ್ಯೆ ಅಣೆಕಟ್ಟಿನಲ್ಲಿ ಸಾಗಬೇಕಾಗಿದೆ. ನೂತನ ಅಣೆಕಟ್ಟುವಿಗೆ ಕೂಡಲೇ ಸಂಪರ್ಕ ರಸ್ತೆ ಕಲ್ಪಿಸಿ.
-ನಾಗರಾಜ, ಸುರೇಶ್‌ ಶೆಟ್ಟಿ
ಸ್ಥಳೀಯರು

-ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.