ಇನ್ನೂ ದುರಸ್ತಿ ಕಾಣದ ಕಂಡ್ಲೂರು – ಅಂಪಾರು ರಾಜ್ಯ ಹೆದ್ದಾರಿ
Team Udayavani, Nov 6, 2018, 10:03 AM IST
ಕಂಡ್ಲೂರು: ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಬೆಸೆಯುವ ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿರುವ ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಕಂಡ್ಲೂರನಿಂದ ಅಂಪಾರಿಗೆ ಹೋಗುವ ರಸ್ತೆಯ ಅಲ್ಲಲ್ಲಿ ಹೊಂಡ – ಗುಂಡಿಗಳನ್ನು ಮುಚ್ಚುವ ಕಾರ್ಯ ಇನ್ನೂ ಆಗಿಲ್ಲ.
ರಾಜ್ಯ ಹೆದ್ದಾರಿಯ ಕಂಡ್ಲೂರಿನಿಂದ ಆರಂಭಗೊಂಡು ದೂಪದಕಟ್ಟೆ, ಮುಳ್ಳುಗುಡ್ಡೆ, ನೆಲ್ಲಿಕಟ್ಟೆ, ಅಂಪಾರುವರೆಗಿನ ಸುಮಾರು 5 ಕಿ.ಮೀ. ದೂರದ ರಸ್ತೆ ಯುದ್ದಕ್ಕೂ ಅನೇಕ ಕಡೆಗಳಲ್ಲಿ ದೊಡ್ಡ – ದೊಡ್ಡ ಹೊಂಡಗಳಿದ್ದು, ಇದರಿಂದ ಈ ಮಾರ್ಗದಲ್ಲಿ ಸಂಚರಿಸುವ ಸಾವಿರಾರು ಮಂದಿ ವಾಹನ ಸವಾರರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.
ಕುಂದಾಪುರದಿಂದ ಸಿದ್ದಾಪುರ, ಹೊಸಂಗಡಿ ಮಾರ್ಗವಾಗಿ ಬಾಳೆಬರೆ ಘಾಟಿ ಮೂಲಕವಾಗಿ ತೀರ್ಥಹಳ್ಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ – 52 ಇದಾಗಿದೆ. ನಿತ್ಯ ಸಾವಿರಕ್ಕೂ ಹೆಚ್ಚು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ದಿನಂಪ್ರತಿ ನೂರಾರು ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು, ಶಾಲಾ ವಾಹನಗಳು ಇದೇ ರಸ್ತೆ ಯನ್ನು ಅವಲಂಬಿಸಿವೆ.
ಶೀಘ್ರ ದುರಸ್ತಿಗೆ ಮುಂದಾಗಲಿ
ಕುಂದಾಪುರದಿಂದ ಬಸ್ರುರೂ, ಬಳ್ಕೂರುವರೆಗೆ ರಸ್ತೆ ಉತ್ತಮವಾಗಿದ್ದು ಕಂಡ್ಲೂರಿನಿಂದ ಈಚೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟಕರವಾಗಿದೆ. ಆದರೆ ಸಂಚಾರ ಮಾತ್ರ ಅನಿವಾರ್ಯವಾಗಿದೆ. ದೂಪದಕಟ್ಟೆ ಬಳಿಯಂತೂ ಪ್ರತೀ ವರ್ಷ ಹದಗೆಡುತ್ತದೆ. ಘನ ವಾಹನಗಳ ಸಂಚಾರದಿಂದ ಈ ರಸ್ತೆ ಮತ್ತಷ್ಟು ಹಾಳಾಗಿದೆ. ಇನ್ನಾದರೂ ಈ ರಸ್ತೆಯ ದುರಸ್ತಿ ಬಗ್ಗೆ ಗಮನಹರಿಸಲಿ ಎಂದು ಕಂಡ್ಲೂರು, ದೂಪದಕಟ್ಟೆ ಭಾಗದ ಸ್ಥಳೀಯರು ಆಗ್ರಹಿಸಿದ್ದಾರೆ.
ಭರವಸೆ ಈಡೇರಿಲ್ಲ
ಈ ಹದಗೆಟ್ಟ ರಾಜ್ಯ ಹೆದ್ದಾರಿಯ ಬಗ್ಗೆ ಉದಯವಾಣಿ ಕಳೆದ ಆ. 30 ರಂದು ವಿಸ್ತೃತ ವರದಿ ಪ್ರಕಟಿಸಿ ಗಮನಸೆಳೆದಿತ್ತು. ಆಗ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಳೆಗಾಲ ಮುಗಿದ ತತ್‌ಕ್ಷಣ ಮರು ಡಾಮರು ಮಾಡಲಾಗುವುದು ಎನ್ನುವ ಭರವಸೆ ನೀಡಿದ್ದರು. ಅದಾಗಿ 3 ತಿಂಗಳು ಕಳೆಯುತ್ತ ಬಂದರೂ, ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ.
ಶೀಘ್ರ ಮರು ಡಾಮರು
ಕಳೆದ ವರ್ಷ ಈ ರಾಜ್ಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದೆ. ಅವರು ಮರು ಡಾಮರು ಮಾಡಿ, ನಮಗೆ ಹಸ್ತಾಂತರಿಸುತ್ತಾರೆ. ಸಿಆರ್‌ಎಫ್ ಅನುದಾನದಡಿ ಈ ರಾಜ್ಯ ಹೆದ್ದಾರಿಯ ಮರು ಡಾಮರು ಶೀಘ್ರ ಆಗಬಹುದು.
ಚಂದ್ರಶೇಖರ್ ಕೆ.ಎಸ್. ಲೋಕೋಪಯೋಗಿ ಇಲಾಖೆ ಎಂಜಿನಿಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.