Kapu ಓವರ್‌ಟೇಕ್ ಮಾಡಿದ್ದಕ್ಕೆ ಹಲ್ಲೆ; ಓರ್ವ ಸೆರೆ
Team Udayavani, Sep 15, 2023, 10:45 PM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ಉಡುಪಿಯಿಂದ ಪಲಿಮಾರಿಗೆ ಹೋಗುತ್ತಿದ್ದ ಕಾರನ್ನು ಅಡ್ಡಗಟ್ಟಿ ಕಾರು ಚಾಲಕ ಸಹಿತ ಕಾರಿನಲ್ಲಿದ್ದವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಮೂಲದ ಇಮ್ರಾನ್ (30) ಬಂಧಿತ ಆರೋಪಿ. ಪಲಿಮಾರು ನಿವಾಸಿ ಗಣೇಶ ಪ್ರಸಾದ್ ಅವರು ತನ್ನ ಸ್ನೇಹಿತರಾದ ನಿತಿನ್ ಮತ್ತು ಜಿತೇಶ್ ಅವರೊಂದಿಗೆ ಕಾರಿನಲ್ಲಿ ಉಡುಪಿಗೆ ಹೋಗಿ ಕೆಲಸ ಮುಗಿಸಿ ರಾತ್ರಿ ವಾಪಸು ಪಲಿಮಾರಿಗೆ ತೆರಳುತ್ತಿದ್ದಾಗ ಕಾರಿಗೆ ಕೊಪ್ಪಲಂಗಡಿ ಬಳಿ ಮಾರುತಿ ಎರ್ಟಿಗಾ ಕಾರನ್ನು ಅಡ್ಡವಿಟ್ಟು 25-30 ವರ್ಷ ಪ್ರಾಯದ 4 ಮಂದಿ ಬೈದು ಹಲ್ಲೆ ನಡೆಸಿದ್ದರು. ಮಾತ್ರವಲ್ಲದೆ ಆರೋಪಿಗಳು ಕೈಯಿಂದ ಮತ್ತು ಅವರ ಕೈಯಲ್ಲಿದ್ದ ಆಯುಧಗಳಿಂದ ಕಾರಿಗೆ ಹೊಡೆದು ಕಾರನ್ನು ಜಖಂಗೊಳಿಸಿ ಪರಾರಿಯಾಗಿದ್ದಾರೆ.
ಕಾಪು ಎಸ್ಸೆ ಅಬ್ದುಲ್ ಖಾದರ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯನ್ನು ಅ. 25ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಉಳಿದ ಆರೋಪಿಗಳು ಮತ್ತು ಕಾರಿಗಾಗಿ ಪತ್ತೆ ಕಾರ್ಯ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.