ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ

Team Udayavani, May 15, 2022, 3:55 PM IST

Untitled-2

ಕಾಪು‌: ಕಾಪು ಬ್ಲಾಕ್‌ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಎಸ್. ಶೆಟ್ಟಿ ಮತ್ತು ಕಾಪು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ಎನ್. ಬಂಗೇರ ಅವರ ಪದಗ್ರಹಣ ಸಮಾರಂಭವು ಮೇ 15 ರಂದು ಕಾಪು ರಾಜೀವ ಭವನದಲ್ಲಿ ನಡೆಯಿತು.

ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಶಾಂತಲತಾ ಶೆಟ್ಟಿ, ಅಶ್ವಿನಿ ಎನ್. ಬಂಗೇರ ಅವರಿಗೆ ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರು ಆಸ್ತಿ. ಮಹಿಳೆಯರು ಪಕ್ಷದಲ್ಲಿ ತಮ್ಮನ್ನು ತಾವು ಹೆಚ್ಚಾಗಿ ತೊಡಗಿಸಿಕೊಳ್ಳುವುದರ ಮೂಲಕವಾಗಿ ಪಕ್ಷ ಸಂಘಟನೆಗೂ ಹೆಚ್ಚಿನ‌ ಒತ್ತು ನೀಡುವಂತೆ ಕರೆ ನೀಡಿದರು. ‌

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಮಾತನಾಡಿ, ಮಹಿಳೆಯರಿಗೆ ರಾಜಕೀಯ ಅವಕಾಶ ಮತ್ತು ಪ್ರಾತಿನಿಧ್ಯವನ್ನು ಒದಗಿಸುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಮಹತ್ವದ್ದಾಗಿದೆ.   ಇಂದಿರಾ ಗಾಂಧಿ, ರಾಜೀವ ಗಾಂಧಿ ಅವರ ದೂರದೃಷ್ಟಿತ್ವದ ಯೋಚನೆಯ ಫಲವಾಗಿ ಮಹಿಳೆಯರು ಸಮಾಜದ ಮುಂದೆ ನಿಲ್ಲುವಂತಾಗಿದ್ದು, ಅವರಿಂದಾಗಿಯೇ ಮಹಿಳಾ‌ ಸಬಲೀಕರಣವಾಗಿದೆ ಎಂದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಮಹಿಳೆಯರಿಗೆ ರಾಜಕೀಯವಾಗಿ ಶಕ್ತಿ ತುಂಬಿ ಅವರನ್ನು  ಮುಂಚೂಣಿಗೆ ತರುವಲ್ಲಿ ಕಾಂಗ್ರೆಸ್ ಪಕ್ಷದ ಪ್ರಯತ್ನ ಬಹಳಷ್ಟಿದೆ. ಮೀಸಲಾತಿಯ ಮೂಲಕವಾಗಿಯೂ‌ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟಿರುವ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಶಕ್ತಿಶಾಲಿಯಾಗಿ ಕಟ್ಟುವಲ್ಲಿ‌ ಮಹಿಳೆಯರು ಮುಂದೆ ಬರಬೇಕು ಎಂದರು.

ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮಾತನಾಡಿ, ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಮಹಿಳೆಯರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ‌. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ‌ ಮಹಿಳೆಯರ ಪಾತ್ರವೇ ಪ್ರಮುಖವಾಗಲಿದೆ ಎಂದರು.

ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಮಹಿಳಾ ಕಾಂಗ್ರೆಸಗ ರಾಜ್ಯ ನಾಯಕಿಯರಾದ ಶೈಲಜಾ, ವೀಣಾ ಭಟ್, ಸುಜಾತ, ಪಕ್ಷದ ಮುಖಂಡರಾದ ಶಿವಾಜಿ ಎಸ್. ಸುವರ್ಣ, ಸರಸು ಡಿ. ಬಂಗೇರ, ಶೇಖರ ಹೆಜಮಾಡಿ, ಮಹಮ್ಮದ್ ಸಾಧಿಕ್, ರತನ್‌ ಶೆಟ್ಟಿ ಶಿರ್ವ, ನವೀನ್ ಶೆಟ್ಟಿ, ಶರ್ಪುದ್ದೀನ್ ಶೇಖ್ , ರಮೀಜ್ ಹುಸೇನ್ ಮೊದಲಾದವರು ಉಪಸ್ಥಿತರಿದ್ದರು.

ಪಡುಬಿದ್ರಿ ಗ್ರಾ.ಪಂ. ಸದಸ್ಯೆ ಸುಚರಿತಾ ಸ್ವಾಗತಿಸಿದರು. ಕಾಪು ಪುರಸಭೆ ಮಾಜಿ‌ ಅಧ್ಯಕ್ಷೆ ಸೌಮ್ಯ ಎಸ್. ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಎನ್. ಬಂಗೇರ ವಂದಿಸಿದರು. ‌

ಟಾಪ್ ನ್ಯೂಸ್

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.