ನಿವೇಶನ ನೀಡುವಲ್ಲಿ ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
Team Udayavani, Apr 11, 2022, 12:15 PM IST
ಕಾಪು : ನಿವೇಶನ ರಹಿತರಿಗೆ ನಿವೇಶನ ನೀಡಲು ಸಾಧ್ಯವಾಗದ ರಾಜ್ಯ ಸರಕಾರದ ಬಡಜನ ವಿರೋಧಿ ನಿಲುವನ್ನು ವಿರೋಧಿಸಿ, ಅಕ್ರಮ-ಸಕ್ರಮಕ್ಕಾಗಿ 94 ಸಿ/ 94ಸಿ ಸಿ ಯಡಿ ಅರ್ಜಿ ಸಲ್ಲಿಸಿರುವವರಿಗೆ ಶೀಘ್ರವೇ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಮತ್ತು ಶಿರ್ವ ಗ್ರಾಮದಲ್ಲಿ ವೃದ್ಧ ಬಡ ಮಹಿಳೆಯನ್ನು ಮನೆಯಿಂದ ಹೊರಕ್ಕೆ ಹಾಕಿ, ಮನೆ ನೆಲಸಮ ಮಾಡಿರುವ ಘಟನೆಯನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ವಾಸಿಸಲು ಸೂರಿಲ್ಲದೆ ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದ ಶಿರ್ವ ಗ್ರಾಮದ ವೃದ್ಧ, ಬಡ ಮಹಿಳೆಯನ್ನು ಮನೆಯಿಂದ ಹೊರಗೆ ಎಳೆದು ಮನೆಯನ್ನು ನೆಲಸಮಗೊಳಿಸಿ ಬೀದಿಪಾಲಾಗಿಸಿದ ಘಟನೆ ಖಂಡನೀಯವಾಗಿದೆ. ಈ ಅಮಾನವೀಯ ನಡೆಯನ್ನು ಖಂಡಿಸಿ, ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಿ, ಅದೇ ಸ್ಥಳದಲ್ಲಿ ಮನೆಯನ್ನು ಪುನರ್ ರ್ಮಿಸಿ ಕೊಡುವಂತೆ ಸರಕಾರವನ್ನು ಆಗ್ರಹಿಸುತ್ತಿದ್ದೇವೆ ಎಂದರು.
ಕಾಪು ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ, ಹಲವು ವರ್ಷಗಳಿಂದ ನಿವೇಶನ ಮಂಜೂರಾತಿಗಾಗಿ ಕಾಯುತ್ತಿರುವ ಅರ್ಜಿದಾರರಿಗೆ ನಿವೇಶನ ನೀಡದೆ ಸರಕಾರ ವಂಚಿಸುತ್ತಿದೆ. ನಿರಂತರವಾಗಿ ನಡೆಯುತ್ತಿರುವ ಬೆಲೆಯೇರಿಕೆ, ಧರ್ಮ ಸಂಘರ್ಷ, ಬಡ ಜನರ ಮೇಲಿನ ದಬ್ಬಾಳಿಕೆ ನೀತಿಯಿಂದಾಗಿ ಜನ ರೋಸಿ ಹೋಗಿದ್ದಾರೆ. ಹಿಜಾಬ್, ಹಲಾಲ್ ವಿಚಾರದಲ್ಲಿ ಮುತುವರ್ಜಿ ವಹಿಸುವ ಚುನಾವಣೆಯಲ್ಲಿ ಲಾಭ ಗಳಿಸುವ ಪ್ರಯತ್ನ ಮಾಡುತ್ತಿದೆ. ಇಂತಹ ಕಿವಿ, ಮೂಗು, ಬಾಯಿ ಕೆಟ್ಡ ಸರಕಾರಕ್ಜೆ ಮುಂದಿನ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಕಾಂಗ್ರೆಸ್ ಮೂಲಕವಾಗಿ ಇಂದಿರಾ ಗಾಂಧಿ ಭೂಮಿ ನೀಡಿದರು, ಬಂಗಾರಪ್ಪ ಮನೆ ನೀಡಿದರು. ಆದರೆ ಬಿಜೆಪಿ ಸರಕಾರ ಅಧಿಕಾರಿಗಳ ಮೂಲಕವಾಗಿ ಮನೆಗಳನ್ನು ಒಡೆಯುವ ಕೆಲಸ ನಡೆಸುತ್ತಿದೆ. ಜನರ ಭಾವನೆಯೊಂದಿಗೆ ಆಟವಾಡಿ, ದ್ವೇಷ ಭಾವನೆ ಮೂಡಿಸಿ, ಅಂತರ ಹೆಚ್ಚಿಸುವ ಪ್ರಯತ್ನ ನಡೆಸುತ್ತಿದೆ. ರಾಜ್ಯದ ಜನರಲ್ಲಿ ಕೋಮು ದ್ವೇಷ ಭಾವನೆಯನ್ನು ಕೆರಳಿಸಿ, ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಎಚ್ಚೆತ್ತು ಕೊಳ್ಳಬೇಕಿದೆ ಎಂದರು.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಪು ರಾಜೀವ್ ಭವನದಲ್ಲಿ ಸಮಾವೇಶಗೊಂಡು, ಅಲ್ಲಿಂದ ತಾಲೂಕು ಕಛೇರಿಯವರೆಗೆ ಜಾಥಾದ ಮೂಲಕವಾಗಿ ಆಗಮಿಸಿ, ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಉತ್ತರ ಬ್ಲಾಕ್ ಅಧ್ಯಕ್ಷ ಸಂತೋಷ್ ಕುಲಾಲ್ , ಪಕ್ಷದ ಮುಖಂಡರಾದ ಶಿವಾಜಿ ಸುವರ್ಣ, ಎಂ.ಪಿ. ಮೊಯ್ದಿನಬ್ಬ, ದೀಪಕ್ ಕೋಟ್ಯಾನ್, ಶರ್ಫುದ್ದೀನ್ ಶೇಖ್, ಶಾಂತಲತಾ ಶೆಟ್ಟಿ, ರಮೀಜ್ ಹುಸೈನ್, ಅಮೀರ್ ಮಹಮ್ಮದ್, ನವೀನ್ ಶೆಟ್ಟಿ, ರತನ್ ಶೆಟ್ಟಿ ಶಿರ್ವ, ವಿಲ್ಸನ್ ರೋಡ್ರಿಗಸ್, ಐಡಾ ಗಿಬ್ಬಾ ಡಿ ಸೋಜ, ಸುನೀಲ್ ಬಂಗೇರ, ಜ್ಯೋತಿ ಮೆನನ್, ಕರುಣಾಕರ ಪೂಜಾರಿ, ಸುಧಾಕರ ಸಾಲ್ಯಾನ್, ಮೆಲ್ವಿನ್ ಡಿ ಸೋಜ, ಡೇವಿಡ್ ಡಿ ಸೋಜ, ಕೀರ್ತಿ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ, ಪ್ರಖ್ಯಾತ್ ಶೆಟ್ಟಿ, ಕೆ.ಎಚ್. ಉಸ್ಮಾನ್, ಫಾರೂಕ್ ಚಂದ್ರನಗರ, ಮಹೇಶ್ ಶೆಟ್ಟಿ ಕುರ್ಕಾಲು, ಕಿಶೋರ್ ಕುಮಾರ್ ಕೋಟೆ, ಇಂದಿರಾ ಆಚಾರ್ಯ ಕಟಪಾಡಿ, ಅಶೋಕ್ ನಾಯರಿ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.