ಕಾಪು: ಇಂದಿನಿಂದ ಕಡಲ ಐಸಿರ – ಬೀಚ್ ಫೆಸ್ಟ್
Team Udayavani, Dec 16, 2022, 6:15 AM IST
ಕಾಪು: ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಕಾಪು, ಕಾಪು ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ದಿ| ಆರ್.ಡಿ. ಮೆಂಡನ್ ಸ್ಮರಣಾರ್ಥ ಜನ್ಮಶತಮಾನೋತ್ಸವ ಆಚರಣ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಿ. 16, 17 ಮತ್ತು 18ರಂದು ನಡೆಯಲಿರುವ “ಕಡಲ ಐಸಿರ – ಬೀಚ್ ಫೆಸ್ಟ್ 2022′ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ.
ಡಿ. 16ರಂದು ಸಂಜೆ ಕಾಪು ಪಡು ಸ.ಹಿ.ಪ್ರಾ. ಶಾಲೆಯ ವಠಾರದಲ್ಲಿ ಆಚರಣೆ ಸಮಿತಿಯ ಗೌರವಾಧ್ಯಕ್ಷ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರಕಲಿದೆ. ದಿ| ಡಾ| ವಿ.ಎಸ್. ಆಚಾರ್ಯ ಕಾಲನಿ ಉದ್ಘಾಟನೆ ಗೊಳ್ಳಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಸಹಿತ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಮಕ್ಕಳಿಂದ ನೃತ್ಯ ಮತ್ತು ತುಳು ನಾಟಕಗಳು ಪ್ರದರ್ಶನಗೊಳ್ಳಲಿವೆ.
ಡಿ. 17ರಂದು ಮಧ್ಯಾಹ್ನ 2ಕ್ಕೆ ಕಾಪು ಬೀಚ್‌ನಲ್ಲಿ ವಿವಿಧ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಲಾಲಾಜಿ ಮೆಂಡನ್, ಸಚಿವ ಡಾ| ಅಶ್ವತ್ಥನಾರಾಯಣ ಸಿ.ಎನ್. ಸಹಿತ ಗಣ್ಯರು ಚಾಲನೆ ನೀಡಲಿದ್ದಾರೆ. ವಿವಿಧ ಸ್ಪರ್ಧೆಗಳು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ.
ಡಿ. 18ರಂದು ಬೆಳಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಗೃಹ ಸಚಿವ ಆರಂಗ ಜ್ಞಾನೇಂದ್ರ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಲಿದ್ದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಶಾಸಕ ರಘುಪತಿ ಭಟ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯಕುಮಾರ್ ಸೊರಕೆ ಸಹಿತ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಬೀಚ್ ವಾಲಿಬಾಲ್ ಸ್ಪರ್ಧೆ, ಕೊಳಲು ಮತ್ತು ತಬಲ ತಂಡ ಸ್ಪರ್ಧೆ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ದೋಣಿ ಸ್ಪರ್ಧೆ, ಗಾಳಿಪಟ ಸ್ಪರ್ಧೆ ಸಹಿತ ವಿವಿಧ ಸ್ಪರ್ಧೆಗಳು ನಡೆಯಲಿವೆ. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಚೆಂಡೆ ಸ್ಪರ್ಧೆ, ಸಂಗೀತ ರಸಮಂಜರಿ ಮತ್ತು ಲೇಸರ್ ಶೋ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
Karkala: ಬೈಕ್ ಢಿಕ್ಕಿ; ಗಾಯ
ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.