ನಿರಾಶ್ರಿತರಿಗೆ ನಾಲ್ಕು ಕಡೆ ಗಂಜಿ ಕೇಂದ್ರ ಸ್ಥಾಪನೆಗೆ ನಿರ್ಧಾರ: ಶಾಸಕ ಲಾಲಾಜಿ
ಕಾಪು: ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ
Team Udayavani, Mar 30, 2020, 5:50 AM IST
ಕಾಪು: ಕೋವಿಡ್-19 ಆತಂಕದ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್‌ಡೌನ್ ಆದೇಶ ಜಾರಿಯಲ್ಲಿದ್ದು ಇದರಿಂದಾಗಿ ಕಾಪು ತಾಲೂಕಿನ ವಿವಿಧೆಡೆ ನಿರಾಶ್ರಿತರ ಸಂಖ್ಯೆ ಹೆಚ್ಚಾಗುತ್ತಿದೆ. ತಾಲೂಕಿನ ವಿವಿಧೆಡೆಗಳಲ್ಲಿ ಆಹಾರದ ಅಗತ್ಯತೆ ಯಿರುವ ಜನರಿಗೆ ಆಹಾರ ಪೂರೈಸಲು ನಾಲ್ಕು ಕಡೆಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆಯ ಲಾಗುವುದು ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಕಾಪು ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಕೋವಿಡ್-19 ಆತಂಕ ನಿವಾರಣೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಕೈಗೊಳ್ಳಲಾಗಿರುವ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ರವಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಾಪು ತಾಲೂಕಿನ ಕಾಪು, ಪಡುಬಿದ್ರಿ, ಶಿರ್ವ ಮತ್ತು ಕಟಪಾಡಿಯಲ್ಲಿ ಗಂಜಿ ಕೇಂದ್ರ ತೆರೆಯಲಾಗು ವುದು. ಅದರ ಜತೆಗೆ ಪಡಿತರ ಸಾಮಗ್ರಿ ಅಗತ್ಯ ಇರುವವರಿಗೆ ಪಡಿತರ ವಿತರಣೆಗೂ ಯೋಜನೆ ರೂಪಿಸಲಾಗುತ್ತಿದೆ. ಈವರೆಗೆ ಸುಮನಾರು 1000 ಮಂದಿ ಇದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಈ ವ್ಯವಸ್ಥೆಯ ಅನುಷ್ಠಾನಕ್ಕೆ ಸರಕಾರ ಮತ್ತು ಖಾಸಗಿಯವರ ಸಹಭಾಗಿತ್ವವನ್ನು ಪಡೆದುಕೊಳ್ಳಲಾಗುವುದು ಎಂದರು.
ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್, ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಕಂದಾಯ ಪರಿವೀಕ್ಷಕ ರವಿಶಂಕರ್, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಬ್ರಾಯ ಕಾಮತ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.
ಲಾಕ್‌ಡೌನ್ ಯಶಸ್ವಿ
ಕೋವಿಡ್-19 ಹರಡದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಾಪು ತಾಲೂಕಿನ ವಿವಿಧೆಡೆಗಳಲ್ಲಿ ಸುಮಾರು 90 ಮಂದಿ ಹೋಮ್ ಕ್ವಾರಂಟೈನ್‌ನಲ್ಲಿ ಇದ್ದು ಅವರೆಲ್ಲರೂ ವ್ಯವಸ್ಥೆಯೊಂದಿಗೆ ಸಹಕರಿಸುತ್ತಿದ್ದಾರೆ. ತಾಲೂಕಿನಾದ್ಯಂತ ಲಾಕ್‌ಡೌನ್ ಯಶಸ್ವಿಯಾಗಿದ್ದು ಸಾರ್ವಜನಿಕರ ಸಹಕಾರ, ಪೊಲೀಸರ ಪ್ರಯತ್ನವೇ ಇದಕ್ಕೆ ಕಾರಣವಾಗಿದೆ.
-ಲಾಲಾಜಿ ಮೆಂಡನ್, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.