ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ
Team Udayavani, Jun 28, 2022, 1:18 PM IST
ಕಾಪು: ಕಾಪು ಪುರಸಭೆ ವ್ಯಾಪ್ತಿ ಹಾಗೂ ತಾಲೂಕಿನ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಅವರು, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಆದ್ಯತೆಯ ಮೇರೆಗೆ ಮನೆ ನಿವೇಶನ ಮತ್ತು ಅನುದಾನ ಮಂಜೂರಾತಿ ಪತ್ರ ನೀಡಲಾಗಿದೆ. ದಿವ್ಯಾಂಗರ ಸಮಸ್ಯೆಗೆ ಸ್ಪಂಧಿಸಿ ಸಹಕಾರ ನೀಡಲಾಗುತ್ತಿದೆ. ಇದಕ್ಕಾಗಿ ಪುರಸಭೆಯ ಮೀಸಲು ಹಣವನ್ನು ಬಳಸಿಕೊಳ್ಳಲಾಗುತ್ತಿದ್ದು ಆದ್ಯತೆಯ ಮೇರೆಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದರು.
ಕಾಪು ಪುರಸಭೆಗೆ ನಗರೋತ್ಥಾನ ಯೋಜನೆಯಡಿ 10 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿದೆ. 56 ಕೋಟಿ ರೂಪಾಯಿ ವೆಚ್ಚದಲ್ಲಿ ಕುರ್ಕಾಲು ಡ್ಯಾಂನಿಂದ ಕಾಪು ನಗರಕ್ಕೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಬೆಳಪು ಅತ್ಯಾಧುನಿಕ ವಿಜ್ಞಾನ ತಂತ್ರಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಹೆಚ್ಚುವರಿ 15 ಕೋಟಿ ರೂ. ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಪು ಕ್ಷೇತ್ರದ ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು.
ಹೆಜಮಾಡಿ ಬಂದರು ಅಭಿವೃದ್ಧಿಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು ಪೊಲಿಪು ಮತ್ತು ಮೂಳೂರಿನಲ್ಲಿ ಕಡಲ್ಕೊರೆತ ತಡೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಅಂಗವಿಕಲ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರತ್ನಾ ಸುವರ್ಣ, ಪುರಸಭೆ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಸ್ವಾಗತಿಸಿದರು. ರವಿಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.