Kapu ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಬೇಕಿದೆ ಮೇಜರ್ ಸರ್ಜರಿ
ತಾ| ಆಸ್ಪತ್ರೆಯಾಗಿ ಮೇಲ್ದರ್ಜೆಗೇರುವ ನಿರೀಕ್ಷೆಯಲ್ಲಿರುವ ಆಸ್ಪತ್ರೆಯಲ್ಲಿ ಖಾಯಂ ವೈದ್ಯರು, ಸಿಬಂದಿ ಕೊರತೆ
Team Udayavani, Jun 7, 2023, 2:58 PM IST
ಕಾಪು: ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆ ಗೇರಲು ಹವಣಿಸುತ್ತಿರುವ ತಾಲೂಕು ಕೇಂದ್ರ, ಪುರಸಭೆ ಮತ್ತು ರಾಷ್ಟ್ರೀಯ ಹೆದ್ದಾರಿ 66ಕ್ಕೆ ತಾಗಿಕೊಂಡಂತಿರುವ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರವು ಪೂರ್ಣಕಾಲಿಕ ವೈದ್ಯರ ಸೇವೆಯಿಲ್ಲದೇ, ಖಾಯಂ ಸಿಬಂದಿ ಕೊರತೆಯಿಂದ ಸೊರಗುತ್ತಿದೆ.
ಇಲ್ಲಿಗೆ ಪ್ರತೀ ನಿತ್ಯ ಕನಿಷ್ಠ 70-80 ಹೊರ ರೋಗಿಗಳು ಬರುತ್ತಿರುತ್ತಾರೆ. ಪ್ರಸ್ತುತ ಶಿರ್ವದಿಂದ ಎರವಲು ಸೇವೆ ರೂಪದಲ್ಲಿ ಡಾ| ಶೀತಲ್ ವಿ. ಶೆಟ್ಟಿ ಗುತ್ತಿಗೆ ಆಧಾರಿತವಾಗಿ ಸೇವೆ ನೀಡುತ್ತಿದ್ದಾರೆ. ಪೆರ್ಣಂಕಿಲ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ರವೀಂದ್ರ ಬೋರ್ಕರ್ ಆಡಳಿತ ವೈದ್ಯಾಧಿಕಾರಿಯಾಗಿ ನಿಯೋಜಿತರಾಗಿದ್ದು ಅಗತ್ಯವಿದ್ದಾಗ ಆಡಳಿತಾತ್ಮಕ ಕೆಲಸಗಳಿಗಾಗಿ ಬಂದು ಹೋಗುತ್ತಾರೆ. ಹೆದ್ದಾರಿ ಬದಿಯ ಸರಕಾರಿ ಆಸ್ಪತ್ರೆಯಲ್ಲಿ ತುರ್ತಾಗಿ ಪೂರ್ಣಕಾಲಿಕ ವೈದ್ಯರ ನೇಮಕವಾಗಬೇಕೆನ್ನುವುದು ಜನರ ಆಗ್ರಹವಾಗಿದೆ.
ಖಾಲಿ ಹುದ್ದೆ ಭರ್ತಿಯಾಗಲಿ
ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುವ ಒಬ್ಬ ಮಹಿಳಾ ವೈದ್ಯರಿದ್ದಾರೆ. ಒಬ್ಬರು ಲ್ಯಾಬ್ ಟೆಕ್ನೀಶಿಯನ್, ಒಬ್ಬರು ಸ್ಟಾಫ್ ನರ್ಸ್, ಒಬ್ಬರು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ, ಒಬ್ಬರು ಹಿರಿಯ ಆರೋಗ್ಯ ಸುರಕ್ಷಾಧಿಕಾರಿ, ಒಬ್ಬರು ಪ್ರಥಮ ದರ್ಜೆ ಸಹಾಯಕ ಮತ್ತು 4 ಮಂದಿ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆ ಭರ್ತಿಯಾಗಿದೆ. ಗುತ್ತಿಗೆ ಆಧಾರಿತವಾಗಿ ಸ್ಟಾಫ್ ನರ್ಸ್, ಗ್ರೂಫ್ ಡಿ ನೌಕರ, ಚಾಲಕ, ಎಸ್‌ಟಿಎಲ್‌ಎಸ್ (ಟಿಬಿ ಸೂಪರ್ ವೈಸರ್) ಇದ್ದಾರೆ. ಖಾಯಂ ಹುದ್ದೆಗಳ ಪೈಕಿ ವೈದ್ಯ -1, ಫಾರ್ಮಾಸಿಸ್ಟ್ -1, ಪ್ರಥಮ ದರ್ಜೆ ಸಹಾಯಕ-1, ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ-5, ಕಿರಿಯ ಪುರುಷ ಆರೋಗ್ಯ ಸುರಕ್ಷಾಧಿಕಾರಿ-5 ಹುದ್ದೆಗಳು ಖಾಲಿ ಯಿವೆ. ಆ್ಯಂಬುಲೆನ್ಸ್ ಇದೆ, ಚಾಲಕ ಹುದ್ದೆ ಮಂಜೂ ರಾಗಿಲ್ಲ. ಪ್ರಸ್ತುತ ಕೋಟದಲ್ಲಿ ಆ್ಯಂಬುಲೆನ್ಸ್ ಚಾಲಕ ಹುದ್ದೆ ಪಡೆದಿರುವ ನಾಗರಾಜ್ ಕಾಪುವಿನಲ್ಲಿ ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಎರವಲು ಸೇವೆ ನೀಡುತ್ತಿದ್ದಾರೆ.
9 ಗ್ರಾಮದ 34,673 ಜನರ ಸೇವೆಗೆ ಮೀಸಲು
ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರವು ಕಾಪು ಪುರಸಭೆ ವ್ಯಾಪ್ತಿಯ ಕಾಪು, ಉಳಿಯಾರಗೋಳಿ ಮತ್ತು ಮಲ್ಲಾರು ಗ್ರಾ.ಪಂ., ಇನ್ನಂಜೆ, ಮಜೂರು ಗ್ರಾ.ಪಂ. ವ್ಯಾಪ್ತಿಯ 34,673 ಮಂದಿಗೆ ಸೇವೆ ನೀಡುತ್ತಿದೆ. ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕಾಪು ಕೇಂದ್ರ ಸ್ಥಾನವೂ ಸೇರಿದಂತೆ ಕಾಪು ಪಡು, ಮೂಳೂರು, ಮಲ್ಲಾರು, ಇನ್ನಂಜೆ, ಪಾಂಗಾಳ, ಮಜೂರು, ಪಾದೂರು, ಹೇರೂರು ಗ್ರಾಮಗಳಲ್ಲಿ ಉಪಕೇಂದ್ರಗಳಿವೆ. ಕೇಂದ್ರ ಸ್ಥಾನ ಹೊರತುಪಡಿಸಿ 8 ಉಪ ಆರೋಗ್ಯ ಕೇಂದ್ರಗಳಲ್ಲಿ 8 ಮಂದಿ ಗುತ್ತಿಗೆ ಆಧಾರಿತ ಸಮುದಾಯ ಆರೋಗ್ಯ ಅಧಿಕಾರಿಗಳು ಸೇವೆ ಸಲ್ಲಿಸುತ್ತಿದ್ದಾರೆ.
ಏನೇನು ಸೌಕರ್ಯಗಳು ಬೇಕಿವೆ
ಕಾಪು ತಾಲೂಕಿಗೆ 100 ಬೆಡ್‌ನ ತಾಲೂಕು ಆಸ್ಪತ್ರೆ ಅತೀ ಅಗತ್ಯವಾಗಿ ಮಂಜೂರಾಗಬೇಕಿದ್ದು ಅಷ್ಟರವರೆಗೆ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಇರಬೇಕಾದ ಕನಿಷ್ಠ ಸೌಲಭ್ಯಗಳಾದರೂ ಅತ್ಯಗತ್ಯವಾಗಿ ಜೋಡಣೆಯಾಗಬೇಕಿವೆ. ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲೇ ಇರುವುದರಿಂದ ಇಲ್ಲಿ ಮೂಲ ಸೌಕರ್ಯಗಳ ಜೋಡಣೆ, ಒಳ ರೋಗಿ ಮತ್ತು ಹೊರ ರೋಗಿ ವಿಭಾಗ, ಒಳ ರೋಗಿ ವಿಭಾಗಕ್ಕೆ ಆರು ಬೆಡ್, ಎಕ್ಸ್‌ರೇ ಮಿಷನ್, ಸ್ಕ್ಯಾನಿಂಗ್ , ಶೀಥಲೀಕೃತ ಶವಾಗಾರ, ಶವ ಮರಣೋತ್ತರ ಪರೀಕ್ಷಾ ಕೊಠಡಿ, ಹೃದ್ರೋಗಿಗಳ ಅನುಕೂಲಕ್ಕೆ ಎಂ.ಆರ್.ಐ ಸ್ಕ್ಯಾನಿಂಗ್ ಸೆಂಟರ್, ಡಯಾಲಿಸಿಸ್ ಕೇಂದ್ರವೂ ಆರಂಭಗೊಳ್ಳಬೇಕಿದೆ.
ತಾಲೂಕು ಆಸ್ಪತ್ರೆಗೆ ಹೆಚ್ಚಿದ ಬೇಡಿಕೆ
ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಗಲು ಹೊತ್ತಿನ ಸೇವೆ ಮಾತ್ರ ಲಭ್ಯವಿದೆ. ಇಲ್ಲಿ ಪ್ರಥಮ ಚಿಕಿತ್ಸೆಗೆ ಮಾತ್ರ ಸೀಮಿತವಾಗಿರುವುದರಿಂದ ಕಾಪುವಿನ ಜನತೆ ತುರ್ತು ವೈದ್ಯಕೀಯ ಸೇವೆಗೆ ಉಡುಪಿ ಅಥವಾ ಮಂಗಳೂರನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ರೋಗಿಗಳು ಮೃತಪಟ್ಟದ್ದೂ ಇದೆ. ರಾ. ಹೆ. 66ರ ಪಕ್ಕದಲ್ಲೇ ಇದ್ದರೂ ತುರ್ತು ಚಿಕಿತ್ಸಾ ಘಟಕ ಇಲ್ಲದೇ ಇರುವುದರಿಂದ ಅಪಘಾತದ ಗಾಯಾಳುಗಳು ಚಿಕಿತ್ಸೆಗಾಗಿ ಎಲ್ಲೆಲ್ಲಿಗೋ ಓಡಾಡಬೇಕಿದೆ.ಸರಕಾರ, ಆರೋಗ್ಯ ಇಲಾಖೆ, ಮತ್ತು ಜಿಲ್ಲಾಡಳಿತ ಇಲ್ಲಿನ ವೈದ್ಯರು ಮತ್ತು ಸಿಬಂದಿ ಕೊರತೆಯನ್ನು ಸರಿಪಡಿಸಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುವ ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಾರೆ.
ಸರಕಾರಕ್ಕೆ ಪ್ರಸ್ತಾವನೆ
ಖಾಯಂ ವೈದ್ಯರ ನೇಮಕಾತಿ ಸರಕಾರದಿಂದ ನಡೆಯಬೇಕಿದೆ. ವೈದ್ಯರ ಕೊರತೆ ನೀಗಿಸಲು ಶಿರ್ವದಲ್ಲಿ ಗುತ್ತಿಗೆ ಆಧಾರಿತವಾಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯರನ್ನು ಸೇವೆಗೆ ನಿಯೋಜಿಸಲಾಗಿದೆ. ಖಾಯಂ ಸಿಬಂದಿ ನೇಮಕ ಸರಕಾರಿ ಮಟ್ಟದ ಪ್ರಕ್ರಿಯೆಯಾಗಿದ್ದು ಕಾಪು ವಿಧಾನಸಭಾ ಕ್ಷೇತ್ರದ ಆರೋಗ್ಯ ಕೇಂದ್ರಗಳು, ಉಪ ಆರೋಗ್ಯ ಕೇಂದ್ರಗಳ ಸ್ಥಿತಿಗತಿ, ಸಿಬಂದಿ ಕೊರತೆ ಬಗ್ಗೆ ಶಾಸಕರ ಜತೆಗೆ ಚರ್ಚಿಸಲಾಗಿದೆ. ಸಿಬಂದಿ ಕೊರತೆ ನೀಗಿಸಲು ಶಾಸಕರ ಮೂಲಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.-ಡಾ| ನಾಗಭೂಷಣ್ ಉಡುಪ, ಜಿಲ್ಲಾ ಆರೋಗ್ಯ ಅಧಿಕಾರಿ
ಕುಂದು ಕೊರತೆ ಪರಿಶೀಲನೆ
ಖಾಯಂ ವೈದ್ಯರ ನೇಮಕಾತಿಯ ಬಗ್ಗೆ ಸರಕಾರಕ್ಕೆ ಈ ಬಗ್ಗೆ ಒತ್ತಡ ಹೇರಲಾಗುವುದು. ಕಾಪು ವಿಧಾನಸಭಾ ಕ್ಷೇತ್ರದ ಎಲ್ಲ ಆರೋಗ್ಯ ಕೇಂದ್ರಗಳು, ಉಪ ಆರೋಗ್ಯ ಕೇಂದ್ರಗಳ ಸ್ಥಿತಿಗತಿ, ವೈದ್ಯರು, ಸಿಬಂದಿ ಲಭ್ಯತೆ ಮತ್ತು ಕೊರತೆಗಳ ಬಗ್ಗೆ ಮಾಹಿತಿ ಪಡೆಯುವುದಕ್ಕಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಮಾಹಿತಿ ಪಡೆಯಲಾಗಿದೆ. ಮಳೆಗಾಲ ಆರಂಭಕ್ಕೆ ಮೊದಲೇ ಆರೋಗ್ಯ ಇಲಾಖೆಗೆ ಸಂಬಂಧಿಸಿ ಇರುವ ಕುಂದು ಕೊರತೆಗಳನ್ನು ಪರಿಶೀಲಿಸಿ, ಸಮಸ್ಯೆ ಬಗೆಹರಿಸಲಾಗುವುದು.
-ಗುರ್ಮೆ ಸುರೇಶ್ ಶೆಟ್ಟಿ
ಶಾಸಕರು, ಕಾಪು
-ರಾಕೇಶ್ ಕುಂಜೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.