Kapu ರಿಕ್ಷಾ ಮಾಲಕ ನೇಣಿಗೆ ಶರಣು
Team Udayavani, Jul 8, 2024, 11:01 PM IST
ಕಾಪು: ಸಣ್ಣಪುಟ್ಟ ಸಾಲದ ಹೊರೆಯಿಂದ ಬಳಲುತ್ತಿದ್ದ ರಿಕ್ಷಾ ಮಾಲಕನೋರ್ವ ಹಿಂದೂ ರುದ್ರಭೂಮಿ ಬಳಿಯ ಶೆಡ್‌ನೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರ ಬೋಳಾರಗುಡ್ಡೆಯಲ್ಲಿ ಸೋಮವಾರ ನಡೆದಿದೆ.
ಬೋಳಾರ್‌ಗುಡ್ಡೆ ನಿವಾಸಿ, ಆಟೋ ಟೆಂಪೋ ಚಾಲಕ ಮತ್ತು ಮಾಲಕ ಮಹೇಶ್ ಪಾಲನ್ ಯಾನೆ ಮಾಹಿ (35) ನೇಣಿಗೆ ಶರಣಾದವರು.
ಉದ್ಯಾವರ ಗುಡ್ಡೆಯಂಗಡಿಯಲ್ಲಿ ಟೆಂಪೋ ರಿಕ್ಷಾ ಚಾಲಕ ಮತ್ತು ಮಾಲಕನಾಗಿ ದುಡಿಯುತ್ತಿದ್ದ ಮಹೇಶ್ ಸಾಲದ ಸುಳಿಗೆ ಸಿಲುಕಿ ಒದ್ದಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಮಗಳನ್ನು ಶಾಲೆಗೆ ಬಿಟ್ಟು ಮನೆಗೆ ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಹಿಂದೂ ರುದ್ರಭೂಮಿಗೆ ತೆರಳಿ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಶ್ರಮ ಜೀವಿಯಾಗಿದ್ದ ಮಹೇಶ್ ಉದ್ಯಾವರ ಬಿಲ್ಲವ ಮಹಾಜನ ಸಂಘ, ಉದ್ಯಾವರ ಯುವಕ ಮಂಡಲ ಮತ್ತು ಗುಡ್ಡೆಯಂಗಡಿ ಫ್ರೆಂಡ್ಸ್ ಮೊದಲಾದ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದು ಸಾಮಾಜಿಕ ಚಿಂತನೆಯನ್ನು ಮೈಗೂಡಿಸಿಕೊಂಡಿದ್ದರು.
ಮೃತರು ಆ್ಯಂಬುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ತಂದೆ ರಾಮದಾಸ್ ಪಾಲನ್, ತಾಯಿ, ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.