Kapu; “ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ’
"ಸುಸ್ಥಿರ ಪ್ರವಾಸ, ಕೊನೆಯಿಲ್ಲದ ನೆನಪುಗಳು' ಸಂವಾದ
Team Udayavani, Jan 28, 2024, 12:27 AM IST
ಕಾಪು: ಪ್ರವಾಸೋದ್ಯಮ ಬೆಳವಣಿಗೆಗೆ ಉಡುಪಿ ಜಿಲ್ಲೆ ಉತ್ತಮವಾಗಿ ತೆರೆದುಕೊಂಡಿದ್ದು, ಈಗಾಗಲೇ 98 ಪ್ರದೇಶಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳಿಗೆ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಮೂಲಸೌಕರ್ಯಗಳ ಜೋಡಣೆ, ಹಟ್‌ಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಹೇಳಿದರು.
ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಆತಿಥ್ಯದಲ್ಲಿ ಗುರುವಾರ ಮೂಳೂರು ಸಾಯಿರಾಧಾ ಹೆರಿಟೇಜ್‌ನಲ್ಲಿ “ಸುಸ್ಥಿರ ಪ್ರವಾಸ ಹಾಗೂ ಕೊನೆಯಿಲ್ಲದ ನೆನಪುಗಳು’ – ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಪ್ರಚಾರಕರು ಹಾಗೂ ಪ್ರವಾಸೋದ್ಯಮ ಪಾಲುದಾರರ ಜತೆಗೆ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರವಾಸೋದ್ಯಮ ಬೆಳೆಸೋಣ
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕರಾವಳಿಯ ಪ್ರಕೃತಿ ಪ್ರವಾಸಿಗರನ್ನು ಸೆಳೆಯಲು ಪೂರಕವಾಗಿದ್ದು, ಇದು ನಮಗೆ ದೇವರು ನೀಡಿರುವ ದೊಡ್ಡ ಕೊಡುಗೆ. ಇದರೊಂದಿಗೆ ತುಳುನಾಡಿನ ಪ್ರಾಕೃತಿಕ ಪರಿಸರ, ಧಾರ್ಮಿಕ, ಸಾಂಸ್ಕೃತಿಕ, ಮನೋರಂಜನ ಕೇಂದ್ರ ಗಳನ್ನು ಪ್ರವಾಸೋದ್ಯಮಕ್ಕೆ ಪೂರಕವಾಗಿ ಬೆಳೆಸಿದಲ್ಲಿ ಟೂರಿಸಂ ಇನ್ನಷ್ಟು ಎತ್ತರಕ್ಕೆ ಬೆಳೆಸಲು ಸಾಧ್ಯವಾಗಲಿದೆ ಎಂದರು.
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಬ್ಲಾಗರ್ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿ, ಪ್ರವಾಸೋದ್ಯಮ ಬೆಳೆಯುವಲ್ಲಿ ಸಾರ್ವಜನಿಕರ ಸಹಭಾಗಿ ತ್ವವೂ ಅತ್ಯಗತ್ಯ. ಕರಾವಳಿಯುದ್ದಕ್ಕೂ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಕರಾವಳಿ ಪ್ರವಾಸೋದ್ಯಮವನ್ನು ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿಯೂ ಬೆಳೆಸುವ ಅನಿವಾರ್ಯ ಇದೆ ಎಂದರು.
ಉಡುಪಿ ಎಸ್‌ಪಿ ಡಾ| ಅರುಣ್ ಕೆ., ಉಡುಪಿ ಜಿ.ಪಂ. ಸಿಇಒ ಪ್ರತೀಕ್ ಬಯಲ್, ಕುಂದಾಪುರ ಎಸಿ ರಶ್ಮಿ ಎಸ್. ಆರ್., ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್., ನಗರಸಭೆ ಪೌರಾಯುಕ್ತ ರಾಯಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹೇಶ್‌ಚಂದ್ರ, ಗಣ್ಯರಾದ ಪ್ರಸಾದ್‌ರಾಜ್ ಕಾಂಚನ್, ರಾಮಚಂದ್ರ ಮಿಜಾರು, ಲೀಲಾಕ್ಷ ಕರ್ಕೇರ, ರಾಜೇಶ್ ಶೆಟ್ಟಿ ಅಲೆವೂರು, ಹರೀಶ್ ಹೆಜ್ಮಾಡಿ, ಕರಾವಳಿ ಪ್ರವಾಸೋದ್ಯಮ ಸಂಘದ ಕಾರ್ಯದರ್ಶಿ ಗೌರವ್ ಶೇಣವ ಉಪಸ್ಥಿತರಿದ್ದರು.
ಕರಾವಳಿ ಪ್ರವಾಸೋದ್ಯಮ ಸಂಘದ ಅಧ್ಯಕ್ಷ ಮನೋಹರ ಶೆಟ್ಟಿ ಪ್ರಸ್ತಾವನೆಗೈದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಸ್ವಾಗತಿಸಿ, ಉಪಾಧ್ಯಕ್ಷ ನಾಗರಾಜ ಹೆಬ್ಬಾರ್ ವಂದಿಸಿದರು. ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.