Karkala: ನಕಲಿ ನಂಬರ್ ಅಳವಡಿಸಿ ದುಷ್ಕೃತ್ಯಕ್ಕೆ ಸಂಚು; ಆರೋಪಿ ಸೆರೆ
Team Udayavani, Oct 19, 2023, 12:07 AM IST
ಕಾರ್ಕಳ: ಕಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ, ದುಷ್ಕೃತ್ಯ ನಡೆಸಲು ಸಂಚು ರೂಪಿಸುತ್ತಿದ್ದ ನಿಟ್ಟೆ ಗ್ರಾಮದ ಬೋರ್ಗಲ್ ಗುಡ್ಡೆ ನಿವಾಸಿ ಉಮ್ಮರ್ ಫಾರೂಕ್‌ನನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅ. 16ರಂದು ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಮ್ಮರ್ ಫಾರುಕ್ ಕಾರಿನಲ್ಲಿ ತೆರಳುತ್ತಿದ್ದ, ಪೊಲೀಸರು ತಪಾಸಣೆ ನಡೆಸಿದಾಗ ನಕಲಿ ನಂಬರ್ ಪ್ಲೇಟ್ ಅಳವಡಿಸಿರುವುದು ಬೆಳಕಿಗೆ ಬಂದಿದೆ. ಕಾರಿನ ಗ್ಲಾಸ್‌ಗಳಿಗೆ ಟಿಂಟ್ ಅಳವಡಿಸಿಕೊಂಡಿದ್ದ. ಮಂಗಳೂರಿನ ಧೀರಜ್ ಮತ್ತು ಪ್ರೀತಮ್‌ರ ಸಹಕಾರದೊಂದಿಗೆ ಈ ಕೃತ್ಯವೆಸಗಿರುವುದು ತನಿಖೆಯಿಂದ ತಿಳಿದು ಬಂದಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಯಾವುದೋ ದುಷ್ಕೃತ್ಯವೆಸಗುವ ದುರುದ್ದೇಶದಿಂದ ಉಮ್ಮರ್ ಫಾರೂಕ್ ಮತ್ತವರ ಸಹಚರರು ಸಂಚು ರೂಪಿಸುತ್ತಿದ್ದರು ಎನ್ನುವುದು ತನಿಖೆ ವೇಳೆ ತಿಳಿದು ಬಂದಿದೆ.
ವಿವಿಧ ಪ್ರಕರಣ ದಾಖಲು
ಡ್ರಗ್ಸ್, ಕಳ್ಳತನ, ದರೋಡೆ, ಗೋಕಳ್ಳತನ ಸಹಿತ ವಿವಿಧ ಸಮಾಜ ದ್ರೋಹಿ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಬಗ್ಗೆ ಹಲವು ಆರೋಪಗಳು ಈತನ ಮೇಲಿದ್ದು ಶಿರ್ವ ಸಹಿತ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣಗಳು ಈ ಹಿಂದೆ ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.