Karkala Crime News; ಗಾಂಜಾ ವ್ಯಸನಿ ಪೊಲೀಸ್ ಬಲೆಗೆ
Team Udayavani, Aug 8, 2023, 9:59 PM IST
ಕಾರ್ಕಳ: ಸಾರ್ವಜನಿಕ ರಸ್ತೆ ಬದಿ ಮಾದಕ ವಸ್ತು ಗಾಂಜಾವನ್ನು ಪೇಪರ್‌ನಲ್ಲಿ ಸೇರಿಸಿ ಸಿಗರೇಟ್‌ನಂತೆ ರೋಲ್ ಮಾಡಿ ಸೇದುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಿಯ್ನಾರುವಿನಲ್ಲಿ ನಡೆದಿದೆ.
ಠಾಣೆಯ ಪಿಎಸ್‌ಐ ಸಂದೀಪ್ ಕುಮಾರ್ ಶೆಟ್ಟಿ ಅವರು ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆಯ ಕಂಬಳ ನಡೆಯುವ ಸ್ಥಳದ ಬಳಿ ತಲುಪಿದಾಗ ಆಪಾದಿತ ವೇಲುಮುರುಗನ್ ಎಂಬಾತ ಗಾಂಜಾವನ್ನು ಸೇದುತ್ತಿದ್ದು ಪೊಲೀಸರು ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿ: ಸವಾರನಿಗೆ ಗಾಯ
ಕಾರ್ಕಳ: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಹಿರ್ಗಾನ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ನಡೆದಿದೆ.
ಕುಕ್ಕುಂದೂರು ನಿವಾಸಿ ಅಜಯ್ ಹಾರ್ಜಡ್ಡುಗೆ ಹೋಗುತ್ತಿರುವ ವೇಳೆ ಕುಕ್ಕುದಕಟ್ಟೆ ಎಂಬಲ್ಲಿ ಕಾರು ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಅತೀ ವೇಗ ಮತ್ತು ಅಜಾಗರೂಕತೆ ಯ ಚಾಲನೆಯಿಂದ ಢಿಕ್ಕಿ ಸಂಭವಿಸಿದೆ.
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದ ಗಾಯಾಳು ಸಾವು
ಕಾರ್ಕಳ: ನಿಟ್ಟೆ ಗರಡಿ ಬಳಿ ಆ. 7ರಂದು ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಗಾಯಗೊಂಡಿದ್ದ ನಿಟ್ಟೆ ಗ್ರಾಮದ ನಿವಾಸಿ ಮಂಜುನಾಥ ಶೆಟ್ಟಿ ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಆ. 8ರಂದು ನಿಧನ ಹೊಂದಿದರು.
ನಿಟ್ಟೆ ವಿದ್ಯಾ ಸಂಸ್ಥೆಯಲ್ಲಿ ಕೆಲಸದಲ್ಲಿದ್ದ ಅವರು ಆರ್‌ಎಸ್‌ಎಸ್ ಸ್ವಯಂ ಸೇವಕರಾಗಿ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.