Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Team Udayavani, Apr 30, 2024, 6:20 AM IST
ಕಾರ್ಕಳ: ಬೆೇಳಂಜೆ ಸಂಜೀವ ಹೆಗ್ಡೆ ಅವರ ಸ್ಮರಣಾರ್ಥ ಹೆಬ್ರಿಯ ಬೆೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಮೂಲಕ ಆರೋಗ್ಯ ಮೂಲಸೌಕರ್ಯ ಉತ್ತೇಜಿಸುವ ಉದ್ದೇಶದಿಂದ ಕಾರ್ಕಳದ ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಾ| ಎಚ್. ಎಸ್. ಬಲ್ಲಾಳ್ ಮತ್ತು ಡಾ| ಎಚ್. ಸುದರ್ಶನ್ ಬಲ್ಲಾಳ್ ಅವರು ನೀಡಿದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರದ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಬೆೇಳಂಜೆ ಸಂಜೀವ ಹೆಗಡೆ ಟ್ರಸ್ಟಿ ಹಾಗೂ ಮಣಿಪಾಲ ಹೆಲ್ತ್ ಎಂಟರ್‌ಪ್ರೈಸೆಸ್ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥ ಡಾ| ಎಚ್. ಸುದರ್ಶನ್ ಬಲ್ಲಾಳ್ ಡಯಾಲಿಸಿಸ್ ಯಂತ್ರ ಹಸ್ತಾಂತರಿಸಿ ಮಾತನಾಡಿ, ಪ್ರಪಂಚದಾದ್ಯಂತ ಸುಮಾರು 850 ಮಿಲಿಯನ್ ವ್ಯಕ್ತಿಗಳು ಮೂತ್ರಪಿಂಡ ಕಾಯಿಲೆ ಬಾಧಿತರಾಗಿರು ವುದರಿಂದ, ವರ್ಧಿತ ಜಾಗೃತಿ ಮತ್ತು ಸಂಬಂಧಿತ ಚಿಕಿತ್ಸಾ ತಂತ್ರಗಳ ಅಗತ್ಯವು ಅತ್ಯಗತ್ಯವಾಗಿದೆ ಎಂದರು.
ಮಾಹೆ ಮಣಿಪಾಲದ ಕುಲಪತಿ ಲೆ| ಜ| ಡಾ| ಎಂ. ಡಿ. ವೆಂಕಟೇಶ್ ಅವರು ಮೂತ್ರಪಿಂಡ ಕಾಯಿಲೆ ಮತ್ತು ಹೃದಯ ರಕ್ತನಾಳದ ಆರೋಗ್ಯದ ನಡುವಿನ ಸಂಬಂಧದಿಂದಾಗುವ ಅಪಾಯಕಾರಿ ಅಂಶಗಳ ಬಗ್ಗೆ ವಿವರಿಸಿದರು.
ಕಾರ್ಕಳದ ಡಾ|ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯ ಭವಿಷ್ಯದ ಯೋಜನೆ ರಕ್ತನಿಧಿ ಮತ್ತು ಸಿ ಟಿ ಸ್ಕ್ಯಾನ್ ಕುರಿತು ಅವರು ತಿಳಿಸಿದರು.
ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಸಂಸ್ಥಾಪಕ ಡಾ| ಜಿ ಶಂಕರ್ ಅವರು ಟ್ರಸ್ಟ್ ಕೈಗೊಂಡ ಶ್ಲಾಘನೀಯ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮೂತ್ರಪಿಂಡ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ| ದರ್ಶನ್ ರಂಗಸ್ವಾಮಿ ಸ್ವಾಗತಿಸಿದರು.
ಕಾರ್ಕಳದ ಡಾ|ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಕೀರ್ತಿನಾಥ ಬಲ್ಲಾಳ ವಂದಿಸಿದರು.
ಮಾಹೆ ಮಣಿಪಾಲದ ಸಹ ಕುಲಪತಿ (ಆರೋಗ್ಯವಿಜ್ಞಾನ) ಡಾ| ಶರತ್ ಕುಮಾರ್ ರಾವ್, ಕೆಎಂಸಿ ಡೀನ್ ಡಾ| ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಸಿಒಒ ಡಾ| ಆನಂದ್ ವೇಣುಗೋಪಾಲ್ ಮತ್ತು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.