Karkala; 14 ವಿದ್ಯಾರ್ಥಿನಿಯರಿಗೆ ಕಿರುಕುಳ ; ಶಾಲಾ ಮುಖ್ಯ ಶಿಕ್ಷಕನ ಸೆರೆ
Team Udayavani, Apr 8, 2024, 12:37 AM IST
ಕಾರ್ಕಳ: ಶಾಲಾ ವಿದ್ಯಾರ್ಥಿನಿ ಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಬೋಳ ವಂಜಾರಕಟ್ಟೆ ನಿವಾಸಿ, ಶಾಲೆಯ ಮುಖ್ಯ ಶಿಕ್ಷಕ ರಾಜೇಂದ್ರ ಆಚಾರ್ (58)ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸ್ಥಳೀಯ ದೇವಸ್ಥಾನವೊಂದರ ಅರ್ಚಕರೂ ಆಗಿದ್ದರು.
ಬಂಧಿತ ಆರೋಪಿ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಅನೇಕ ದೂರುಗಳಿದ್ದು, ಊರವರು ಬುದ್ಧಿವಾದ ಹೇಳಿದ್ದರು. ಆದರೂ ಮುಖ್ಯ ಶಿಕ್ಷಕ ಚಾಳಿ ಬಿಟ್ಟಿರಲಿಲ್ಲ. ಮುಂದುವರೆದ ಕಾರಣ ಉಡುಪಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (ಮಕ್ಕಳ ಕ್ಷೇಮಾಭಿವೃದ್ಧಿ ಘಟಕ) ಅಧಿಕಾರಿಗಳು ಶಾಲೆಗೆ ಆಗಮಿಸಿ ಸಮಗ್ರ ತನಿಖೆ ನಡೆಸಿದ್ದರು. ಈತನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಅಪ್ರಾಪ್ತ ವಯಸ್ಸಿನ ಒಟ್ಟು 14 ಮಂದಿ ವಿದ್ಯಾರ್ಥಿನಿಯರಿಂದ ದೂರು ಪಡೆದುಕೊಂಡಿದ್ದರು. ಈ ಬಗ್ಗೆ ಸೂಕ್ತ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ ಬಳಿಕ ಈ ಕ್ರಮ ಕೈಗೊಂಡಿದ್ದಾರೆ.
ಎಲ್ಲ ಕಡೆಯೂ ಆರೋಪವಿತ್ತು
ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದರು. ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಿಕ್ಷಕ ವೃತ್ತಿಯನ್ನು ನಿರ್ವಹಿಸುತ್ತಿದ್ದ ಈತ ತನ್ನ ಸೇವಾವಧಿಯನ್ನು ವಿವಿಧ ಶಾಲೆಗಳಲ್ಲಿ ಪೂರೈಸಿದ್ದ. ತಾನು ಕರ್ತವ್ಯ ನಿರ್ವಹಿಸಿದ ಎಲ್ಲ ಶಾಲೆಗಳಲ್ಲೂ ಈತನ ವಿರುದ್ಧ ಇದೇ ರೀತಿಯ ಆರೋಪಗಳಿದ್ದವು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.