“ತಾಲೂಕಿನಲ್ಲಿ ಅಂತರ್ಜಲ ಮರುಪೂರಣ’
Team Udayavani, Jul 24, 2017, 6:20 AM IST
ಕಾರ್ಕಳ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಕಳ ಇದರ ವತಿಯಿಂದ ಮಾರುಕಟ್ಟೆ ಪ್ರಾಂಗಣದಲ್ಲಿ ಗಿಡ ನೆಡುವ ಹಾಗೂ ಪ್ರಗತಿಪರ ರೈತರನ್ನು ಸಮ್ಮಾನಿಸುವ ಕಾರ್ಯಕ್ರಮ ಶನಿವಾರ ಮಾರುಕಟ್ಟೆಯ ಸಭಾಭವನದಲ್ಲಿ ನಡೆಯಿತು.
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಮಾರುಕಟ್ಟೆಯ ಪ್ರಾಂಗಣದಲ್ಲಿ ವಿವಿಧ ರೀತಿಯ ಗಿಡಗಳನ್ನು ನೆಟ್ಟು ಬಳಿಕ ನಡೆದ ಸಭಾ ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ ಪರಿಸರ ಉತ್ಸವ, ಇಂಗುಗುಂಡಿಗಳ ನಿರ್ಮಾಣ ಸೇರಿದಂತೆ ವಿವಿಧ ರೀತಿಯಲ್ಲಿ ಪರಿಸರಕ್ಕೆ ಪೂರಕವಾಗುವ ಕೆಲಸಗಳನ್ನು ಮಾಡಲಾಗಿದೆ. ಈ ವರ್ಷ ತಾಲೂಕಿನ ಕೆರೆಗಳ ಅಭಿವೃದ್ಧಿಗೆ ವಿಶೇಷವಾದ ಮಹತ್ವ ನೀಡಲಾಗಿದ್ದು, ಮುಂದಿನ ವರ್ಷ ಮತ್ತಷ್ಟು ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು.ಅಂತರ್ಜಲ ಕುರಿತಾಗಿ ತಾಲೂಕಿನಲ್ಲಿಯೂ ಕೆಲವೊಂದು ಆತಂಕಗಳಿವೆ. ಆ ಆತಂಕಗಳನ್ನು ಪರಿ ಹರಿಸುವ ನಿಟ್ಟಿನಲ್ಲಿ ಅಂತರ್ಜಲ ಮರುಪೂರಣ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದರು.
ರೈತರು ಶ್ರಮಿಕರು, ಅವರಿಗೆ ಕೊಡುವ ಸಮ್ಮಾನ ಎಲ್ಲಾ ಸಮ್ಮಾನಗಳನ್ನು ಮೀರಿದ್ದು ಎಪಿಎಂಸಿ ಅಂತಹ ಸಮ್ಮಾನ ಮಾಡಿರುವುದು ಶ್ಲಾಘನೀಯ ಎಂದವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಪಿಎಂಸಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಮಾತನಾಡಿ,ಎ.ಪಿ.ಎಂಸಿ ಪ್ರಾಂಗಣದಲ್ಲಿ ಈಗಾಗಲೇ 200 ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ.ಸಾರ್ವಜನಿಕರು ಹಾಗೂ ಅಧಿಕಾರಿಗಳ ಸಹಕಾರದಿಂದ ತಾಲೂಕಿನಲ್ಲಿ ಪರಿಸರ ಪೂರಕ ಕಾರ್ಯಕ್ರಮಗಳು ಯಶಸ್ವಿಯಾಗಲಿವೆ ಎಂದರು.
ಇದೇ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಸದಾನಂದ ಶೆಟ್ಟಿ,ರಾಧಾಕೃಷ್ಣ ನಾಯ್ಕ, ಗೋವಿಂದ ಬಂಗೇರ,ವಿಲಿಯಂ ಮಸ್ಕರೇನ್ಹಸ್, ಸತ್ತಾರ್ ಸಾಹೇಬ್ ಅವರನ್ನು ಸಮ್ಮಾನಿಸಲಾಯಿತು.
ತಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಆರ್.ಕೆ. ಭಟ್ ಮಾತನಾಡಿದರು. ಜಿ.ಪಂ. ಸದಸ್ಯರಾದ ರೇಶ್ಮಾ, ದಿವ್ಯಾ ಗಿರೀಶ್, ಪುರಸಭಾ ಅಧ್ಯಕ್ಷೆ ಅನಿತಾ ಅಂಚನ್,ಉಪಾಧ್ಯಕ್ಷ ಗಿರಿಧರ್ ನಾಯಕ್, ತಾ.ಪಂ. ಉಪಾಧ್ಯಕ್ಷ ಗೋಪಾ ಮೂಲ್ಯ, ಎಂಪಿಎಂಸಿ ಸದಸ್ಯರಾದ ದಿನೇಶ್ ಪೈ, ಮೊದಲಾದವರು ಉಪಸ್ಥಿತರಿದ್ದರು.
ಎಂಪಿಎಂಸಿ ಉಪಾಧ್ಯಕ್ಷ ಸಂಜೀವ ನಾಯ್ಕ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಧರ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಜಯವರ್ಮ ಜೈನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.