ಕಾರ್ಕಳ: ಲಕ್ಷಾಂತರ ಮೌಲ್ಯದ ಸೊತ್ತು ಕಳವು: ಆಪ್ತ ಸ್ನೇಹಿತೆಯಿಂದಲೇ ನಡೆಯಿತು ಕೃತ್ಯ
ಆರೋಪಿಗಳ ಬಂಧನ
Team Udayavani, Dec 22, 2022, 7:12 AM IST
ಕಾರ್ಕಳ : ಮೆಹಂದಿಗೆ ಹೋಗಿದ್ದ ಸಂದರ್ಭ ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಮನೆಯ ಗಾದ್ರೆಜ್‌ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಅರಂಬೋಡಿ ಕಾಂತರಬೆಟ್ಟು ನಿವಾಸಿ ಪ್ರಸಾದ್ (34) ಹಾಗೂ ಸಹಕರಿಸಿದ ಕಲ್ಯಾದ ನಿವಾಸಿ ಶಿಬಾ (39)ಳನ್ನು ಪೊಲೀಸರು ಬಂಧಿಸಿ¨ªಾರೆ.
ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಕಂಗಿತ್ತುವಿನ ಉಷಾ ಜಗದೀಶ್ ಆಂಚನ್ ಅವರ ಮನೆಯಲ್ಲಿ ಡಿ. 3ರಂದು ಕಳ್ಳತನ ನಡೆದಿತ್ತು.
ಅಂದು ಮನೆಯ ಗಾದ್ರೆಜ್‌ನಲ್ಲಿ ಇರಿಸಿದ್ದ ಸುಮಾರು 4.50 ಲಕ್ಷ ರೂ. ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆ ಸಹಿತ 9,75,000 ರೂ. ಬೆಲೆಬಾಳುವ ಬಂಗಾರದ ಆಭರಣಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಬಂಧಿತರಾದ ಇಬ್ಬರು ಆರೋಪಿ ಗಳಿಂದ ಕಳ್ಳತನವಾಗಿದ್ದ 9,75,000 ರೂ. ಮೌಲ್ಯದ 216 ಗ್ರಾಂ ಬಂಗಾರದ ಒಡವೆಗಳು ಮತ್ತು 77 ಗ್ರಾಂ ತೂಕದ ಬೆಳ್ಳಿಯ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಹಲವು ಪ್ರಕರಣಗಳಲ್ಲಿ ಭಾಗಿ
ಆರೋಪಿ ಪ್ರಸಾದ್ (ಪಚ್ಚು) ಮೇಲೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ, ಮೂಡುಬಿದಿರೆ, ಕಾರ್ಕಳ ನಗರ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ಮತ್ತು ಮೂಡುಬಿದಿರೆ ಠಾಣೆಯಲ್ಲಿ ಸುದರ್ಶನ ಜೈನ್ ಅವರ ಕೊಲೆ ಹಾಗೂ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣಗಳು ದಾಖಲಾಗಿದ್ದವು.
ನ್ಯಾಯಾಂಗ ಬಂಧನ
ಆರೋಪಿಗಳಿಬ್ಬರನ್ನು ನ್ಯಾಯಾ ಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇನ್‌ಸ್ಪೆಕ್ಟರ್ ಅಧಿಕಾರ ವಹಿಸಿದ ಮೂರೇ ದಿನದಲ್ಲಿ ಕೇಸು ಪತ್ತೆ
ಪ್ರಕರಣ ದಾಖಲಾಗಿ ಹಲವು ದಿನಗಳಾದರೂ ಕೃತ್ಯ ಭೇದಿಸಲು ಪೊಲೀಸರು ಹಿನ್ನಡೆ ಅನುಭವಿಸಿದ್ದರು. ತನಿಖೆಯನ್ನು ಕೈಗೆತ್ತಿಕೊಂಡ ಕಾರ್ಕಳ ವೃತ್ತ ನಿರೀಕ್ಷಕ ಟಿ.ಡಿ ನಾಗರಾಜ್‌ಅವರ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕಾರ ಸ್ವೀಕರಿಸಿಕೊಂಡ ಮೂರು ದಿನಗಳಲ್ಲಿ ಕಳ್ಳತನ ಪ್ರಕರಣವನ್ನು ಭೇದಿಸುವ ಮೂಲಕ ದರೋಡೆಕೋರರಿಗೆ ಬಿಸಿ ಮುಟ್ಟಿಸುವ ಕಾರ್ಯ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೆ ಮಚ್ಚಿಂದ್ರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಕಾರ್ಕಳ ಉಪವಿಭಾಗದ ಡಿವೈಎಸ್‌ಪಿ ವಿಜಯಪ್ರಸಾದ್ ಮುಂದಾಳತ್ವದಲ್ಲಿ, ಕಾರ್ಕಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್‌ಐ ತೇಜಸ್ವಿ ಟಿ.ಐ. ಮತ್ತು ಸಿಬಂದಿ ಗಿರೀಶ್, ಪ್ರಶಾಂತ್, ವಿಶ್ವನಾಥ್, ಸುಂದರ್, ವಿದ್ಯಾ, ಗಣೇಶ್ ರೆಡ್ಡಿ, ರುಕ್ಮಿಣಿ, ಶ್ಯಾಮ್, ಮಹಂತೇಶ, ಈರಣ್ಣ, ಅಶೋಕ್ ಪಡುಬಿದ್ರಿ ಮತ್ತು ಸತೀಶ್ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಎಸ್‌ಪಿ ಕಚೇರಿಯ ಸಿಬಂದಿ ಶಿವಾನಂದ ಹಾಗೂ ದಿನೇಶ್ ಸಹಕರಿಸಿದ್ದರು.
ಆಪ್ತ ಸ್ನೇಹಿತೆಯಿಂದಲೇ ನಡೆಯಿತು ಕೃತ್ಯ
ಕಳ್ಳತನವಾದ ಮನೆಯ ಮಾಲಕಿ ಉಷಾ ಅಂಚನ್ ಹಾಗೂ ಕಳ್ಳತನಕ್ಕೆ ಸಹಕರಿಸಿದ ಶಿಬು ಹಲವು ವರ್ಷಗಳ ಪರಿಚಯಸ್ಥರು. ಆಪ್ತ ಸ್ನೇಹಿತರು. ಇಬ್ಬರ ಮನೆಗಳ ನಡುವಿನ ಅಂತರ ಸುಮಾರು 50 ಮೀ. ದೂರವಷ್ಟೆ ಇರುವುದು.ಮೊದಲಿನಿಂದಲೂ ಅವರಿಬ್ಬರು ಜತೆಯಾಗಿ ಕಾರ್ಯಕ್ರಮಗಳಿಗೆ ಹೋಗಿ ಬರುತ್ತಿದ್ದರು.ಕಳ್ಳತನವಾದ ದಿನ ರಾತ್ರಿ ಇಬ್ಬರು ಜತೆಯಾಗಿ ಪರಿಸರದಲ್ಲಿ ನಡೆದ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಮೊದಲು ತೆರಳುವಾಗ ಸ್ಕೂಟಿಯಲ್ಲಿ ತೆರಳುತಿದ್ದರು. ಅವತ್ತು ನಾವು ನಡೆದಾಡಿಕೊಂಡು ಆರಾಮವಾಗಿ ಮಾತಾಡಿಕೊಂಡು ಹೋಗುವ ಅಂದಿದ್ದಳು. ಆಕೆಯ ಮರುಳು ಮಾತಿಗೆ ಉಷಾ ಒಪ್ಪಿ ನಡೆದುಕೊಂಡೆ ಇಬ್ಬರು ಇನ್ನಿತರರ ಜತೆ ಸೇರಿ ಹೋಗಿದ್ದರು. ದೊಡ್ಡ ಕರಿಮಣಿ ಹಾಕುವುದು ಬೇಡವೆಂದೂ ಶಿಬಾ ಹೇಳಿದ್ದಳು. ಅದರಂತೆ ಅದನ್ನು ಮನೆಯಲ್ಲೇ ಇರಿಸಿ ಸಣ್ಣ ಕರಿಮಣಿ ಹಾಕಿದ್ದರು. ಮೊದಲೇ ಯೋಜನೆ ರೂಪಿಸಿದ್ದ ಶಿಬಾ ಇನ್ನೊಂದು ಕಡೆ ಸಂಬಂದಿ ಪ್ರಸಾದ್‌ಗೆ ಮಾಹಿತಿ ನೀಡಿದ್ದಳು. ಆಕೆಯ ಮಾಹಿತಿ ಆಧರಿಸಿ ಆತ ಕಳ್ಳತನಗೈದಿದ್ದ. ಕಳ್ಳತನವಾದ ಬಳಿಕವೂ ಆರೋಪಿತೆ ಶಿಬು ನಾಟಕವಾಡಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.