ಕಾರ್ಕಳ ಪೊಲೀಸ್‌ ವಸತಿಗೃಹ; ಅವಧಿ ಪೂರ್ಣಗೊಂಡರೂ ಮುಗಿಯದ ಕಾಮಗಾರಿ


Team Udayavani, Feb 10, 2020, 7:04 AM IST

0902KKRAM5NEW

ಆರಕ್ಷಕರ ವಾಸಕ್ಕೆ ನಿರ್ಮಾಣಗೊಳ್ಳುತ್ತಿರುವ ವಸತಿಗೃಹ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ಆಗುತ್ತಿಲ್ಲ. ಅವಧಿ ಮುಗಿದು ಹತ್ತು ತಿಂಗಳು ಕಳೆದರೂ ಇನ್ನೂ ಒಂದೆರಡು ತಿಂಗಳಲ್ಲಿ ಕಾಮಗಾರಿ ಮುಗಿಯುವುದು ಅನುಮಾನ.

ಕಾರ್ಕಳ: ಕಾರ್ಕಳ ಪೊಲೀಸ್‌ ಠಾಣೆಯ ಪಕ್ಕದಲ್ಲೇ ಪೊಲೀಸ್‌ ಸಿಬಂದಿ ವರ್ಗಕ್ಕೆ ವಸತಿಗೃಹ ನಿರ್ಮಾಣವಾಗುತ್ತಿದೆ. 2018ರ ಜನವರಿಯಲ್ಲಿ ಕಾಮಗಾರಿಗೆ ಚಾಲನೆ ದೊರೆತಿದ್ದರೂ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ಮಾತ್ರ ನಡೆದಿಲ್ಲ. ಟೆಂಡರ್‌ ನಿಯಮದಂತೆ 2019ರ ಮೇ ತಿಂಗಳಲ್ಲಿ ಗುತ್ತಿಗೆದಾರರು ಕಟ್ಟಡವನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಬೇಕಿತ್ತು. ಅವಧಿ ಮುಗಿದು 10 ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಗುತ್ತಿಗೆದಾರರು ಇನ್ನೂ ಒಂದೆರಡು ತಿಂಗಳಲ್ಲಿ ಕಾಮಗಾರಿ ಮುಗಿಸುವುದು ಅನುಮಾನವಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಇದರ ವತಿಯಿಂದ ಪೊಲೀಸ್‌ ಗೃಹ 2020 ಯೋಜನೆಯಡಿ ವಸತಿಗೃಹ ಕಟ್ಟಡ ನಿರ್ಮಾಣಕ್ಕೆ 929.20 ಲಕ್ಷ ರೂ. ಬಿಡುಗಡೆಗೊಂಡಿತ್ತು. ಉಡುಪಿಯ ಶ್ರುತಿ ಎಂಜಿನಿಯರ್ನವರು ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದರು.

48 ಮನೆ
ಕಾರ್ಕಳದ ಪೊಲೀಸ್‌ ವಸತಿ ಸಮುಚ್ಚಯದಲ್ಲಿ ಎರಡು ಅಂತಸ್ತಿನ 4 ಬ್ಲಾಕ್‌ಗಳಲ್ಲಿ ಒಟ್ಟು 48 ವಸತಿ ಗೃಹಗಳಿವೆ. ಇದರಿಂದ ಕಾರ್ಕಳ ನಗರ, ಗ್ರಾಮಾಂತರ ಹಾಗೂ ಅಜೆಕಾರು ಪೊಲೀಸ್‌ ಠಾಣೆಯ 48 ಪೊಲೀಸ್‌ ಕುಟುಂಬಕ್ಕೆ ಪ್ರಯೋಜನ ಲಭಿಸಲಿದೆ. ಕಾರ್ಕಳ ನಗರ ಠಾಣೆಯಲ್ಲಿ 44, ಗ್ರಾಮಾಂತರದಲ್ಲಿ 27, ಅಜೆಕಾರು ಠಾಣೆಯಲ್ಲಿ 27 ಸಿಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವರು ಹಳೆ ವಸತಿ ಗೃಹಗಳಲ್ಲಿ ವಾಸ್ತವ್ಯ ಹೂಡಿದ್ದರೆ ಮತ್ತೆ ಕೆಲವರು ಬಾಡಿಗೆ ಮನೆಯಲ್ಲಿ ವ್ಯಾಸ್ತವ್ಯ ಹೊಂದಿದ್ದಾರೆ.

ಸರಕಾರಿ ವಸತಿಗೃಹ ಹೊಂದಿರದ ಪೊಲೀಸರಿಗೆ ಎಚ್‌ಆರ್‌ಎ ಭತ್ಯೆ ಅವರ ಖಾತೆಗೆ ಜಮೆಯಾಗುತ್ತಿದೆ.

ಪ್ರಾರಂಭದಲ್ಲಿ ಮರಳಿನ ಅಭಾವ ತಲೆದೋರಿದ ಹಿನ್ನೆಲೆಯಲ್ಲಿ ಕಟ್ಟಡ ಕಾಮಗಾರಿ ಆಮೆಗತಿಯಲ್ಲಿ ಸಾಗಿತ್ತು. ಮರಳಿನ ಅಭಾವ ಖಾಸಗಿ ಮಾತ್ರವಲ್ಲದೇ ಸರಕಾರಿ ಕಟ್ಟಡ ನಿರ್ಮಾಣಕ್ಕೂ ಅಡೆತಡೆಯುಂಟು ಮಾಡಿತ್ತು.

ಶಿಥಿಲಾವಸ್ಥೆಯಲ್ಲಿ
ಹಳೆ ವಸತಿಗೃಹ
35 ವರ್ಷದ ಹಿಂದೆ ನಿರ್ಮಾಣವಾದ ಪೊಲೀಸ್‌ಗೃಹಗಳು ಶಿಥಿಲಾವಸ್ಥೆಯಲ್ಲಿದ್ದು, ಮನೆ ಛಾವಣಿ ಕುಸಿಯುವ ಭೀತಿಯಲ್ಲಿದೆ. ಮಳೆಗಾಲದಲ್ಲಿ ಮಳೆ ನೀರು ಸೋರುವುದು ಸಾಮಾನ್ಯ ಇದರಿಂದಾಗಿ ಕರ್ತವ್ಯದ ಒತ್ತಡದ ಜತೆಗೆ ಮನೆ ಸಮಸ್ಯೆಯೂ ಸಿಬಂದಿಯನ್ನು ಕಾಡುತ್ತಿದೆ.

ನಿರೀಕ್ಷೆ
ರಾಜ್ಯ ಗೃಹ ಸಚಿವರಾಗಿರುವ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಹಿನ್ನೆಲೆಯಲ್ಲಿ ಉಡುಪಿ ಭಾಗದಲ್ಲಿನ ಪೊಲೀಸ್‌ ಠಾಣೆ, ಪೊಲೀಸ್‌ ವಸತಿಗೃಹಗಳ ಕುರಿತು ವಿಶೇಷ ಮುತುವರ್ಜಿ ವಹಿಸಲಿದ್ದಾರೆ ಎನ್ನುವ ನಿರೀಕ್ಷೆ ಪೊಲೀಸರದ್ದು. ಅಜೆಕಾರು, ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಸಿಬಂದಿ ನಕ್ಸಲ್‌ ವ್ಯಾಪ್ತಿಗೊಳಪಟ್ಟ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರಣ ಹೊಸ ಪೊಲೀಸ್‌ ವಸತಿಗೃಹದಲ್ಲೇ ವಾಸ್ತವ್ಯ ಹೂಡಿದಲ್ಲಿ ತತ್‌ಕ್ಷಣಕ್ಕೆ ಕಾರ್ಯಪ್ರವೃತ್ತರಾಗಲು ಅನುಕೂಲವಾಗಲಿದೆ. ಪೊಲೀಸ್‌ ಠಾಣೆ ಹಾಗೂ ಉನ್ನತ ಹಂತದ ಪೊಲೀಸ್‌ ಅಧಿಕಾರಿಗಳ ವಸತಿ ಗೃಹ ಹೊರತುಪಡಿಸಿದಲ್ಲಿ ಈಗಿರುವ ಸಿಬಂದಿ ವಸತಿಗೃಹಕ್ಕೆ ನೀರಿನ ಸಮಸ್ಯೆ ಇದೆ. ಹೊಸ ಕಟ್ಟಡದ ಸಮೀಪ ಹೊಸ ಕೊಳವೆ ಬಾವಿ ಕೊರೆದು ಪಂಪ್‌ ಅಳವಡಿಸಿದ್ದರೂ ಪೈಪ್‌ಲೈನ್‌ ಕಾರ್ಯವಾಗಿಲ್ಲ. ಠಾಣೆಯ ಪಕ್ಕದಲ್ಲೇ ಇರುವ ಸರಕಾರಿ ಬಾವಿಗೆ ಪಂಪ್‌ ಅಳವಡಿಸಿ ಪೈಪ್‌ಲೈನ್‌ ಸಂಪರ್ಕ ನೀಡಿದಲ್ಲಿ ನೀರಿನ ಸಮಸ್ಯೆ ಬಗೆಹರಿಯಲಿದೆ.

ಶೀಘ್ರ ಮುಗಿಸಲು ಸೂಚನೆ
2019ರ ಮೇ ವೇಳೆ ವಸತಿಗೃಹದ ಕಾಮಗಾರಿ ಮುಗಿಯಬೇಕಿತ್ತು. ಕಾಮಗಾರಿ ವಿಳಂಬದ ಕುರಿತು ಕೆಎಸ್‌ಪಿಎಚ್‌, ಐಡಿಸಿಎಲ್‌, ಗುತ್ತಿಗೆದಾರರೊಂದಿಗೆ ಮಾತನಾಡಿ ಶೀಘ್ರವಾಗಿ ಕಾಮಗಾರಿ ಮುಗಿಸಿಕೊಡುವಂತೆ ಸೂಚಿಸಲಾಗುವುದು.
-ವಿ. ಸುನಿಲ್‌ ಕುಮಾರ್‌, ಶಾಸಕರು

ಗಮನ ಹರಿಸಲಿ
ವಸತಿಗೃಹ ಕಾಮಗಾರಿ ಪೂರ್ಣಗೊಂಡು ಶೀಘ್ರವಾಗಿ ನಮಗೆ ದೊರೆತಲ್ಲಿ ಅನುಕೂಲವಾಗುತ್ತಿತ್ತು. ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲೂ ಸಂಬಂಧಪಟ್ಟವರು ಗಮನ ಹರಿಸಬೇಕು.
-ಹೆಸರು ಹೇಳಲಿಚ್ಛಿಸದ ಪೊಲೀಸ್‌

-ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.