ಕಾರ್ಕಳ: ಪದವೀಧರ ಶಿಕ್ಷಕರನ್ನಾಗಿ ಪರಿಗಣಿಸುವಂತೆ ಮನವಿ
Karkala: Request to consider graduate teachers
Team Udayavani, Jun 2, 2019, 11:59 AM IST
ಕಾರ್ಕಳ: ಪದವಿ ವಿದ್ಯಾರ್ಹತೆ ಮತ್ತು ಸೇವಾನುಭವ ಪಡೆದಿರುವ ಸೇವಾನಿರತ ಪ್ರಾಥಮಿಕ ಶಾಲಾ ಸಹ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ವೃಂದಕ್ಕೆ ಪದನಾಮಕರಿಸುವಂತೆ ಉಡುಪಿ ಜಿಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ವೇದಿಕೆ ವತಿಯಿಂದ ಸರಕಾರಕ್ಕೆ ಕ್ಷೇತ್ರಾ ಶಿಕ್ಷಣಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು.
ಜೂ. 1ರಂದು ಕಾರ್ಕಳ ಬಿಇಒ ಕಚೇರಿಯಲ್ಲಿ ಮನವಿ ನೀಡಿದ ವೇದಿಕೆ ಸದಸ್ಯರು, 1ರಿಂದ 7 ನೇ ತರಗತಿಗೆ ನೇಮಕಗೊಂಡ ನಾವು 2005 ರಿಂದ 8ನೇ ತರಗತಿಗೂ ತರಗತಿ ನಡೆಸುತ್ತಿದ್ದೇವೆ. ರಾಜ್ಯದಲ್ಲಿ 82 ಸಾವಿರಕ್ಕಿಂತ ಅಧಿಕ ಪದವಿ (B.A., B.Sc., MA., M.Sc, Bed, Med, Ph.d.) ಪಡೆದ ಅನುಭವಿ ಶಿಕ್ಷಕರು 6-8ನೇ ತರಗತಿಗಳನ್ನು ಕಳೆದ 14 ವರ್ಷಗಳಿಂದ ಬೋಧಿಸುತ್ತಿದ್ದರೂ ಅವರನ್ನು ಮುಂಭಡ್ತಿಗೆ ಪರಿಗಣಿಸದೇ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು ಹುದ್ದೆಗಳನ್ನು 2 ಬಾರಿ ನೇರ ನೇಮಕ ಮಾಡಿ, ಇದೀಗ ಮತ್ತೆ 3ನೇ ಬಾರಿ ನೇರ ನೇಮಕ ಮಾಡಲಾಗುತ್ತಿದೆ.
ಈ ಕುರಿತು ಇಲಾಖೆ ಮುಖ್ಯಸ್ಥರು ಮತ್ತು ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ 2018 ಫೆ. 5ರಂದು ಪ್ರೀಡಂ ಪಾರ್ಕ್‌ನಲ್ಲಿ 25,000 ಶಿಕ್ಷಕರು ಉಪವಾಸ ಸತ್ಯಾಗ್ರಹ ನಡೆಸಿದರೂ ಸರಕಾರ ಸ್ಪಂದಿಸಿಲ್ಲ ಎಂದು ವೇದಿಕೆ ಬೇಸರ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.