ಎಲ್ಲ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲೂ ಜನೌಷಧ ಕೇಂದ್ರ: ಸಚಿವ ಶ್ರೀರಾಮುಲು
ಕಾರ್ಕಳ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆ ಲೋಕಾರ್ಪಣೆ
Team Udayavani, Nov 13, 2019, 4:18 AM IST
ಕಾರ್ಕಳ: ರಾಜ್ಯದ ಪ್ರತಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲೂ ಜನೌಷಧ ಕೇಂದ್ರ ತೆರೆಯುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು. ಅವರು ಮಂಗಳವಾರ ಕಾರ್ಕಳ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಸಭಾ ಕಾರ್ಯಕ್ರಮ ದಲ್ಲಿ ಮಾತನಾಡಿದರು. ರಾಜ್ಯದ ಜನತೆಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಬೇಕು ಎನ್ನುವ ಉದ್ದೇಶದಿಂದ ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಎರಡು ತಿಂಗಳಲ್ಲಿ ಹುದ್ದೆ ಭರ್ತಿ
ವೈದ್ಯರು, ಆರೋಗ್ಯ ಸಹಾಯಕಿಯರು ಸೇರಿದಂತೆ ಖಾಲಿ ಇರುವ ಹುದ್ದೆಗಳನ್ನು ಎರಡು ತಿಂಗಳೊಳಗಾಗಿ ಭರ್ತಿ ಮಾಡುವ, ಆರೋಗ್ಯ ಇಲಾಖೆಯಲ್ಲಿರುವ ಅರೆಕಾಲಿಕ ನೌಕರರನ್ನೂ ಕೆಲವು ಮಾನದಂಡಗಳ ಆಧಾರದಲ್ಲಿ ಖಾಯಂಗೊಳಿಸುವ ಯೋಚನೆಯೂ ಇದೆ ಎಂದರು.
ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೂ ಶ್ರಮ
ಆರೋಗ್ಯ ಸುಧಾರಣೆಯಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ಅಪಾರವಾದುದು. ಪ್ರಸ್ತುತ ಅವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಒಟ್ಟು 6,500 ರೂ. ಗೌರವಧನ ನೀಡಲಾಗುತ್ತಿದೆ. ಅವರ ಶ್ರಮಕ್ಕೆ ತಿಂಗಳಿಗೆ ಕನಿಷ್ಠ 10 ಸಾವಿರ ರೂ. ಗೌರವಧನ ಪಾವತಿಯಾಗಬೇಕು. ಗೌರವಧನ ಹೆಚ್ಚಳ ನಿಟ್ಟಿನಲ್ಲಿ ಮುಖ್ಯಮಂತ್ರಿ ಜತೆಗೆ ಮಾತನಾಡಿದ್ದೇನೆ ಎಂದರು.
ಪೊಲೀಸ್ ನಿಯೋಜನೆ
ವೈದ್ಯರ ಮೇಲೆ ಹಲ್ಲೆ ತಪ್ಪು. ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಆಸ್ಪತ್ರೆಗಳಿಗೆ ಪೊಲೀಸ್ ನಿಯೋಜನೆ ಮತ್ತು ಸಿಸಿಟಿವಿ ಅಳವಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕಾರ್ಕಳಕ್ಕೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ
ರಾಜ್ಯದಲ್ಲಿ ಒಟ್ಟು 8 ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆ ತೆರೆಯುವ ಉದ್ದೇಶ ಸರಕಾರಕ್ಕಿದ್ದು, ಕಾರ್ಕಳಕ್ಕೊಂದು ಆಸ್ಪತ್ರೆ ಮಂಜೂರು ಮಾಡಲಾಗುವುದು ಎಂದರು. ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿದರು. ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸಿಇಒ ಪ್ರೀತಿ ಗೆಹಲೋಟ್, ಆರೋಗ್ಯ ಇಲಾಖೆ ವಿಭಾಗೀಯ ಸಹನಿರ್ದೇಶಕಿ ಡಾ| ಪುಷ್ಪಲತಾ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಜಿ.ಪಂ. ಸದಸ್ಯರಾದ ಸುಮಿತ್ ಶೆಟ್ಟಿ ಕೌಡೂರು, ಉದಯ ಎಸ್. ಕೋಟ್ಯಾನ್, ರೇಷ್ಮಾ ಉದಯ ಶೆಟ್ಟಿ, ದಿವ್ಯಶ್ರೀ ಅಮೀನ್, ಜ್ಯೋತಿ ಹರೀಶ್, ಎಂಸಿಎಫ್ ಡೆಪ್ಯೂಟಿ ಮ್ಯಾನೇಜರ್ ಕೀರ್ತನ್ ಕೆ.ಬಿ., ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಶೈಲೇಂದ್ರ ರಾವ್ ವೇದಿಕೆಯಲ್ಲಿದ್ದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ಅಶೋಕ್ ಎಚ್. ಸ್ವಾಗತಿಸಿ, ಶಿಕ್ಷಕ ರಾಜೇಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ವೈದ್ಯಾಧಿಕಾರಿ ಡಾ| ಕೃಷ್ಣಾನಂದ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.