ಸಿದ್ದರಾಮಯ್ಯ ಸಮರ್ಥನೆ ತಪ್ಪೆಂದ ಶಾಸಕ,ತಾನು ತಪ್ಪುಮಾಡಿಲ್ಲ ಎಂದ ಎಸ್ ಐ:ಏನಿದು ಕಾರ್ಕಳ ಘಟನೆ?
Team Udayavani, Jul 9, 2021, 2:27 PM IST
ಮಣಿಪಾಲ: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿಚಾರಣೆ ನೆಪದಲ್ಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ವಿಚಾರ ಇದೀಗ ರಾಜಕೀಯ ಬಣ್ಣ ಪಡೆಯುತ್ತಿದೆ. ಕಾಂಗ್ರೆಸ್- ಬಿಜೆಪಿ ನಾಯಕರ ಆರೋಪ- ಪ್ರತ್ಯಾರೋಪಗಳಿಗೆ ಕೇಳಿಬರುತ್ತಿದೆ.
ಏನಿದು ಘಟನೆ: ರಾಧಾಕೃಷ್ಣ ಹಿರ್ಗಾನ ಎಂಬಾತ ವರ್ಷದ ಹಿಂದೆ ಫೇಸ್ ಬುಕ್ ನಲ್ಲಿ ಯೋಧರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು. ಕೆಲವರು ಇದರ ಬಗ್ಗೆ ಠಾಣೆ ಮೆಟ್ಟಿಲೇರಿದ್ದರು. ಹೀಗಾಗಿ ಕಾರ್ಕಳ ಟೌನ್ ಪೊಲೀಸರು ವಿಚಾರಣೆಗೆ ಕರೆದಿದ್ದರು. ಆದರೆ ರಾಧಾಕೃಷ್ಣ ಹಿರ್ಗಾನ ಪೊಲೀಸರು ತನಿಖೆಗೆ ಹಾಜರಾಗುತ್ತಿರಲಿಲ್ಲ ಎನ್ನಲಾಗಿದೆ.
ಇದನ್ನೂ ಓದಿ:ಸುಳ್ಳು ಕೇಸ್ ಆಧರಿಸಿ ಕಾರ್ಕಳ ಕೈ ಕಾರ್ಯಕರ್ತನ ಮೇಲೆ ಪೊಲೀಸರಿಂದ ದೌರ್ಜನ್ಯ: ಸಿದ್ದರಾಮಯ್ಯ
ಆದರೆ ಗುರುವಾರ ರಾಧಾಕೃಷ್ಣ ಹಿರ್ಗಾನರನ್ನು ಠಾಣೆಗೆ ಕರೆಸಿದ ಕಾರ್ಕಳ ಟೌನ್ ಎಸ್ ಐ ಮಧು ಅವರಿಗೆ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಅವರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸತ್ಯಕ್ಕೆ ದೂರವಾದ ವಿಚಾರ: ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾರ್ಕಳ ಎಸ್ ಐ ಮಧು, ಆತ ನಮ್ಮ ವಿಚಾರಣೆಗೆ ಸಹಕಾರ ನೀಡಿಲ್ಲ, ಹೀಗಾಗಿ ನಾವು ಗದರಿಸಿದ್ದು ಹೌದು, ಆದರೆ ಹೊಡೆದಿಲ್ಲ. ಈ ಆರೋಪಗಳು ಸತ್ಯಕ್ಕೆ ದೂರವಾದವು ಎಂದಿದ್ದಾರೆ.
ನಮ್ಮ ತನಿಖೆಯ ಹಾದಿಯಲ್ಲಿ ಎಲ್ಲೂ ತಪ್ಪು ಮಾಡಿಲ್ಲ. ನಾವು ಆತನಿಗೆ ಹೊಡೆದಿಲ್ಲ. ಕಾನೂನಾತ್ಮಕವಾಗಿ ನಾವು ಸರಿ ಇದ್ದೇವೆ. ನಾವು ಯಾರ ಪರ ಅಥವಾ ವಿರೋಧವಾಗಿ ಕೆಲಸ ಮಾಡಿಲ್ಲ. ಆತನ ದೇಶದ ಯೋಧರ ಬಗ್ಗೆ ಅವಮಾನಕಾರಿಯಾಗಿ ಪೋಸ್ಟ್ ಹಾಕಿದ್ದ, ಅದಕ್ಕಾಗಿ ತನಿಖೆಗೆ ಕರೆದಿದ್ದೇವೆ ಎಂದು ಎಸ್ ಐ ಮಧು ಸ್ಪಷ್ಟನೆ ನೀಡಿದ್ದಾರೆ.
ಸಿದ್ದರಾಮಯ್ಯ ಖಂಡನೆ- ಸುನೀಲ್ ತಿರುಗೇಟು: ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ. ಇವರ ಅನಾರೋಗ್ಯವನ್ನೂ ಲೆಕ್ಕಿಸದೆ, ಹಳೆ ಸುಳ್ಳು ಕೇಸ್ ಆಧರಿಸಿ, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ಗೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಟ್ವಿಟರ್ ನಲ್ಲೇ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಜಾಲತಾಣದಲ್ಲಿ ಈ ಹಿಂದೆ ಯಾವ ಪೋಸ್ಟ್ ಹಾಕಿದ್ದಾನೆ ಎಂಬ ಅರಿವಿಲ್ಲದೆ ಸಿದ್ದರಾಮಯ್ಯ ಸಮರ್ಥಿಸಿರುವುದು ಅವರ ಬದ್ಧತೆಯನ್ನು ಪ್ರಶ್ನಿಸುತ್ತದೆ. ಸಮರ್ಥಿಸುವ ಭರದಲ್ಲಿ ಸೈನಿಕರನ್ನು ಸಿದ್ದರಾಮಯ್ಯ ಅವಮಾನಿಸುತ್ತಿದ್ದಾರೆ. ದೇಶದ್ರೋಹಿ ವ್ಯಕ್ತಿಯನ್ನು ಬೆಂಬಲಿಸುವುದು ನಾಚಿಕೆಗೇಡಿನ ಸಂಗತಿ ಎಂದು ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
“ದೇಶದ್ರೋಹ ಎಂದರೇನು ಎಂದು ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು. ಅದು ನಿಮ್ಮ ಕಾಲ. ಸೈನಿಕರು, ಸೈನ್ಯದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಈಗ ಕಾರ್ಕಳದಲ್ಲಿ ಪೊಲೀಸ್ ಬಂಧಿಸಿದೆ. ಇದು ನಮ್ಮ ಕಾಲ. ಅತ್ತಂತೆ ನಟಿಸುವವರ ಸಮರ್ಥನೆಗೆ ನೀವು ಬೇಗ ಬರುತ್ತಿರಿ ಎಂದು ಶಾಸಕರು ತಿರುಗೇಟು ನೀಡಿದ್ದಾರೆ.
ಕೆಜೆ ಹಳ್ಳಿ ಗಲಭೆ – ನಿಮ್ಮ ಸಮರ್ಥನೆ, ಮಂಗಳೂರು ಗಲಭೆ- ನಿಮ್ಮ ಸಮರ್ಥನೆ, ಬೆಂಗಳೂರಿನ ಗೌರಿಪಾಳ್ಯದಲ್ಲಿ ವೈದ್ಯರ ಮೇಲೆ ಹಲ್ಲೆ – ನಿಮ್ಮ ಸಮರ್ಥನೆ, ಹಿಂದು ಕಾರ್ಯಕರ್ತರ ಕಗ್ಗೊಲೆ – ನಿಮ್ಮ ಸಮರ್ಥನೆ, ಕೊಲೆಗಡುಕ ಎಸ್ ಡಿ ಪಿಐ, ಪಿಎಫ್ ಐ ಸಂಘಟನೆ – ನಿಮ್ಮ ಸಮರ್ಥನೆ ಎಂದು ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ದೇಶದ್ರೋಹ ಎಂದರೇನು ಎಂದು ಶ್ರೀ ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು. ಅದು ನಿಮ್ಮ ಕಾಲ.
ಸೈನಿಕರು, ಸೈನ್ಯದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಈಗ ಕಾರ್ಕಳದಲ್ಲಿ ಪೊಲೀಸ್ ಬಂಧಿಸಿದೆ. ಇದು ನಮ್ಮ ಕಾಲ.1/n
— Sunil Kumar Karkala (@karkalasunil) July 9, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.