![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 13, 2023, 1:17 PM IST
ಉಡುಪಿ: ಕಾಂಗ್ರೆಸ್ ಅಭ್ಯರ್ಥಿಯ ತೀವ್ರ ಹೋರಾಟ ಮತ್ತೊಂದೆಡೆ ಗುರು ಪ್ರಮೋದ್ ಮುತಾಲಿಕ್ ಸ್ಪರ್ಧೆಯ ಹೊರತಾಗಿಯೂ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಪವರ್ ಮಿನಿಸ್ಟರ್ ವಿ ಸುನೀಲ್ ಕುಮಾರ್ ಅವರು ತಮ್ಮ ಕ್ಷೇತ್ರ ಉಳಿಸಿಕೊಂಡಿದ್ದಾರೆ.
ಚುನಾವಣೆ ಘೋಷಣೆಗೂ ಮೊದಲೇ ಪ್ರಮೋದ್ ಮುತಾಲಿಕ್ ಅವರ ಸ್ಪರ್ಧೆಯ ಕಾರಣದಿಂದ ರಾಜ್ಯದ ಕುತೂಹಲಕ್ಕೆ ಕಾರಣವಾಗಿದ್ದ ಕಾರ್ಕಳ ಕ್ಷೇತ್ರದಲ್ಲಿ ಕೊನೆಗೂ ಸುನೀಲ್ ಕುಮಾರ್ ಗೆಲುವಿನ ನಗೆ ಬೀರಿದ್ದಾರೆ.
ಮೊದಲ ಬಾರಿ ಟಿಕೆಟ್ ಪಡೆದಿದ್ದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಅವರು ಸಚಿವ ಸುನಿಲ್ ಗೆ ಭರ್ಜರಿ ಫೈಟ್ ನೀಡಿದ್ದರು. ಆದರೆ ಪ್ರಮೋದ್ ಮುತಾಲಿಕ್ ಅವರಿಂದ ನಿರೀಕ್ಷಿತ ಫೈಟ್ ಬರಲಿಲ್ಲ.
ಇದನ್ನೂ ಓದಿ:ಉಡುಪಿ : ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಗೆಲುವು
ಉಂಟಾದ ಗೊಂದಲ: ಸುಮಾರು 12 ಸುತ್ತಿನ ಮತ ಎಣಿಕೆ ಮುಗಿದ ಬಳಿಕ ಕ್ಷೇತ್ರದ ಫಲಿತಾಂಶದ ಬಗ್ಗೆ ಗೊಂದಲ ಉಂಟಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ 850 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆಂಬ ವಾಟ್ಸಾಪ್ ಸಂದೇಶ ಹರದಿದಾಡಿತ್ತು. ಹಲವೆಡೆ ಕಾಂಗ್ರೆಸ್ ಅಭಿಮಾನಿಗಳು ಸಂಭ್ರಾಮಾಚರಣೆಯಲ್ಲಿ ಕೂಡಾ ತೊಡಗಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.