Marriage”ಸಪ್ತಪದಿ’ ಶೀಘ್ರ ಮರು ಆರಂಭ? ಏನಿದು ಯೋಜನೆ?
Team Udayavani, Oct 4, 2023, 12:38 AM IST
ಉಡುಪಿ: ಮದುವೆಗೆ ದುಂದುವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಮುಜರಾಯಿ ಇಲಾಖೆ 2021ರಲ್ಲಿ ರಾಜ್ಯಾದ್ಯಂತ ಜಾರಿಗೆ ತಂದಿದ್ದ “ಸಪ್ತಪದಿ’ ಯೋಜನೆ ಮುಂದುವರಿಯುವ ಸೂಚನೆ ಲಭಿಸಿದೆ.
ಬಿಜೆಪಿ ಸರಕಾರದಲ್ಲಿ ಮುಜರಾಯಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರ ಮುತುವರ್ಜಿಯಿಂದ “ಸಪ್ತಪದಿ’ ಆರಂಭವಾಗಿತ್ತು. ಹೊಸ ಸರಕಾರ ಈ ಯೋಜನೆ ಮುಂದುವರಿ ಸುವ ಬಗ್ಗೆ ಇದುವರೆಗೂ ಯಾವುದೇ ಸೂಚನೆ ಹೊರಡಿಸಿರಲಿಲ್ಲ. ಆದರೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಯೋಜನೆ ಮುಂದುವರಿಸುವ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರು ವುದು ಯೋಜನೆಯ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಂತಾಗಿದೆ.
ಏನಿದು ಯೋಜನೆ?
ವಧು-ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜತೆಗೆ ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇಗುಲಗಳ ಆಡಳಿತ ಮಂಡಳಿಗಳೇ ಮಾಡುತ್ತಿದ್ದವು. ಮದುಮಗನಿಗೆ ಅಂಗಿ, ಧೋತಿ ಹಾಗೂ 5 ಸಾವಿರ ರೂ.ನಗದು ಸಹಾಯ, ವಧುವಿಗೆ ಸೀರೆ, 1 ಸಾವಿರ ರೂ.ನಗದು ಮತ್ತು ಮಾಂಗಲ್ಯ ಸೂತ್ರಕ್ಕಾಗಿ 8 ಗ್ರಾಂ ಚಿನ್ನವನ್ನು ನೀಡಲಾಗುತ್ತಿತ್ತು. ವಧು ಮತ್ತು ವರರಿಬ್ಬರಿಗೂ ಒಟ್ಟು ಸಹಾಯದ ಮೊತ್ತ ಸುಮಾರು 55 ಸಾವಿರ ರೂ.ಆಗುತ್ತಿದ್ದು, ಪ್ರತೀ ಜೋಡಿಗೆ ಮದುವೆ ಸಮಾರಂಭಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಲು ದೇವಸ್ಥಾನಗಳಿಗೆ ಸರಕಾರದ ವತಿಯಿಂದ 55 ಸಾವಿರ ರೂ.ನೀಡಲಾಗುತ್ತಿತ್ತು.
ಕೋಟ್ಯಂತರ ರೂ. ವೆಚ್ಚ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಈ ಯೋಜನೆಗಾಗಿ 13,95,293 ರೂ., ಮಂದಾರ್ತಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ 32,92,591 ರೂ., ಕಮಲಶಿಲೆಯ ಶ್ರೀ ಬ್ರಾಹ್ಮಿà ದುರ್ಗಾಪರಮೇಶ್ವರೀ ದೇವಸ್ಥಾನ 1,50,000 ರೂ., ನೀಲಾವರದ ಶ್ರೀ ಮಹಿಷಮರ್ದಿನಿ ದೇವಸ್ಥಾನ 1,17,265 ರೂ., ಕೋಟದ ಶ್ರೀ ಅಮೃತೇಶ್ವರೀ ದೇವಸ್ಥಾನ 8,19,024 ರೂ., ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ 17,26,172 ರೂ.ಗಳನ್ನು ಇದಕ್ಕಾಗಿ ವಿನಿಯೋಗಿಸಿದೆ.
ಉಡುಪಿಯಲ್ಲಿ 153 ಜೋಡಿ ವಿವಾಹ
ಸಪ್ತಪದಿ ಯೋಜನೆಯ ಅನ್ವಯ 2021ರಿಂದ 2023ರ ಮಾರ್ಚ್ ತಿಂಗಳವರೆಗೆ ಕೊಲ್ಲೂರು ಶ್ರೀ ಮೂಖಾಂಬಿಕಾ ದೇವಸ್ಥಾನದಲ್ಲಿ ಇದುವರೆಗೆ 23 ಜೋಡಿ, ಮಂದಾರ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 76, ಕಮಲಶಿಲೆಯ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 3, ನೀಲಾವರದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 2, ಕೋಟದ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ 12, ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ 37 ಜೋಡಿ ವಿವಾಹವಾಗಿದ್ದಾರೆ.
ಸಪ್ತಪದಿ ಯೋಜನೆಯ ಬಗ್ಗೆ ಹಲವಾರು ಮಂದಿ ವಿಚಾರಿಸುತ್ತಿದ್ದಾರೆ. ಆದರೆ ಯೋಜನೆಯನ್ನು ಮುಂದುವರಿಸುವ ಬಗ್ಗೆ ಇದುವರೆಗೂ ಸರಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಬಂದಲ್ಲಿ ಎಲ್ಲ ಅಗತ್ಯಕ್ರಮಗಳನ್ನು ತೆಗೆದುಕೊಳ್ಳುವಂತೆ ದೇವಸ್ಥಾನಗಳಿಗೆ ಸೂಚಿಸಲಾಗುವುದು.
– ಪ್ರಶಾಂತ್ ಕುಮಾರ್ ಶೆಟ್ಟಿ, ಸಹಾಯಕ ಆಯುಕ್ತರು,
ಧಾರ್ಮಿಕ ದತ್ತಿ ಇಲಾಖೆ
ಆಷಾಢ ತಿಂಗಳಿದ್ದ ಕಾರಣ ಈ ಬಗ್ಗೆ ಯಾವುದೇ ಸೂಚನೆ ಹೊರಡಿಸಿಲ್ಲ. ಈ ಯೋಜನೆಯನ್ನು ಸ್ಥಗಿತಗೊಳಿಸುವ ಉದ್ದೇಶವಿಲ್ಲ. ಶೀಘ್ರದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು.
– ರಾಮಲಿಂಗಾರೆಡ್ಡಿ, ಸಚಿವರು, ಧಾರ್ಮಿಕ ದತ್ತಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.