KMC Hospital: 11 ದಿನಗಳ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

Team Udayavani, Feb 2, 2018, 12:29 PM IST

20-25.jpg

ಉಡುಪಿ: ಕೇವಲ 11 ದಿನಗಳ ಹಸುಳೆಗಿದ್ದ ಅಪರೂಪದ ಹೃದಯ ಸಂಬಂಧಿ ಸಮಸ್ಯೆಯನ್ನು ಸಂಕೀರ್ಣ ಹೃದಯ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ನಿವಾರಿಸುವ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ತಂಡ ವಿಶೇಷ ಸಾಧನೆ ಮಾಡಿದೆ.

11 ದಿನಗಳ ಹಿಂದೆ ಜನಿಸಿದ ಈ ಶಿಶುವಿನ ಹೃದಯದಲ್ಲಿ ಟಿಜಿಎ- ಟ್ರಾನ್ಸ್‌ಪೊಸಿಷನ್‌ ಆಫ್ ದಿ ಗ್ರೇಟ್‌ ಆರ್ಟರೀಸ್‌ (ಪ್ರಧಾನ ಅಪಧಮನಿಗಳ ಸ್ಥಾನಪಲ್ಲಟ) ಎಂಬ ಅಪರೂಪದ ಸಮಸ್ಯೆ ಇರುವುದನ್ನು ಕೆಎಂಸಿ ವೈದ್ಯರು ಪತ್ತೆಹಚ್ಚಿ ಅನಂತರ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಈಗ ಮಗು ಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದೆ ಎಂದು ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬ್ರಹ್ಮಾವರದ ಹರೀಶ್‌ ಅವರ ಪತ್ನಿ ಪೂರ್ಣಿಮಾ ಉಡುಪಿಯ ಸರಕಾರಿ ಆಸ್ಪತ್ರೆಯಲ್ಲಿ ಗಂಡುಮಗುವಿಗೆ ಜನ್ಮ ನೀಡಿದ್ದರು. ಆದರೆ ನವಜಾತ ಶಿಶುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಸರಕಾರಿ ಆಸ್ಪತ್ರೆಯ ವೈದ್ಯರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ಮಣಿಪಾಲ ಕೆಎಂಸಿಯ “ಶಿಶುಗಳ ತೀವ್ರ ನಿಗಾ ಘಟಕ’ದಲ್ಲಿ ಶಿಶುರೋಗ ತಜ್ಞ ಡಾ| ಲೆಸ್ಲಿ ಲೂಯಿಸ್‌ ಮತ್ತು ಹೃದ್ರೋಗ ತಜ್ಞ ಡಾ| ಪದ್ಮಕುಮಾರ್‌ ಅವರು ತಪಾಸಣೆ ನಡೆಸಿ ಮಗು ಗಂಭೀರ ಹಾಗೂ ಅಪರೂಪವಾದ ಟಿಜಿಎ ಸಮಸ್ಯೆಯಿಂದ ಬಳಲುತ್ತಿರುವುದನ್ನು ಪತ್ತೆ ಹಚ್ಚಿದರು. ಮಗುವನ್ನು ಸುಸಜ್ಜಿತ ತೀವ್ರ ನಿಗಾ ಘಟಕದಲ್ಲಿ ಇರಿಸಿ ಆರೈಕೆ ನೀಡಿದ ಬಳಿಕ ಹೃದಯ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಕಳುಹಿಸಲಾಯಿತು. ಅಲ್ಲಿ ಹೃದಯ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ| ಟಾಮ್‌ ದೇವಾಸಿಯಾ ಅವರ ನಿರ್ದೇಶನದಲ್ಲಿ ವಿಭಾಗದ ಸಹ ಪ್ರಾಧ್ಯಾಪಕ ಮತ್ತು ಖ್ಯಾತ ಹೃದ್ರೋಗ ತಜ್ಞ ಡಾ| ಅರವಿಂದ ಬಿಷ್ಣೋಯ್‌ ಅವರು ಸಂಕೀರ್ಣವಾದ ಟಿಜಿಎ ಸರಿಪಡಿಸುವ ಶಸ್ತ್ರಚಿಕಿತ್ಸೆ ನಡೆಸಿದರು ಎಂದು ಡಾ| ಅವಿನಾಶ್‌ ವಿವರಿಸಿದರು.

ಅತ್ಯಾಧುನಿಕ ತಂತ್ರಜ್ಞಾನ: ಶಿಶುವಿಗಿದ್ದ ಸಮಸ್ಯೆಗೆ ನಾನು ಮತ್ತು ನಮ್ಮ ವೈದ್ಯರ ತಂಡ ಸೂಕ್ತವಾಗಿ ಸ್ಪಂದಿಸಿ ಅಪರೂಪದ ಈ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿದ್ದೇವೆ. ಕೆಎಂಸಿಯಲ್ಲಿ ಈಗ ಲಭ್ಯ ಇರುವ “ಫೀಟಲ್‌ ಇಕೋ ಕಾರ್ಡಿಯಾಲಜಿ’ ಎಂಬ ಅತ್ಯಾಧುನಿಕ ಉಪಕರಣದಿಂದ ಇಂತಹ ಸಮಸ್ಯೆ ಪತ್ತೆ ಹಚ್ಚುವುದು ಸಾಧ್ಯವಾಯಿತು ಎಂದು ಡಾ| ಅರವಿಂದ್‌ ಬಿಷ್ಣೋಯ್‌ ತಿಳಿಸಿದರು.

ಡಾ| ಲೆಸ್ಲಿ ಲೂಯಿಸ್‌ ಮಾತನಾಡಿ, ಪ್ರಸ್ತುತ ಮಣಿಪಾಲ ದಲ್ಲಿಯೇ ಫೀಟಲ್‌ ಇಕೋ ಕಾರ್ಡಿಯಾಲಜಿ ತಂತ್ರಜ್ಞಾನ ಮತ್ತು ವಿಶೇಷ ತಜ್ಞ ವೈದ್ಯರು ಲಭ್ಯರಿದ್ದಾರೆ. ಈ ಚಿಕಿತ್ಸೆಗೆ 3-5 ಲ. ರೂ. ವೆಚ್ಚವಾಗುತ್ತದೆ ಎಂದು ಹೇಳಿದರು.ಡಾ| ಟಾಮ್‌ ದೇವಾಸಿಯಾ ಉಪಸ್ಥಿತರಿದ್ದರು. 

2-3 ವಾರ ಮಾತ್ರ ಬದುಕುತ್ತಿತ್ತು
ಮಣಿಪಾಲದ ಕೆಎಂಸಿ ಈಗ ವಯಸ್ಕರು ಮತ್ತು ಮಕ್ಕಳ ಹೃದ್ರೋಗ ಚಿಕಿತ್ಸೆಗೆ ಸುಸಜ್ಜಿತ ತಂತ್ರಜ್ಞಾನ, ತಜ್ಞ ವೈದ್ಯರ ತಂಡವನ್ನು ಹೊಂದಿದೆ. ಇದರ ಪರಿಣಾಮವಾಗಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ನಡೆಸುವುದು ಸಾಧ್ಯವಾಗಿದೆ. ಈ ಶಸ್ತ್ರಚಿಕಿತ್ಸೆ ಸಕಾಲದಲ್ಲಿ ನಡೆಯದೇ ಹೋಗಿದ್ದರೆ ಮಗು ಕೇವಲ 2ರಿಂದ 3 ವಾರಗಳ ಕಾಲ ಮಾತ್ರ ಬದುಕುತ್ತಿತ್ತು. 
ಡಾ| ಲೆಸ್ಲಿ ಲೂಯಿಸ್‌, ಶಿಶುರೋಗ ತಜ್ಞರು

ಜೀವ ಉಳಿಯಿತು; ಆರ್‌ಪಿಎಸ್‌ಕೆ ನೆರವಾಯಿತು
ಕೆಎಂಸಿಯ ವೈದ್ಯರು ಮಗನ ಜೀವ ಉಳಿಸಿದರು. ಇಲ್ಲಿನ ವೈದ್ಯರು, ದಾದಿಯರು ನಮ್ಮ ಮಗುವಿನ ಜೀವ ಉಳಿಸಲು ಕಷ್ಟಪಟ್ಟಿದ್ದಾರೆ. ಸರಕಾರಿ ಆಸ್ಪತ್ರೆಯಿಂದ ನಮ್ಮನ್ನು ಕೂಡಲೇ ಕೆಎಂಸಿಗೆ ಕಳುಹಿಸಿದ ವೈದ್ಯರಿಗೂ ಕೃತಜ್ಞತೆಗಳು. ಶಸ್ತ್ರಚಿಕಿತ್ಸೆಗೆ ಖರ್ಚಾಗುವ 4-5 ಲ. ರೂ. ಭರಿಸಲು ಅಸಾಧ್ಯವಾಗಿತ್ತು. ಆದರೆ ರಾಷ್ಟ್ರೀಯ ಬಾಲಸ್ವಾಸ್ಥ್ಯ ಯೋಜನೆ (ಆರ್‌ಬಿಎಸ್‌ಕೆ) ಯಿಂದಾಗಿ ನಮಗೆ ಶಸ್ತ್ರಚಿಕಿತ್ಸೆಯ ವೆಚ್ಚದ ಹೊರೆ ಬೀಳಲಿಲ್ಲ. 
ಹರೀಶ್‌, ಶಸ್ತ್ರಚಿಕಿತ್ಸೆಗೊಳಗಾದ ಹಸುಳೆಯ ತಂದೆ 

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

11(1

Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

7(1

Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

Udupi–Kanchi

Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.