ಮತದಾರರ ತೀರ್ಪು ಬಿಜೆಪಿ ಪರ : ಲಾಲಾಜಿ
Team Udayavani, Apr 28, 2018, 7:50 AM IST
ಕಾಪು: ಕೇಂದ್ರದಲ್ಲಿ ಆಡಳಿತದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಜನಪ್ರಿಯತೆ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಸಿದ್ಧರಾಮಯ್ಯ ಸರಕಾರದ ವೈಫಲ್ಯ ಎರಡನ್ನೂ ಜನ ತುಲನೆ ಮಾಡಿ ಮತಚಲಾಯಿಸಲಿದ್ದಾರೆ. ಮತದಾರರ ತೀರ್ಪು ಬಿಜೆಪಿಗೆ ಪರವಾಗಿ ಇರಲಿದ್ದು, ಈ ಬಾರಿ ಬಿಜೆಪಿಯ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್. ಮೆಂಡನ್ ಹೇಳಿದರು.
ಕಾಪು ಕ್ಷೇತ್ರ ಬಿಜೆಪಿಯ ಮಹಿಳಾ ಜನಪ್ರತಿನಿಧಿಗಳು ಪ್ರಾರಂಭಿಸಿರುವ ಮನೆ ಮನೆ ಭೇಟಿ ಮತ್ತು ಮನೆ ಮನೆ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಜನಪ್ರತಿನಿಧಿಗಳೇ ಹೆಚ್ಚಾಗಿರುವುದೂ ನಮಗೆ ಲಾಭವಾಗಲಿದೆ. ಬಿಜೆಪಿಯಲ್ಲಿ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗಿದೆ. ಇದುವೇ ಬಿಜೆಪಿಗೆ ವರದಾನವಾಗಲಿದೆ ಎಂದರು.
ಕಾಪು ಕ್ಷೇತ್ರದಲ್ಲಿ ಈ ಹಿಂದೆ ನಾನು ಶಾಸಕನಾಗಿದ್ದಾಗ ಜನರೊಂದಿಗೆ ಇರಿಸಿದ್ದ ಸಂಪರ್ಕವನ್ನೇ ಮತ್ತೆ ಮುಂದುವರಿಸಿಕೊಂಡು ಬರಲಾಗುತ್ತಿದೆ. ಅಂದಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಈಗಲೂ ನೆನಪಿಸಿಕೊಳ್ಳುತ್ತಿದ್ದಾರೆ. ಅದನ್ನೇ ಮತವಾಗಿ ಪರಿವರ್ತಿಸುವ ಕೆಲಸ ಮಹಿಳಾ ಜನಪ್ರತಿನಿಧಿಗಳಿಂದ ನಡೆಯಬೇಕಿದೆ ಎಂದರು.
ಉಡುಪಿ ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಾ.ಪಂ. ಸದಸ್ಯರಾದ ಶಶಿಪ್ರಭಾ ಶೇಟ್ಟಿ, ನೀತಾ ಗುರುರಾಜ್, ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್, ಕಟಪಾಡಿ ಗ್ರಾ.ಪಂ. ಸದಸ್ಯೆ ವೀಣಾ ಶೆಟ್ಟಿ, ಪುರಸಭಾ ಸದಸ್ಯೆ ಮೋಹಿನಿ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.